

ಕುಂದಾಪುರ: ವಿದ್ಯಾರ್ಥಿಗಳಲ್ಲಿ ಹುದುಗಿರುವ ಸುಪ್ತಪ್ರತಿಭೆ ಹೊರತೆಗೆಯುವುದರ ಜತೆಗೆ, ವೇದಿಕೆಯ ಭಯ ನಿವಾರಣೆಗೆ ಪ್ರತಿಭಾ ಪ್ರದರ್ಶನದಂತಹ ಕಾರ್ಯಕ್ರಮಗಳು ಸಹಕಾರಿಯಾಗಲಿದೆ. ಇಂತಹ ಕಾರ್ಯಕ್ರಮಗಳಲ್ಲಿ ಮಕ್ಕಳು ಉತ್ಸಾಹದಿಂದ ಹಾಗೂ ಆತ್ಮವಿಶ್ವಾಸದಿಂದ ಭಾಗವಹಿಸಬೇಕು ಎಂದು ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆ ಮುಖ್ಯಶಿಕ್ಷಕಿ ಸುಜಾತಾ ಸದಾರಾಮ ಹೇಳಿದರು.
ಹಟ್ಟಿಯಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಶನಿವಾರ ನಡೆದ ವಿದ್ಯಾರ್ಥಿಗಳ ಪ್ರತಿಭಾ ಪ್ರದರ್ಶನ ಕಾರ್ಯಕ್ರಮದಲ್ಲಿ ವಾತನಾಡಿದರು.
ವಿದ್ಯಾರ್ಥಿಗಳು ತಮ್ಮ ಆಸಕ್ತಿಯ ಚಟುವಟಿಕೆಗಳಾದ ಸಂಗೀತ, ನೃತ್ಯ, ಶ್ಲೋಕ ಪಠಣ, ಕಥೆ ಹೇಳುವಿಕೆ, ಕರಾಟೆ ಮೊದಲಾದ ಪ್ರತಿಭೆಗಳನ್ನು ಪ್ರಾತ್ಯಕ್ಷಿಕೆ ಮೂಲಕ ಪ್ರದರ್ಶಿಸಿದರು. ಶಾಲೆ ಶಿಕ್ಷಕರು ಹಾಗೂ ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.