

ಬಂಟ್ವಾಳ:ಊರಿನ ವಿದ್ಯಾಸಂಸ್ಥೆಯ ಬೆಳವಣಿಗೆಗೆ ಊರಿನವರ ಸಹಕಾರ ಅತಿಮುಖ್ಯ. ಶಿಕ್ಷಣ ಕೇವಲ ಪಠ್ಯದಿಂದ ಮಾತ್ರವೇ ದೊರಕಲಾರದು ಎಂದು ಕಡೇಶಿವಾಲಯ ಗ್ರಾಪಂ ಅಧ್ಯಕ್ಷೆ ಭಾರತಿ ಸುರೇಂದ್ರ ರಾವ್ ಹೇಳಿದರು.
ಕಡೇಶಿವಾಲಯದ ಶೇರಾ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕಡೇಶಿವಾಲಯ ಗ್ರಾಪಂ ಮಾಜಿ ಅಧ್ಯಕ್ಷ ಸುರೇಶ್ ಬನಾರಿ ಮಾತನಾಡಿದರು. ಬಂಟ್ವಾಳ ರೋಟರಿ ಕ್ಲಬ್ ಮಾಜಿ ಅಧ್ಯಕ್ಷ ಪುಷ್ಪರಾಜ್ ಹೆಗ್ಡೆ, ಉದ್ಯಮಿ ಗಂಗಾಧರ್ ಶೇರಾ, ಬಿರುವೆರ್ ಕಡೇಶಿವಾಲಯದ ಅಧ್ಯಕ್ಷ ವಿದ್ಯಾಧರ ಪೂಜಾರಿ, ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷ ನಾಗೇಶ್ ಕರ್ಕೇರ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಚಂದ್ರಶೇಖರ, ಮಾಜಿ ಅಧ್ಯಕ್ಷ ಚೆನ್ನಪ್ಪ ಎಸ್.ಅಂಚನ್, ಉಪಾಧ್ಯಕ್ಷೆ ಉಷಾ, ಮಾಜಿ ಉಪಾಧ್ಯಕ್ಷ ಮಹಮ್ಮದ್ ಹಬೀಬ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಚಿದಾನಂದ ಮೊದಲಾದವರು ಉಪಸ್ಥಿತರಿದ್ದರು.
ನಿವೃತ್ತರಾದ ಮುಖ್ಯ ಶಿಕ್ಷಕಿ ಕೋಮಲಾಂಗಿ ಬಾಬು ಗೌಡ ದಂಪತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ದೈವ ನರ್ತಕ ಲೋಕಯ್ಯ ಶೇರಾ ಅವರನ್ನು ಗೌರವಿಸಲಾಯಿತು. ಸ್ವಚ್ಛತಾ ಸೇನಾನಿಗಳಾದ ಲಕ್ಷ್ಮೀ, ಪ್ರಮೀಳಾ, ಸವಿತಾ ಅವರನ್ನು ಸನ್ಮಾನಿಸಲಾಯಿತು. ಅಂಗನವಾಡಿ ಹಾಗೂ ಶಾಲಾ ಮಕ್ಕಳಿಗೆ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.
ಪ್ರಭಾರ ಮುಖ್ಯಶಿಕ್ಷಕಿ ಜಯಲಕ್ಷ್ಮೀ ಸ್ವಾಗತಿಸಿದರು. ಶಿಕ್ಷಕ ಗೋಪಾಲ ಗೌಡ ವರದಿ ವಾಚಿಸಿದರು. ಶಿಕ್ಷಕಿ ಸುಮಲತಾ ಬಹುಮಾನಿತರ ಪಟ್ಟಿ ವಾಚಿಸಿದರು. ಶಿಕ್ಷಕಿ ಜೋಸ್ನಾ ಪ್ರಿಯಾ ವಾಸ್ ವಂದಿಸಿದರು. ಶಿಕ್ಷಕಿ ಅನಿತಾ ಕಾರ್ಯಕ್ರಮ ನಿರೂಪಿಸಿದರು.