

ಹೆಬ್ರಿ: ಮುನಿಯಾಲು ಕರ್ನಾಟಕ ಪಬ್ಲಿಕ್ ಸ್ಕೂಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಸಾಧನೆ ವಾಡಿರುವ ವಿದ್ಯಾರ್ಥಿಗಳಿಗೆ ದಾನಿಗಳು ಮತ್ತು ಹಳೇ ವಿದ್ಯಾರ್ಥಿಗಳಿಂದ ಪ್ರತಿಭಾ ಪುರಸ್ಕಾರ ಹಾಗೂ ಅಮ್ಮನ ನೆರವು ಫೌಂಡೇಶನ್ ವತಿಯಿಂದ ಆರ್ಥಿಕ ನೆರವು ಹಸ್ತಾಂತರ ಕಾರ್ಯಕ್ರಮ ಮುನಿಯಾಲಿನ ಪದ್ಮಾವತಿ ಕಲಾ ಮಂದಿರದಲ್ಲಿ ನಡೆಯಿತು.
ಕಾರ್ಕಳದ ನಿವೃತ್ತ ಲೆಕ್ಕ ಪರಿಶೋಧಕ ಕಮಲಾಕ್ಷ ಕಾಮತ್ ಉದ್ಘಾಟಿಸಿ, ಜೀವನ ಮೌಲ್ಯಗಳನ್ನು ಮಕ್ಕಳಿಗೆ ತಿಳಿಸಿದರು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಹರೀಶ ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. 50 ಕ್ಕೂ ಹೆಚ್ಚು ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ವಿತರಣೆ, ವಿವಿಧ ಕೊಡುಗೆ ನೀಡಿದ ದಾನಿಗಳು, ಶಿಕ್ಷಕರು ಮತ್ತು ಉಪನ್ಯಾಸಕರನ್ನು ಗೌರವಿಸಲಾಯಿತು.
ವರಂಗ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ್ ಆಮೀನ್, ಅಮ್ಮನ ನೆರವು ಫೌಂಡೇಶನ್ ಸ್ಥಾಪಕ ಅವಿನಾಶ್ ಶೆಟ್ಟಿ, ದಾನಿಗಳಾದ ಮುನಿಯಾಲು ಉದಯ ಕುವಾರ್ ಶೆಟ್ಟಿ, ದಿನೇಶ ಪೈ ಮುನಿಯಾಲು, ಗಿರೀಶ ಶೆಟ್ಟಿ ತೆಳ್ಳಾರು, ಗೋಪಿನಾಥ ಭಟ್ ಮುನಿಯಾಲು, ನಿತೇಶ್ ಶೆಟ್ಟಿ, ಸದಾನಂದ ಕುಲಾಲ್, ಪ್ರಜ್ವಲ್, ಶ್ರೀಧರ ಪೈ ಮುನಿಯಾಲು, ಡಾ.ರವಿಕಾಂತ ಮಲ್ಯ, ನಿವೃತ್ತ ಶಿಕ್ಷಕ ವಸಂತ್ ಕಾರ್ಕಳ, ಕೆಪಿಎಸ್ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಉಷಾ ಶೆಟ್ಟಿ, ವಿದ್ಯಾರ್ಥಿಗಳು, ಹಳೇ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರಾಂಶುಪಾಲೆ ಬೇಬಿ ಶೆಟ್ಟಿ ಸ್ವಾಗತಿಸಿ, ಉಪ ಪ್ರಾಂಶುಪಾಲ ರವೀಂದ್ರ ರಾವ್ ವಂದಿಸಿದರು. ಶಿಕ್ಷಕ ವಾತಿಬೆಟ್ಟು ಪ್ರಕಾಶ ಪೂಜಾರಿ ನಿರೂಪಿಸಿದರು.