More

    ಹಿಂದುಗಳ ಹತ್ಯೆ ಗಂಭೀರವಾಗಿ ಪರಿಗಣಿಸಿ

    ಶಿವಮೊಗ್ಗ: ರಾಜ್ಯದಲ್ಲಿ ನಡೆಯುತ್ತಿರುವ ಹಿಂದುಗಳು ಹತ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಬೇಕು. ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಿ ಹಿಂದುಗಳನ್ನು ರಕ್ಷಿಸಬೇಕು. ವಕ್ ಬೋರ್ಡ್ ಕಾಯ್ದೆ ರದ್ದುಪಡಿಸಬೇಕು ಎಂದು ಆಗ್ರಹಿಸಿ ಹಿಂದು ರಾಷ್ಟç ಜಾಗೃತಿ ಆಂದೋಲನದ ಕಾರ್ಯಕರ್ತರು ಶುಕ್ರವಾರ ಜಿಲ್ಲಾಽಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ರಾಜ್ಯದಲ್ಲಿ ಕಾಂಗ್ರೆಸ್ ಅಽಕಾರಕ್ಕೆ ಬಂದ ಬಳಿಕ ಹಿಂದುಗಳ ಮೇಲೆ ಆಕ್ರಮಣಗಳು ಹೆಚ್ಚುತ್ತಿವೆ. ಹಲವರ ಹತ್ಯೆಯೂ ಆಗಿದೆ. ಹಿಂದು ಪರ ಸಂಘಟನೆಗಳ ಕಾರ್ಯಕರ್ತರು, ಮುಖಂಡರನ್ನೆಲÃ ಗುರಿಯಾಗಿಸಿಕೊಳ್ಳಲಾಗಿದೆ. ಅದೇ ಸಮಯದಲ್ಲಿ ಹಿಂದುಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಸುಳ್ಳು ದೂರುಗಳೂ ದಾಖಲಾಗುತ್ತಿವೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
    ಜೈನಮುನಿ ಆಚಾರ್ಯ ಕಾಮಕುಮಾರ ನಂದಿಮಹಾರಾಜರು ಮತ್ತು ಯುವ ಬ್ರಿಗೇಡ್‌ನ ವೇಣುಗೋಪಾಲ್ ಹತ್ಯೆ ಸೇರಿದಂತೆ ಹಲವಾರು ಘಟನೆಗಳು ಹಿಂದು ಸಮಾಜದಲ್ಲಿ ಭಯದ ವಾತಾವರಣ ನಿರ್ಮಾಣ ಮಾಡಿವೆ. ಬೆಂಗಳೂರಿನಲ್ಲಿ ಪ್ರತಿ ಭಾನುವಾರ ನಡೆಯುತ್ತಿದ್ದ ನಾಗರಕಟ್ಟೆಯ ಪೂಜೆ ಆಯೋಜನೆ ಮಾಡುತ್ತಿದ್ದವರಿಗೂ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ಬಕ್ರೀದ್ ಸಮಯದಲ್ಲಿ ಬಾದಾಮಿ, ಶಿಕಾರಿಪುರ, ಶಿರಸಿ ಸೇರಿದಂತೆ ಹಲವೆಡೆ ಅಕ್ರಮವಾಗಿ ಗೋಹತ್ಯೆ ನಡೆದಿದೆ. ಹತ್ಯೆ ನಡೆಸಿದ ಗೋವಿನ ಅಂಗಾAಗಗಳು, ಮೂಲೆಗಳನ್ನು ಹಿಂದುಗಳ ಶ್ರದ್ಧಾ ಕೇಂದ್ರ ಹಾಗೂ ಕೆಲವರ ಮನೆ ಎದುರು ಹಾಕಲಾಗಿದೆ. ಇಂತವರನ್ನು ಪತ್ತೆ ಮಾಡಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದರು.
    ವಿವಿಧ ಜಿಲ್ಲೆಗಳಲ್ಲಿ ವಕ್ ಬೋರ್ಡ್ನವರು ಕಾನೂನನ್ನು ದುರುಪಯೋಗಪಡಿಸಿಕೊಂಡು ಸರ್ಕಾರಿ ಮತ್ತು ಖಾಸಗಿ ಜಮೀನುಗಳನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳುತ್ತಿದ್ದಾರೆ. ದೇಶಾದ್ಯಂತ ಸುಮಾರು 8 ಲಕ್ಷ ಎಕರೆ ಜಮೀನನ್ನು ಇದೇ ರೀತಿ ಕಬಳಿಸಲಾಗಿದೆ ಇದು ಲ್ಯಾಂಡ್ ಜಿಹಾದ್ ಆಗಿದೆ. ಹೀಗಾಗಿ ಈ ಕಾನೂನನ್ನು ರದ್ದುಗೊಳಿಸಬೇಕೆಂದು ಒತ್ತಾಯಿಸಿದರು.
    ಸಂಚಾಲಕ ವಿಜಯ್ ರೇವಣಕರ್, ವಿಎಚ್‌ಪಿ ಮುಖಂಡ ನಟರಾಜ್, ಕ್ಷತ್ರೀಯ ಮರಾಠ ಪರಿಷತ್‌ನ ಮುಖಂಡ ದಿನೇಶ್ ಚವ್ಹಾಣ್, ಪ್ರಮುಖರಾದ ನವೀನ್, ಶಿವಶಂಕರ ನಾಯ್ಕ, ಪ್ರಕಾಶ್, ಜಗದೀಶ್, ಪ್ರಭಾ ಕಾಮತ್, ಸುಧಾ ಕಾಮತ್, ಮುಕುಂದ, ಸೌಮ್ಯಾ ಮೊಗೇರ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts