ಬದುಕು ಹಸನಾಗಲು ಪರಿಶ್ರಮ ಅಗತ್ಯ: ಡಾ.ಮಹಿಮಾ ಆಚಾರ್ಯ

talent

ಗಂಗೊಳ್ಳಿ: ವಿದ್ಯಾರ್ಥಿ ಜೀವನದ ಬದುಕು ಹಸನಾಗಲು ಪ್ರಾಮಾಣಿಕ ಪರಿಶ್ರಮ ಅಗತ್ಯ ಎಂದು ಮನೋವೈದ್ಯೆ ಡಾ.ಮಹಿಮಾ ಆಚಾರ್ಯ ಅಭಿಪ್ರಾಯಪಟ್ಟರು. ಕೋಟೇಶ್ವರದ ಕರ್ನಾಟಕ ಪಬ್ಲಿಕ್ ಸ್ಕೂಲ್‌ನ ಪ್ರೌಢಶಾಲಾ ವಿಭಾಗದಲ್ಲಿ ನೇರಂಬಳ್ಳಿ ಪ್ರಭಾಕರ ಆಚಾರ್ಯ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಸಾಧಕರನ್ನು ಸನ್ಮಾನಿಸಿ ಮಾತನಾಡಿದರು.

ಸಂಸ್ಥೆ ಉಪಪ್ರಾಂಶುಪಾಲ ಚಂದ್ರಶೇಖರ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉದ್ಯಮಿ ರಘುರಾಮ್ ಉಡುಪ ಶುಭಾಶಂಸನೆಗೈದರು. ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ 37ವಿದ್ಯಾರ್ಥಿಗಳಿಗೆ ನೇರಂಬಳ್ಳಿ ಪ್ರಭಾಕರ ಆಚಾರ್ಯ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್ ವತಿಯಿಂದ ಪುರಸ್ಕರಿಸಲಾಯಿತು.
ಎರ್ಮಾಳ್ ಜನಾರ್ದನಯ್ಯ ಹೆಸರಿನಲ್ಲಿ 43 ವರ್ಷದಿಂದ ಕೊಡಮಾಡಿದ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಕನ್ನಡ ಮಾಧ್ಯಮದಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಕೊಡಮಾಡುವ ನಗದು ಪುರಸ್ಕಾರ ಹಾಗೂ ಉದ್ಯಮಿ ರಘುರಾಮ್ ಉಡುಪ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಆಂಗ್ಲ ಮಾಧ್ಯಮದ ಪ್ರಥಮ, ದ್ವಿತೀಯ ಸ್ಥಾನ ವಿದ್ಯಾರ್ಥಿಗಳಿಗೆ ಕೊಡಮಾಡುವ ನಗದು ಪುರಸ್ಕಾರ ವಿತರಿಸಲಾಯಿತು. ಶಿಕ್ಷಕಿ ದಿವ್ಯಪ್ರಭಾ ಸ್ವಾಗತಿಸಿದರು. ಶಿಕ್ಷಕಿ ಸುಧಾಭಾಯಿ ಸಾಧಕ ವಿದ್ಯಾರ್ಥಿಗಳನ್ನು ಪರಿಚಯಿಸಿದರು. ಶಿಕ್ಷಕಿ ಅನುರಾಧ ವಂದಿಸಿ, ರಮಾನಂದ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

Share This Article

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಇಷ್ಟೆಲ್ಲ ಪ್ರಯೋಜನಗಳಿವೆಯಾ? ಇಲ್ಲಿದೆ ಉಪಯುಕ್ತ ಮಾಹಿತಿ….

ಇಂದು ಬಹುತೇಕರು ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಿದ್ದಾರೆ. ಆದರೆ, ಮೊದ ಮೊದಲು ಹೆಚ್ಚಿನ…

ನೀವು ಎಷ್ಟು ಆರೋಗ್ಯವಂತರೆಂದು ತಿಳಿಯಲು ನಿಮ್ಮ ನಾಲಿಗೆ ಬಣ್ಣ ಚೆಕ್​ ಮಾಡಿ! ಈ ಬಣ್ಣದಲ್ಲಿದ್ರೆ ತುಂಬಾ ಡೇಂಜರ್​!

ಪ್ರತಿಯೊಬ್ಬರೂ ಆರೋಗ್ಯವಾಗಿರಲು ಬಯಸುತ್ತಾರೆ. ಏಕೆಂದರೆ, ಆರೋಗ್ಯವೇ ಭಾಗ್ಯ. ಎಲ್ಲ ಇದ್ದು ಆರೋಗ್ಯವೇ ಇಲ್ಲದಿದ್ದರೆ ಏನು ಪ್ರಯೋಜನಾ?…

ನಿಮ್ಮ ಜೀವಕ್ಕೆ ಅಪಾಯವನ್ನುಂಟುಮಾಡುವ ಈ 5 ಜನರ ಬಳಿ ನೀವು ಎಂದಿಗೂ ಹೋಗಬೇಡಿ

ಭಾರತದ ಉತ್ತಮ ವಿದ್ವಾಂಸರಲ್ಲಿ ಚಾಣಕ್ಯರು ಒಬ್ಬರು. ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ಚಾಣಕ್ಯ ತಿಳಿಯದ ವಿಷಯವು…

ಈ ಸುದ್ದಿಗಳನ್ನೂ ಮಿಸ್​ ಮಾಡ್ಬೇಡಿ