More

    ಗಡಿಗ್ರಾಮಗಳ ಕನ್ನಡ ಹೆಸರು ಬದಲಾಯಿಸೋ ಪ್ರಕ್ರಿಯೆ ಕೈಬಿಡಿಸಿ: ಲಿಂಬಾವಳಿ

    ಬೆಂಗಳೂರು : ಕರ್ನಾಟಕ-ಕೇರಳ ಗಡಿ ಪ್ರದೇಶಗಳಾದ ಕಾಸರಗೋಡು ಮತ್ತು ಮಂಜೇಶ್ವರ ಸೇರಿದಂತೆ ಕೆಲವು ತಾಲ್ಲೂಕುಗಳ ಕನ್ನಡ ಗ್ರಾಮಗಳ ಹೆಸರುಗಳನ್ನು ಮಲೆಯಾಳಿ ಭಾಷೆಗೆ ಬದಲಾವಣೆ ಮಾಡಲು ಕೇರಳ ಸರ್ಕಾರ ಮುಂದಾಗಿರುವ ಬಗ್ಗೆ ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಗಮನ ಸೆಳೆದಿದ್ದಾರೆ.

    ಈ ಬಗ್ಗೆ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಲಿಂಬಾವಳಿ, ಯಡಿಯೂರಪ್ಪನವರು ಕೇರಳ ರಾಜ್ಯದ ಮುಖ್ಯಮಂತ್ರಿಗಳಿಗೆ ಪತ್ರ ಬರೆದು, ಕನ್ನಡ ಗ್ರಾಮಗಳ ಕನ್ನಡದ ಹೆಸರುಗಳನ್ನು ಮಲೆಯಾಳಿ ಭಾಷೆಗೆ ಬದಲಾವಣೆ ಮಾಡುವ ಪ್ರಕ್ರಿಯೆಯನ್ನು ಕೈಬಿಡಬೇಕೆಂದು ಒತ್ತಾಯಿಸಲು ಕೋರಿದ್ದಾರೆ.

    ಇದನ್ನೂ ಓದಿ: ಉಗ್ರ ದಾಳಿ ಬೆನ್ನಲ್ಲೇ ಮತ್ತೆ ಎರಡು ಡ್ರೋನ್ ಹಾರಾಟ! ಗುಂಡು ಹಾರಿಸಿ ಓಡಿಸಿದ ಭಾರತೀಯ ಸೇನೆ

    ಸದರಿ ಪ್ರದೇಶಗಳಲ್ಲಿ ಕನ್ನಡ ಭಾಷಿಕರು ಅಧಿಕ ಸಂಖ್ಯೆಯಲ್ಲಿದ್ದು, ಶತಶತಮಾನಗಳಿಂದಲೂ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಇಲ್ಲಿನ ಜನ ರೂಢಿಸಿಕೊಂಡಿದ್ದಾರೆ. ಕನ್ನಡ ಪರಂಪರೆಯನ್ನು ಪಾಲಿಸಿಕೊಂಡು ಬಂದಿರುವ ಜನರ ಭಾವನೆಗಳಿಗೆ ಕೇರಳ ಸರ್ಕಾರದ ನಿರ್ಣಯದಿಂದ ಧಕ್ಕೆಯಾಗಿದೆ. ಪ್ರತಿಯೊಂದು ಗ್ರಾಮದ ಹೆಸರೂ ಅಲ್ಲಿನ ಜನರೊಂದಿಗೆ ಭಾವನಾತ್ಮಕ ಸಂಬಂಧ ಹೊಂದಿರುತ್ತದೆ ಮತ್ತು ಅಲ್ಲಿನ ಸ್ಥಳೀಯ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತದೆ. ಆ ಹೆಸರಿನಲ್ಲಿ ಒಂದು ಜನಸಂಸ್ಕೃತಿ ಬೆಳೆದಿರುತ್ತದೆ. ಇದನ್ನು ಬದಲಾಯಿಸುವುದರಿಂದ ಆ ಜನಸಂಸ್ಕೃತಿಗೆ ಪೆಟ್ಟು ಬೀಳುತ್ತದೆ ಎಂದಿದ್ದಾರೆ.

    ಈ ಗ್ರಾಮಗಳ ಹೆಸರುಗಳನ್ನು ಬದಲಾವಣೆ ಮಾಡುವ ಬಗ್ಗೆ ಅಲ್ಲಿನ ಸರ್ಕಾರ ಆ ಗ್ರಾಮಗಳ ಜನರೊಂದಿಗೆ ಚರ್ಚಿಸಿ ಕನಿಷ್ಠ ಅವರ ಅಭಿಪ್ರಾಯ ಸಂಗ್ರಹಿಸುವ ಕೆಲಸವನ್ನೂ ಮಾಡದೆ ಏಕಪಕ್ಷೀಯವಾಗಿ ನಿರ್ಧಾರ ಕೈಗೊಂಡಿದೆ. ಹಾಗಾಗಿ, ಕನ್ನಡದ ಅಸ್ಮಿತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಾವು ಕೇರಳ ಸರ್ಕಾರದ ಈ ಕ್ರಮವನ್ನು ಬಲವಾಗಿ ವಿರೋಧಿಸಬೇಕಾಗಿದೆ. ಇದೊಂದು ಭಾವನಾತ್ಮಕ, ಸೂಕ್ಷ್ಮ ವಿಚಾರವಾಗಿರುವುದರಿಂದ ತಕ್ಷಣವೇ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಚಿವ ಲಿಂಬಾವಳಿ ಕೋರಿದ್ದಾರೆ.

    ಮಾಧುರಿ, ರವೀನಾ ಒಂದೇ ವೇದಿಕೆಯಲ್ಲಿ! ಡ್ಯಾನ್ಸ್​​ ನಂಬರ್​ಗಳ ಎಕ್ಸ್​​ಚೇಂಜ್!

    “ಶಾಲೆಗಳು ತೆರೆಯಬೇಕೆಂದರೆ ಮಕ್ಕಳಿಗೆ ಕರೊನಾ ಲಸಿಕೆ ಲಭ್ಯವಾಗಬೇಕು”

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts