ಗಂಗೊಳ್ಳಿ: ಮುಳ್ಳಿಕಟ್ಟೆ ಪೆಟ್ರೋಲ್ ಬಂಕ್ ಸಮೀಪ ಸೇತುವೆ ಕಾಮಗಾರಿ ನಿಮಿತ್ತ ಅರಾಟೆ ಹಳೇ ಸೇತುವೆಯಲ್ಲಿ ವಾಹನ ಸಂಚಾರ ಮುಕ್ತಗೊಳಿಸಿ ಹೊಸ ಸೇತುವೆಯಲ್ಲಿ ದ್ವಿಮುಖ ಸಂಚಾರಕ್ಕೆ ಅನುವು ಮಾಡಿ ಕೊಟ್ಟಿರುವುದರಿಂದ ವಾಹನ ಸವಾರರಿಗೆ ತೊಂದರೆ ಆಗುತ್ತಿರುವ ಬಗ್ಗೆ ಶಾಸಕ ಗುರುರಾಜ್ ಗಂಟಿಹೊಳೆ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಸಾರ್ವಜನಿಕರಿಂದ ದೂರು ಬಂದಿದ್ದು, ಹೆದ್ದಾರಿ ಇಲಾಖೆ, ಇಂಜಿನಿಯರ್ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಕೂಡಲೇ ಸ್ಥಳ ಪರಿಶೀಲನೆ ಮಾಡಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ವ್ಯವಸ್ಥೆ ಕಲ್ಪಿಸಲು ಶಾಸಕರು ಸೂಚನೆ ನೀಡಿದ್ದಾರೆ. ಅರಾಟೆ ಸೇತುವೆ ಸೇರಿದಂತೆ 11 ಸೇತುವೆಗಳು ವಾಹನ ಸಂಚಾರಕ್ಕೆ ಯೋಗ್ಯವಲ್ಲ ಎಂಬ ಕಾರಣದಿಂದ ಪ್ರಸ್ತುತ ಅರಾಟೆ ಹಳೇ ಸೇತುವೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ತಜ್ಞರ ತಂಡ ಮತ್ತೊಮ್ಮೆ ಪರಿಶೀಲನೆ ನಡೆಸಿ ಸೇತುವೆಯ ದೃಢತೆ ಮತ್ತು ಸುರಕ್ಷತೆ ಬಗ್ಗೆ ವರದಿ ನೀಡಿದ ಬಳಿಕ ಸೇತುವೆ ದುರಸ್ತಿ ಅಥವಾ ಪುನಾರಚನೆ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ.