ಪ್ರಯಾಣಿಕರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸುಲಿಗೆ; ಇಬ್ಬರ ಬಂಧನ

Crime
Published on

ಬೆಂಗಳೂರು: ಪ್ರಯಾಣಿಕರನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಸುಲಿಗೆ ಮಾಡುತ್ತಿದ್ದ ಇಬ್ಬರು ಆಟೋ ಚಾಲಕರನ್ನು ಉಪ್ಪಾರಪೇಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಲ್ಲಾ ಬಕಾಶ್ ಮತ್ತು ನದೀಂ ಬಂಧಿತರು.

ಆರೋಪಿಗಳಿಂದ 4 ಸಾವಿರ ನಗದು. ಆಟೋ ಸೇರಿ 1.10 ಲಕ್ಷ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪಶ್ಚಿಮ ವಿಭಾಗದ ಉಪ್ಪಾರಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್‌ಗಳು, ಹಣ ಹಾಗೂ ಇತರೆ ದಾಖಲಾತಿಗಳನ್ನು ಸುಲಿಗೆ ಮಾಡಿದ್ದ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ತನಿಖೆ ಕೈಗೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ಸುಲಿಗೆಕೋರರನ್ನು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ.

ವಿಚಾರಣೆ ವೇಳೆ ಆರೋಪಿಗಳು ಬಾರ್ ಆ್ಯಂಡ್ ರೆಸ್ಟೋರೆಂಟ್‌ಗಳಿಂದ ತಮ್ಮ ರೂಮ್‌ಗಳಿಗೆ ಬಿಡುವಂತೆ ಆಟೋವನ್ನು ಬಾಡಿಗೆಗೆ ಪಡೆದು ಹೋಗುವ ಮತ್ತು ಆಟೋ ಬಾಡಿಗೆಗೆ ಬೇಕೆಂದು ಬರುವ ವ್ಯಕ್ತಿಗಳನ್ನು ಆಟೋದಲ್ಲಿ ರಾತ್ರಿ ವೇಳೆ ಕತ್ತಲೆ ಇರುವ ಮತ್ತು ಯಾರು ಇಲ್ಲದ ಸ್ಥಳಗಳಿಗೆ ಕರೆದುಕೊಂಡು ಹೋಗಿ ಸುಲಿಗೆ ಮಾಡುತ್ತಿರುವುದು ತನಿಖೆಯಿಂದ ಪತ್ತೆಯಾಗಿದೆ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net