More

    ತಪ್ಪಿತಸ್ಥನ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ವಹಿಸಿ

    ಕುಶಾಲನಗರ: ಬಿಜೆಪಿ ಕಾರ್ಯಕರ್ತ ಹರ್ಷ ಎಂಬಾತ ಕಂಠ ಪೂರ್ತಿ ಕುಡಿದು ದಲಿತ ಯುವಕ ಸಂತೋಷ್ ಎಂಬಾತನನ್ನು ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಘಟನೆ ನಡೆದ ಸ್ಥಳದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

    ಹತ್ಯೆ ಮಡಿದವ ಬಿಜೆಪಿಯ ಸಕ್ರಿಯ ಕಾರ್ಯಕರ್ತನಾಗಿದ್ದು, ಆತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಂದರ್ ರಾಜ್ ಅವರಿಗೆ ಮನವಿ ಮಾಡಿದರು.

    ಕಾಂಗ್ರೆಸ್ ನಗರಾಧ್ಯಕ್ಷ ಪ್ರಮೋದ್ ಮುತ್ತಪ್ಪ ಮಾತನಾಡಿ, ಬಿಜೆಪಿ ಕಾರ್ಯಕರ್ತರು ಮೊದಲಿನಿಂದಲೂ ಈ ರೀತಿಯ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದಾರೆ. ಜತೆಗೆ ಸಮಾಜಘಾತುಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಕುಶಾಲನಗರ ಸುತ್ತಮುತ್ತ ಆಕ್ರಮ ಜೂಜು ಅಡ್ಡೆ, ಕ್ರಿಕೆಟ್ ಬೆಟ್ಟಿಂಗ್ ನಡೆಸುವುದರಲ್ಲಿ ಮುಂದಿದ್ದಾರೆ ಎಂದು ಆರೋಪಿಸಿದರು.

    ಪ್ರತಿಭಟನಾನಿರತರನ್ನು ಸಮಾಧಾನಪಡಿಸಿ ಮಾತನಾಡಿದ ಸುಂದರ್‌ರಾಜ್, ಈಗಾಗಲೇ ಅಟ್ರಾಸಿಟಿ ಕಾಯ್ದೆಯಡಿ ದೂರು ದಾಖಲು ಮಾಡಿಕೊಳ್ಳಲಾಗಿದೆ. ಇದರಿಂದ ಸಂತೋಷ್ ಕುಟುಂಬಕ್ಕೆ ಶೀಘ್ರ 8.25 ಲಕ್ಷ ರೂ. ಪರಿಹಾರ ಹಣ ಸಿಗಲಿದೆ. ಘಟನೆ ವಿವರವನ್ನು ವರಿಷ್ಠಾಧಿಕಾರಿ ಗಮನಕ್ಕೆ ತರಲಾಗುವುದು. ಅಕ್ರಮ ಚಟುವಟಿಕೆಗಳ ಬಗ್ಗೆ ಸ್ಥಳೀಯ ಪೊಲೀಸರೊಂದಿಗೆ ಚರ್ಚಿಸಿ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

    ಕೆಪಿಸಿಸಿ ಸದಸ್ಯ ಮಂಜುನಾಥ್ ಗುಂಡೂರಾವ್, ಮುಖಂಡರಾದ ನಂಜುಂಡಸ್ವಾಮಿ, ಶಿವಶಂಕರ್, ಕೆ.ಬಿ.ರಾಜು, ಮಹದೇವ್, ಕಿರಣ್ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts