ಸಿನಿಮಾ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಚಳ್ಳಕೆರೆ: ತಾಲೂಕಿನ ವಾಸವಿ ಯುವ ಜನ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.90ಕ್ಕಿಂತ ಹೆಚ್ಚು, ಪಿಯು ಪರೀಕ್ಷೆಯಲ್ಲಿ ಶೇ.85ಕ್ಕಿಂತ ಹೆಚ್ಚು ಅಂಕ ಪಡೆದ ಅರ್ಹರು ಮೇ 31ರೊಳಗೆ, ವಾಸವಿ ಯುವಜನ ಸಂಘ, ವಾಸವಿ ಮಹಲ್, ಬೆಂಗಳೂರು ರಸ್ತೆ. ಈ ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದು.

ಜೂ.3ರ ಬೆಳಗ್ಗೆ 10.30ಕ್ಕೆ ವಾಸವಿ ಮಹಲ್‌ನಲ್ಲಿ ನಡೆಯಲಿರುವ ಪ್ರತಿಭಾ ಪುರಸ್ಕಾರದಲ್ಲಿ ವಿದ್ಯಾರ್ಥಿಗಳನ್ನು ಅಭಿನಂದಿಸುವ ಕಾರ್ಯಕ್ರಮಕ್ಕೆ ಶಾಸಕರಾದ ಟಿ.ರಘುಮೂರ್ತಿ, ಡಿ.ಸುಧಾಕರ್, ಕೆ.ಸಿ.ವೀರೇಂದ್ರ ಪಪ್ಪಿ ಚಾಲನೆ ನೀಡಲಿದ್ದಾರೆ.

ಜಿಲ್ಲಾ ಆರ್ಯ ವೈಶ್ಯ ಮಹಾಸಭಾ ಅಧ್ಯಕ್ಷ ಎ.ಎನ್.ಚಿದಾನಂದ ಗುಪ್ತ, ತಾಲೂಕು ವಾಸವಿ ಯುವಜನ ಸಂಘ ಅಧ್ಯಕ್ಷ ಆರ್.ಚೇತನ್‌ಕುಮಾರ್, ತಾಲೂಕು ಆರ್ಯ ವೈಶ್ಯ ಸಂಘದ ಅಧ್ಯಕ್ಷ ಜಿ.ಎಂ.ಕೃಷ್ಣಮೂರ್ತಿ ಭಾಗವಹಿಸಲಿದ್ದಾರೆ.


Latest Posts

ಲೈಫ್‌ಸ್ಟೈಲ್