More

    ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ


    ಚಾಮರಾಜನಗರ : ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಪ್ರತಿಭೆಗಳನ್ನು ಅನಾವರಣಗೊಳಿಸುವುದಕ್ಕೆ ಪ್ರತಿಭಾ ಕಾರಂಜಿ ಉತ್ತಮ ವೇದಿಕೆ ಎಂದು ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿದರು.


    ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಕೊಳ್ಳೇಗಾಲ ಪಟ್ಟಣದ ಆರ್.ಸಿ.ಎಂ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ಆಯೋಜಿಸಿದ್ದ 2023-24 ನೇ ಸಾಲಿನ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


    ಚಾಮರಾಜನಗರ ಜಾನಪದ ತವರೂರು. ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿ ಹೆಸರಾಗಿರುವ ಜಿಲ್ಲೆ. ಇಲ್ಲಿನ ವೈಶಿಷ್ಟ್ಯಗಳನ್ನು ಮಕ್ಕಳು ಕಲಿಯಲು ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ. ಕೊಳ್ಳೇಗಾಲ ತಾಲೂಕು ಶೈಕ್ಷಣಿಕವಾಗಿ ಮುಂದಿದೆ. ಶಿಕ್ಷಕರು ಮಕ್ಕಳಿಗೆ ಉತ್ತಮ ಬೋಧೆನೆ ಮಾಡುತ್ತಿರುವುದಿಂದಲೇ ಇದು ಸಾಧ್ಯವಾಗಿದೆ. ಪಠ್ಯದ ಜತೆ ಪಠ್ಯೇತರ ಚಟುವಟಿಕೆಗಳಿಗೆ ಒತ್ತು ನೀಡುವುದಕ್ಕೆ ಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ನಡೆಸುತ್ತಿದ್ದು, ಮಕ್ಕಳು ತಾಲೂಕು ಮಟ್ಟದಿಂದ ಗೆಲುವು ಸಾಧಿಸಿ ಮುಂದಿನ ಹಂತಕ್ಕೆ ಹೋಗಬೇಕು ಎಂದು ಸಲಹೆ ನೀಡಿದರು.
    ತಹಸೀಲ್ದಾರ್ ಮಂಜುಳಾ ಮಾತನಾಡಿ, ಜಿಲ್ಲೆಯ ವಿವಿಧ ಕಲಾಪ್ರಕಾರವನ್ನು ಮಕ್ಕಳು ತಿಳಿಯಲು ಕಲೋತ್ಸವ ಕಾರ್ಯಕ್ರಮ ಸಹಕಾರಿಯಾಗಿದೆ ಎಂದರು.


    ಆಕರ್ಷಿಸಿದ ಮಕ್ಕಳ ವೇಷಭೂಷಣ: ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ತಾಲೂಕು ಮಟ್ಟದ ವಿವಿಧ ಶಾಲೆಯ ಮಕ್ಕಳು ಭಾಗವಹಿಸಿದ್ದರು. ಮಲೆಮಹದೇಶ್ವರರು, ಕಿತ್ತೂರು ರಾಣಿ ಚನ್ನಮ್ಮ, ನವಿಲು, ಪರಿಸರ, ಸೇರಿದಂತೆ ಕಲೆ, ಸಂಸ್ಕೃತಿ ಬಿಂಬಿಸುವ ವೇಷಭೂಷಣಗಳು ಆಕರ್ಷಿಸಿದವು. ರಂಗೋಲಿ, ರಸ ಪ್ರಶ್ನೆ, ಗಾಯನ ಸ್ಪರ್ಧೆ, ಪ್ರಬಂಧ, ಚಿತ್ರಕಲೆ ಇತರ ಸ್ಪರ್ಧೆಗಳು ನಡೆದವು. ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ಎಲ್ಲರ ಗಮನ ಸೆಳೆದವು.


    ನಗರಸಭೆ ಸದಸ್ಯರಾದ ಶಾಂತರಾಜು, ಮಂಜುನಾಥ್, ಜಯಮೇರಿ, ನಾಗೇಂದ್ರ, ಶಂಕರ್ ನಾರಾಯಣ ಗುಪ್ತ, ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಬಿಆರ್‌ಸಿ ಮಹದೇವ, ಆರ್.ಸಿ.ಎಂ ಶಾಲೆಯ ಸಿಸ್ಟರ್ ಗೆಲ್ಸಿ, ಸಂತ ಪ್ರಾನ್ಸಿನ್ ಚರ್ಚ್ ಫಾದರ್ ಪೌಲ್ ಎಬಿನೇಜರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ತೋಟೇಶ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಅಲೆಗ್ಸಾಂಡರ್, ಪ್ರಾಥಮಿಕ ಶಾಲಾ ಶಿಕ್ಷಣ ಸಂಘದ ಅಧ್ಯಕ್ಷ ಶ್ರೀಧರ್, ಪ್ರೌಢಶಾಲಾ ಶಿಕ್ಷಣ ಸಂಘದ ಅಧ್ಯಕ್ಷ ಶಿವರಾಜು, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಅಕ್ಬರ್ ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts