ಯಲಬುರ್ಗಾ: ವಸತಿ ಶಾಲಾ ಆಡಳಿತ ಮಂಡಳಿಯು ವಿದ್ಯಾರ್ಥಿಗಳ ಸರ್ವತೋಮುಖ ಏಳಿಗೆಗೆ ಶ್ರಮಿಸುತ್ತಿರುವುದು ಶ್ಲಾಘನೀಯ ಎಂದು ಪಾಲಕ ಪ್ರತಿನಿಧಿ ಕನಕಪ್ಪ ಹೊಸಗೇರಿ ಹೇಳಿದರು.
ಇದನ್ನೂ ಓದಿ: ಮೇಲಿನಕುರುವಳ್ಳಿ ನವೀಕೃತ ಶಾಲೆ ಅನಾವರಣ
ತಾಲೂಕಿನ ಹಿರೇವಂಕಲಕುಂಟಾ ಗ್ರಾಮದ ಎಂಡಿಆರ್ ಶಾಲೆಯಲ್ಲಿ ಶನಿವಾರ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಹಾಗೂ ವಾರ್ಷಿಕ ಸ್ನೇಹ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕರು ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡುವ ಮೂಲಕ ಪ್ರತಿಭೆ ಅನಾವರಣಕ್ಕೆ ಕೈಜೋಡಿಸಬೇಕು. ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಂಯಮ ರೂಢಿಸಿಕೊಳ್ಳಬೇಕು. ಕಠಿಣ ಪರಿಶ್ರಮದಿಂದ ಸಾಧನೆಗೈಯಲು ಸಾಧ್ಯ ಎಂದು ಮರಿಯದಿರಿ.
ಗ್ರಾಮೀಣ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸರ್ಕಾರ ಯೋಜನೆಗಳನ್ನು ಜಾರಿಗೊಳಿಸಿದ್ದು, ಅವುಗಳ ಸದುಪಯೋಗ ಮಾಡಿಕೊಳ್ಳಬೇಕು.
ಪ್ರಾಚಾರ್ಯ ಹನುಮೇಶ ಕುಷ್ಟಗಿ, ಪಾಲಕರ ಪ್ರತಿನಿಧಿ ಉಮಾರೆಡ್ಡಿ, ನಿಲಯ ಪಾಲಕ ಅಶೋಕ ಇತರರಿದ್ದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.