ಅಥಣಿ ಗ್ರಾಮೀಣ: ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡಾಗ ಮಾತ್ರ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ದೊರೆಯಲಿದೆ ಎಂದು ಉಪಪ್ರಾಚಾರ್ಯ ಅನಿಲ ಮೇಲಿನಕೇರಿ ಹೇಳಿದರು.
ಅಥಣಿ ತಾಲೂಕಿನ ಕೊಕಟನೂರ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಮಾತನಾಡಿ, ಮಕ್ಕಳಲ್ಲಿರುವ ಪ್ರತಿಭೆ ಅನಾವರಣಕ್ಕೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ವಿಜ್ಞಾನ ವಸ್ತು ಪ್ರದರ್ಶನ ಏರ್ಪಡಿಸಲಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿ ಮುಖಂಡ ಸುಭಾಷ ಸೋನಕರ ಮಾತನಾಡಿ, ಹಳ್ಳಿಯ ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಭಾಗವಹಿಸಿರುವುದು ಉತ್ತಮ ಬೆಳವಣಿಗೆ ಎಂದರು.
ಗ್ರಾಪಂ ಅಧ್ಯಕ್ಷೆ ಶಾನವ್ವ ಪೂಜಾರಿ, ಶಿಕ್ಷಕಿ ಮೀನಾಕ್ಷಿ ಪಾಟೀಲ, ಎಸ್.ಬಿ.ಕುರಬರ, ಆರತಿ ಪಾಟೀಲ, ಕಿರಣ ಭಜಂತ್ರಿ, ಸುಧಾರಾಣಿ ಮಠಪತಿ, ಎಸ್‌ಡಿಎಂಸಿ ಅಧ್ಯಕ್ಷ ನಾನಾಸಾಹೇಬ ವೀರಗೌಡ, ಗ್ರಾಪಂ ಉಪಾಧ್ಯಕ್ಷ ಅರ್ಜುನ ಪೂಜಾರಿ, ಮಹೇಶ ಕಾಡದೇವೆರಮಠ, ಗುಳಪ್ಪ ಪೂಜಾರಿ, ಪ್ರೇಮಾ ನಾಯಿಕ, ಸಂತೋಷ ತಳಕೇರಿ ಇತರರಿದ್ದರು.