ಸಾಹೇಬರಕಟ್ಟೆ ಶಾಲೆಯಲ್ಲಿ ಪ್ರತಿಭಾ ದಿನಾಚರಣೆ

celebration
Published on

ಕೊಕ್ಕರ್ಣೆ: ಸಾಹೇಬರಕಟ್ಟೆಯ ಮಹಾತ್ಮಗಾಂಧಿ ಪ್ರೌಢಶಾಲೆ ವಾರ್ಷಿಕ ಪ್ರತಿಭಾ ದಿನಾಚರಣೆ ಇತ್ತೀಚೆಗೆ ನಡೆಯಿತು. ಕಾಜ್ರಳ್ಳಿ ಶ್ರೀ ವನದುರ್ಗಾಪರಮೇಶ್ವರಿ ದೇವಸ್ಥಾ ಮೊಕ್ತೇಸರ ಅಲ್ತಾರು ನಿರಂಜನ ಹೆಗ್ಡೆ ಉದ್ಘಾಟಿಸಿದರು.

ಶೈಕ್ಷಣಿಕ ಹಾಗೂ ಕ್ರೀಡಾ ಸಾಧಕರಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲೆ ಹಾಗೂ ರಾಜ್ಯ ಮಟ್ಟ ಪ್ರತಿನಿಧಿಸಿದ ಸಂಸ್ಥೆಯ ವಿದ್ಯಾರ್ಥಿಗಳಾದ ಪವಿತ್ರಾ, ಹುಲಿಗೆಪ್ಪ, ಪುನೀತ್, ಆಕಾಶ್ ಎ.ಶೆಟ್ಟಿ ಅವರನ್ನು ಗೌರವಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಸದಸ್ಯ ವೈ.ಸಂಕಯ್ಯ ಶೆಟ್ಟಿ ಯಡ್ತಾಡಿ, ಉದ್ಯಮಿ ವಿಶ್ವನಾಥ ಶೆಟ್ಟಿ ಸಾಹೇಬರಕಟ್ಟೆ, ಮಂಜುನಾಥ ಆಚಾರ್ಯ ಯಡ್ತಾಡಿ, ಮಾಧವ ಹೆಗಡೆ ಮಧುವನ, ಶಾಲಾಡಳಿತ ಮಂಡಳಿ ಸದಸ್ಯ ರಮೇಶ್ ಶಿರಿಯಾರ, ಹಳೇ ವಿದ್ಯಾರ್ಥಿ ಸಂಘ ಕಾರ್ಯದರ್ಶಿ ಎಂ.ರವೀಂದ್ರನಾಥ ಕಿಣಿ ಮತ್ತಿತರರು ಉಪಸ್ಥಿತರಿದ್ದರು. ಎಸ್‌ಡಿಎಂಸಿ ಕಾರ್ಯದರ್ಶಿ ಪ್ರಸಾದ್ ಶೆಟ್ಟಿ ಕೊಳ್ಕೆಬೈಲು ಅಧ್ಯಕ್ಷತೆ ವಹಿಸಿದ್ದರು.

ಶಿಕ್ಷಕ ಗಣೇಶ್ ನಾಯಕ್ ಸ್ವಾಗತಿಸಿದರು. ಡೈಸಿ ಡಿಸಿಲ್ವ ವಂದಿಸಿದರು. ಶಿಕ್ಷಕರಾದ ಸುಬ್ರಹ್ಮಣ್ಯ, ಯಶೋದಾ, ಗೀತಾ ಬಹುಮಾನ ವಿಜೇತರ ಪಟ್ಟಿ ವಾಚಿಸಿದರು. ಮುಖ್ಯ ಶಿಕ್ಷಕ ಸತೀಶ್ ನಾಯ್ಕ ಶಾಲಾ ವಾರ್ಷಿಕ ವರದಿ ಮಂಡಿಸಿದರು. ದೈಹಿಕ ಶಿಕ್ಷಣ ಶಿಕ್ಷಕ ವಿಜಯ್ ಕುಮಾರ್ ಶೆಟ್ಟಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net