More

    ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ

    ಚಿಕ್ಕಮಗಳೂರು: ಬಹುಜನ ಸಮಾಜ ಪಕ್ಷದ ಕಾರ್ಯಕರ್ತರು ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಯುದ್ಧದಂತೆ ನಡೆಸಿ ಪಕ್ಷದ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಬಿಎಸ್‌ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಜಾಕೀರ್ ಹುಸೇನ್ ಕರೆನೀಡಿದರು.

    ನಗರದ ಬಿಎಸ್‌ಪಿ ಕಚೇರಿಯಲ್ಲಿ ಸೋಮವಾರ ನಡೆದ ಪಕ್ಷದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಪಕ್ಷದ ಸಂಸ್ಥಾಪಕ ದಾದಾಸಾಹೇಬ್ ಕಾನ್ಸೀರಾಮ್ ಅವರ ಆಶಯ, ಕನಸುಗಳನ್ನು ನನಸಾಗಿಸುವ ನಿಟ್ಟಿನಲ್ಲಿ ಲೋಕಸಭಾ ಚುನಾವಣೆಯಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಿಸಲು ನಾವೆಲ್ಲರೂ ಹೋರಾಟ ನಡೆಸಬೇಕಿದೆ ಎಂದು ಹೇಳಿದರು.
    ದೇಶದಲ್ಲಿ ಪಕ್ಷ ನಡೆಸುತ್ತಿರುವ ಸಾಮಾಜಿಕ ಪರಿವರ್ತನೆ ಮತ್ತು ಸ್ವಾಭಿಮಾನದ ಚಳವಳಿ ಉಳಿದು ಮುಂದುವರೆಯಬೇಕಾದರೆ ಕಾರ್ಯಕರ್ತರು ಬಿಎಸ್‌ಪಿಯನ್ನು ಗೆಲ್ಲಿಸಬೇಕು. ಕಾರ್ಯಕರ್ತರು ತಮ್ಮ ಎಲ್ಲ ಕೆಲಸಗಳನ್ನು ಬದಿಗೊತ್ತಿ ಚುನಾವಣೆಯಲ್ಲಿ ಕೆಲಸ ಮಾಡಬೇಕು. ಸದಾ ಶೋಷಿತರು, ಬಡವರು, ಹಿಂದುಳಿದವರು, ಅಲ್ಪಸಂಖ್ಯಾತರು ಹಾಗೂ ದೀನದಲಿತರ ಪರವಾಗಿ ದುಡಿಯುತ್ತಿರುವ ಪಕ್ಷದ ಅಭ್ಯರ್ಥಿ ಕೆ.ಟಿ.ರಾಧಾಕೃಷ್ಣ ಅವರ ಕೈ ಬಲಪಡಿಸಬೇಕು ಎಂದು ಮನವಿ ಮಾಡಿದರು
    ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ ಮಾತನಾಡಿ, ಪಕ್ಷದ ಅಭ್ಯರ್ಥಿ ಕೆ.ಟಿ.ರಾಧಾಕೃಷ್ಣ ಅವರು ಕಳೆದ ನಾಲ್ಕು ದಶಕಗಳಿಂದ ಸಲ್ಲಿಸಿರುವ ಸೇವೆ, ಹೋರಾಟಗಳನ್ನು ಶೋಷಿತ ವರ್ಗದವರು ಗುರುತಿಸಬೇಕು. ಈ ಮೂಲಕ ಅವರ ಗೆಲುವಿಗಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು
    ಬಿಎಸ್‌ಪಿ ರಾಜ್ಯ ಕಾರ್ಯದರ್ಶಿ ಜಾಕೀರ್ ಅಲಿಖಾನ್ ಮಾತನಾಡಿ, ಈ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸಬೇಕಾದರೆ ದಲಿತ ಪರ ಸಂಘಟನೆಗಳೆಲ್ಲವೂ ಒಗ್ಗೂಡಬೇಕು. ಶೋಷಿತರು ಸಂಘಟಿತರಾಗಿ ಅಭ್ಯರ್ಥಿ ಪರ ದುಡಿಯಬೇಕು ಎಂದು ಹೇಳಿದರು.
    ಪಕ್ಷದ ಅಭ್ಯರ್ಥಿ ಕೆ.ಟಿ.ರಾಧಾಕೃಷ್ಣ ಮಾತನಾಡಿ, ತಾವು ಕೈಗೊಂಡಿರುವ ಸಾಮಾಜಿಕ ಪರಿವರ್ತನೆ ಮತ್ತು ಸ್ವಾಭಿಮಾನದ ಚಳವಳಿಯಲ್ಲಿ ಕಾರ್ಯಕರ್ತರು ಪಾಲ್ಗೊಂಡು ತಮಗೆ ಶಕ್ತಿ ತುಂಬುವ ಕೆಲಸವನ್ನು ಮಾಡಬೇಕು ಎಂದು ಮನವಿ ಮಾಡಿದರು
    ಸಭೆಯಲ್ಲಿ ಲೋಕಸಭಾ ಕ್ಷೇತ್ರ ಸಮಿತಿ ಸಂಯೋಜಕರಾದ ಪಿ.ಪರಮೇಶ್ವರ್, ಕೆ.ಆರ್.ಗಂಗಾಧರ್, ಜಿಲ್ಲಾ ಸಂಯೋಜಕ ಕೆ.ಎಂ.ಗೋಪಾಲ್, ಯು.ಬಿ.ಮಂಜಯ್ಯ, ಜಿಲ್ಲಾ ಉಪಾಧ್ಯಕ್ಷರಾದ ಕೆ.ಎಸ್.ಮಂಜುಳಾ, ಬಿ.ಎಂ.ಶAಕರ್, ಪಿ.ಕೆ.ಮಂಜುನಾಥ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts