ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಶ್ಲಾಘನಾರ್ಹ : ಹರೀಶ್ ಪೂಂಜ ಮೆಚ್ಚುಗೆ

09
Published on

ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ದೊಡ್ಡಮಟ್ಟದಲ್ಲಿ ಪ್ರೇರಣೆಯಾಗಬೇಕು ಎಂಬ ಉದ್ದೇಶದಿಂದ ದಾನಿಗಳ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವ ಕಾರ್ಯಕ್ರಮ ಆಯೋಜಿಸಿರುವುದು ಅಭಿನಂದನೀಯ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.

ಗುರುವಾಯನಕೆರೆ ಬಂಟರ ಭವನದಲ್ಲಿ ಬೆಳ್ತಂಗಡಿ ಬಂಟರ ಯಾನೆ ನಾಡವರ ಸಂಘ ಆಶ್ರಯದಲ್ಲಿ ಜಾಗತಿಕ ಬಂಟರ ಸಂಘಗಳ ಒಕ್ಕೂಟ ಮಂಗಳೂರು, ಮಂಗಳೂರು ಬಂಟರ ಯಾನೆ ನಾಡವರ ಮಾತೃ ಸಂಘ, ಕಾಶಿ ಶೆಟ್ಟಿ ಮತ್ತು ಮಕ್ಕಳು ನವಶಕ್ತಿ ಗುರುವಾಯನಕೆರೆ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಗುರುವಾಯನಕೆರೆ, ಬಂಟರ ಸಂಘ ಬೆಂಗಳೂರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಮೂಡುಬಿದಿರೆ ಸಹಭಾಗಿತ್ವದಲ್ಲಿ ಆಯೋಜಿಸಲಾಗಿದ್ದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ವಿತರಣೆ, ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಎಸಿಎಫ್ ಹಸ್ತಾ ಶೆಟ್ಟಿ ಮಾತನಾಡಿದರು. ಬಂಟರ ಸಂಘದ ಅಧ್ಯಕ್ಷ ಜಯಂತ ಶೆಟ್ಟಿ ಭಂಡಾರಿಗುಡ್ಡೆ ಅಧ್ಯಕ್ಷತೆ ವಹಿಸಿದ್ದರು. ಬೆಂಗಳೂರು ಬಂಟರ ಸಂಘದ ಗೌರವ ಕಾರ್ಯದರ್ಶಿ ವಿಜಯ ಜೆ.ಶೆಟ್ಟಿ ಹಾಲಾಡಿ, ಮಂಗಳೂರು ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯರಾಜ್ ಬಿ.ರೈ, ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಪಾಧ್ಯಕ್ಷ ಜಯಂತ ಶೆಟ್ಟಿ ಕುಂಟಿನಿ, ಮಾತೃ ಸಂಘ ತಾಲೂಕು ಸಂಚಾಲಕ ಜಯರಾಮ ಭಂಡಾರಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟ ನಿರ್ದೇಶಕ ಜಯರಾಮ ಶೆಟ್ಟಿ ಮುಂಡಾಡಿಗುತ್ತು, ಕಾರ್ಯದರ್ಶಿ ಸುರೇಶ್ ಶೆಟ್ಟಿ ಲಾಯಿಲ, ಉಪಾಧ್ಯಕ್ಷ ನವೀನ್ ಸಾಮಾನಿ ಕರಂಬಾರುಬೀಡು, ಯುವ ವಿಭಾಗ ಅಧ್ಯಕ್ಷ ಪ್ರತೀಕ್ ಶೆಟ್ಟಿ ನೊಚ್ಚ, ಮಹಿಳಾ ವಿಭಾಗ ಅಧ್ಯಕ್ಷೆ ಜಯಲಕ್ಷ್ಮೀ ಎನ್.ಸಾಮಾನಿ, ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ಉಪಸ್ಥಿತರಿದ್ದರು. ವಿದ್ಯಾರ್ಥಿ ನಿಧಿ ಸಂಚಾಲಕ ಅಜಿತ್ ಜಿ.ಶೆಟ್ಟಿ ಸ್ವಾಗತಿಸಿದರು. ಪ್ರಕಾಶ್ ಶೆಟ್ಟಿ ನೊಚ್ಚ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಉಮೇಶ್ ಶೆಟ್ಟಿ ವಂದಿಸಿದರು. ಕೋಶಾಧಿಕಾರಿ ವಸಂತ ಶೆಟ್ಟಿ, ಜತೆ ಕಾರ್ಯದರ್ಶಿ ಕಿರಣ್ ಕುಮಾರ್ ಶೆಟ್ಟಿ ಸಹಕರಿಸಿದರು.

ಸಾಧಕರಿಗೆ ಸನ್ಮಾನ

ಬಂಟರ ಸಂಘಕ್ಕೆ ಸಹಕಾರ ನೀಡುತ್ತಿರುವ ಶಶಿಧರ್ ಶೆಟ್ಟಿ ನವಶಕ್ತಿ ಗುರುವಾಯನಕೆರೆ, ಎ.ಸಿ.ಎಫ್ ಹಸ್ತಾ ಶೆಟ್ಟಿ, ದ.ಕ ಜಿಲ್ಲಾ ಅಡಕೆ ವ್ಯಾಪಾರಸ್ಥರ ಸಂಘ ಅಧ್ಯಕ್ಷ ಪ್ರಶಾಂತ್ ಶೆಟ್ಟಿ ಮಡಂತ್ಯಾರ್, ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘ ಅಧ್ಯಕ್ಷ ಪ್ರಸಾದ್ ಶೆಟ್ಟಿ ಎಣಿಂಜೆ, ಬೆಳ್ತಂಗಡಿ ತಾಲೂಕು ಅಡಕೆ ವ್ಯಾಪಾರಸ್ಥರ ಸಂಘ ಅಧ್ಯಕ್ಷ ಹೇಮಶಂಕರ್ ಶೆಟ್ಟಿ ಅವರನ್ನು ಗೌರವಿಸಲಾಯಿತು. ಬಂಟರ ಭವನ ಕಟ್ಟಡದ ಸಾಲ ಮರುಪಾವತಿಗಾಗಿ ಸಾಲಮುಕ್ತ ಅಭಿಯಾನದಲ್ಲಿ ದೇಣಿಗೆ ನೀಡಿದ ದಾನಿಗಳನ್ನು ಶಶಿಧರ್ ಶೆಟ್ಟಿ ಅಭಿನಂದಿಸಿದರು. ಎಸ್.ಎಸ್.ಎಲ್.ಸಿ., ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ 63 ವಿದ್ಯಾರ್ಥಿಗಳನ್ನು ಗೌರವಿಸಲಾಯಿತು. ವಿಶೇಷ ಸಾಧನೆಗೈದ 7 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net