More

    ಪರಿಶ್ರಮ ಇದ್ದರೆ ಸಾಧನೆ ಸುಲಭ

    ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ಅನಿಸಿಕೆ

    ಭೋವಿ ಜನಾಂಗ ವಿದ್ಯಾರ್ಥಿಗಳಿಗೆ ಸನ್ಮಾನ


    ವಿಜಯವಾಣಿ ಸುದ್ದಿಜಾಲ ನೆಲಮಂಗಲ
    ಸಾಧನೆಯ ಹಾದಿ ಸುಗಮವಲ್ಲ. ಛಲ ಮತ್ತು ಕಠಿಣ ಪರಿಶ್ರಮದಿಂದ ಮುನ್ನಡೆದರೆ ಪ್ರತಿಯೊಬ್ಬರೂ ಸಾಧನೆಯ ಗುರಿ ತಲುಪಬಹುದು ಎಂದು ಮಾಜಿ ಮುಖ್ಯಮಂತ್ರಿ ಡಾ.ಎಂ.ವೀರಪ್ಪ ಮೊಯ್ಲಿ ತಿಳಿಸಿದರು.
    ನಗರದ ಗೋಪಿವೆಂಕಟೇಶ್ವರ ಕಲ್ಯಾಣ ಮಂಟಪದಲ್ಲಿ ರಾಜ್ಯ ಭೋವಿ ಸಂಘದಿಂದ ಆಯೋಜಿಸಿದ್ದ ರಾಜ್ಯಮಟ್ಟದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಪುಸ್ತಕ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದರು.
    ಸಮಾಜದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ನೀಡಿದ ಪುರಸ್ಕಾರ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸ್ಫೂರ್ತಿಯಾಗುತ್ತದೆ. ಪಾಲಕರು, ಮಕ್ಕಳ ವಿದ್ಯಾಭ್ಯಾಸದ ಜತೆಗೆ ಸಮಾಜ ಬಗ್ಗೆ ಅರಿವು ಮೂಡಿಸಬೇಕು ಎಂದರು.
    ಶಿಕ್ಷಣ ಕ್ಷೇತ್ರ ಅತ್ಯಂತ ವಿಶಾಲವಾದದ್ದು, ಹುಟ್ಟಿನಿಂದ ಸಾಯುವವರೆಗೂ ಶಿಕ್ಷಣ ಹಾಗೂ ಸಮಾಜದಲ್ಲಿ ಕಲಿಯುವುದು ಸಾಕಷ್ಟಿದೆ. ಮಕ್ಕಳಲಿರುವ ಪ್ರತಿಭೆ ಗುರುತಿಸಿ ಅದನ್ನು ಪ್ರೋತ್ಸಾಹಿಸುವ ಗುಣವನ್ನು ಪ್ರತಿಯೊಬ್ಬರೂ ಮಾಡಿದರೆ ಮಕ್ಕಳ ಸರ್ವತೋಮುಖ ಬೆಳವಣಿಗೆ ಸಾಧ್ಯವಾಗುತ್ತಿದೆ. ಮಕ್ಕಳಿಗೆ ಮೌಢ್ಯದ ಬದುಕಿನ ಬದಲು ಸಮಾಜದ ಮಧ್ಯ ಸತ್ಯವನ್ನು ಹುಡುಕಾಟ ಮಾಡುವ ಶಕ್ತಿಯನ್ನು ಬೆಳೆಸಬೇಕಿದೆ ಎಂದರು.
    ಎತ್ತಿನಹೊಳೆ ಮತ್ತು ವೃಷಭಾವತಿ ಯೋಜನೆಗೆ ಸರ್ಕಾರ ಅನುದಾನ ಬಿಡುಗಡೆ ಮಾಡಿದ್ದು, ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ಕೆ ಕ್ರಮ ಕೈಗೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಪಂಜಾಬ್‌ನಂತೆ ಫಲವತಾದ ಭೂಮಿಯಲ್ಲಿ ಉತ್ತಮ ಬೆಳೆಯನ್ನು ಬೆಳೆಯಲು ಸಹಕಾರಿಯಾಗುತ್ತದೆ ಎಂದು ಅಭಿಪ್ರಾಯಪಟ್ಟರು.ರಾಜ್ಯ ಭೋವಿ ಸಂಘದ ಉಪಾಧ್ಯಕ್ಷ ಎಂ.ಟಿ.ಮಲ್ಲೇಶ್, ಖಜಾಂಷಿ ನಿತ್ಯಾನಂದಕುಮಾರ್, ಪ್ರಧಾನ ಕಾರ್ಯದರ್ಶಿ ಡಾ.ಚೌಡಯ್ಯ, ಸಂಚಾಲಕ ವಿ.ರಾಜಣ್ಣ, ಕಾರ್ಯದರ್ಶಿ ಗೋಪಾಲ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸಿ.ಆರ್.ಗೌಡ, ಮುಖಂಡರಾದ ಚಿಕ್ಕಣ್ಣ, ರಾಜಣ್ಣ, ಜಯರಾಮ್, ಗೋವರ್ಧನ್, ದೀಪಕ್‌ಕಿರಣ್, ರಂಗನಾಥ್, ಟಿ.ನಾಗಾರಜು, ಮಿಲ್ಟ್ರೀಮೂರ್ತಿ, ಕುಮಾರ್, ನಾಗರತ್ನಮ್ಮ, ಉಮಾಶಂಕರ್ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts