More

    ಸಮಾಜ ಸಂಘಟಿಸುವವರಿಗೆ ಪ್ರೋತ್ಸಾಹ ಅಗತ್ಯ: ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಂ ಸಲಹೆ

    ಮಂಡ್ಯ: ಸಂಘಟನೆಯಿಂದ ಸಮಾಜಕ್ಕೆ ಶಕ್ತಿ ಬರುತ್ತದೆ. ಆದರೆ, ಹಲವು ಸಮಾಜಗಳು ಸಂಘಟನೆಗೊಳ್ಳದೆ ಆರ್ಥಿಕವಾಗಿ ಸದೃಢಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಅಶೋಕ್ ಜಯರಾಂ ಹೇಳಿದರು.
    ನಗರದ ಸೇವಾಕಿರಣ ಸಭಾಂಗಣದಲ್ಲಿ ರಾಷ್ಟ್ರೀಯ ತೇಲಿ ಸಹೋ ಮಹಾ ಸಂಘಟನೆ, ನಿವೃತ್ತ ಶಿಕ್ಷಕ ಕೆ.ಮಾಯಿಗಶೆಟ್ಟಿ ಸೇವಾ ಸಮಿತಿ, ಮಂಡ್ಯ ಅಮೃತ ಲಯನ್ಸ್ ಸಂಸ್ಥೆ ಸಹಯೋಗದಲ್ಲಿ ವಾಲ್ಮೀಕಿ ಜಯಂತಿ ಅಂಗವಾಗಿ ಆಯೋಜಿಸಿದ್ದ ಪ್ರತಿಭಾ ಪುರಸ್ಕಾರ ಮತ್ತು ಗ್ರಾಮ ಪಂಚಾಯಿತಿ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಛಿದ್ರ ಛಿದ್ರವಾಗಿರುವ ಸಣ್ಣ ಸಮಾಜಗಳನ್ನು ಒಗ್ಗೂಡಿಸುವುದು ಕಷ್ಟಸಾಧ್ಯ. ಆದರೆ, ಇಂತಹ ಪ್ರಯತ್ನ ಮಾಡುವವರಿಗೆ ಪ್ರೋತ್ಸಾಹ, ಬೆಂಬಲ ನೀಡುವ ಅಗತ್ಯ ಇದೆ. ಆರ್ಥಿಕವಾಗಿ ಹಿಂದುಳಿದ ಸಮಾಜಗಳ ಕುಟುಂಬಸ್ಥರು ತಮ್ಮ ಮಕ್ಕಳಿಗೆ ಉನ್ನತ ಶಿಕ್ಷಣ ಕೊಡಿಸಲು ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಹೇಳಿದರು.
    ಬಿಜೆಪಿ ಮುಖಂಡ ಎಚ್.ಆರ್.ಅರವಿಂದ್ ಮಾತನಾಡಿ, ಇಂದಿನ ದಿನಗಳಲ್ಲಿ ಸಾಧನೆ ಮಾಡಿದವರಿಗೆ ಎಲ್ಲ ಕ್ಷೇತ್ರಗಳಲ್ಲೂ ಮಾನ್ಯತೆ ಲಭ್ಯವಾಗುತ್ತದೆ. ಸಣ್ಣ ಸಮುದಾಯಗಳು ಒಗ್ಗೂಡುವ ನಿಟ್ಟಿನಲ್ಲಿ ಸಾಗಬೇಕಿದೆ ಎಂದು ಹೇಳಿದರು.
    ಪ್ರಧಾನಿ ನರೇಂದ್ರ ಮೋದಿ ಅವರು ಒಂದೇ ಒಂದು ಕಪ್ಪು ಚುಕ್ಕಿ ಇಲ್ಲದೆ ಆಡಳಿತ ನಡೆಸುತ್ತಿದ್ದಾರೆ. ಇಂತಹ ನಾಯಕರ ನಾಯಕತ್ವದಲ್ಲಿ ದೇಶವು ಮತ್ತಷ್ಟು ಪ್ರಗತಿ ಕಂಡು, ವಿಶ್ವವೇ ಮೆಚ್ಚುವಂತೆ ಸಾಧನೆ ಮಾಡುತ್ತಿದೆ. ಹಿಂದುಳಿದ ವರ್ಗಗಳ ಸಮಾಜದ ವಿದ್ಯಾರ್ಥಿಗಳು ಹಿಂಜರಿಕೆ ಬಿಟ್ಟು, ಶೈಕ್ಷಣಿಕವಾಗಿ, ಉದ್ಯಮಿಗಳಾಗಿ, ಸಾಧನೆ ಮಾಡಲು ಮುಂದಾಗಬೇಕು ಎಂದು ಕಿವಿಮಾತು ಹೇಳಿದರು.
    ಜಿಲ್ಲಾ ಗಾಣಿಗ ಸಮಾಜದಿಂದ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಪ್ರತಿಭಾವಂತ ವಿದ್ಯಾರ್ಥಿಗಳು, ಗ್ರಾಮ ಪಂಚಾಯಿತಿ ಸದಸ್ಯರನ್ನು ಅಭಿನಂದಿಸಲಾಯಿತು.
    ಎಲ್ಲರೊಳಗೊಂದಾಗು ಮಂಕುತಿಮ್ಮ ಟ್ರಸ್ಟ್ ಅಧ್ಯಕ್ಷ ಎಂ.ವಿನಯ್‌ಕುಮಾರ್, ರಾಷ್ಟ್ರೀಯ ತೇಲಿ ಸಹೋ ಸಂಘಟನೆ ಯುವ ಘಟಕದ ರಾಜ್ಯಾಧ್ಯಕ್ಷ ಎಂ.ಲೋಕೇಶ್, ಭಾಗ್ಯಾ, ರಾಜಣ್ಣ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts