ರಾಯಬಾಗ: ಗ್ರಾಮೀಣ ಪ್ರತಿಭೆಗಳನ್ನು ಪ್ರೋತ್ಸಾಹಿಸಲು ಜೊಲ್ಲೆ ಸಮೂಹದಿಂದ ಹಮ್ಮಿಕೊಂಡಿರುವ ಪ್ರತಿಭಾ ಪ್ರದರ್ಶನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಶಾಸಕ ಡಿ.ಎಂ.ಐಹೊಳೆ ಹೇಳಿದರು.
ಪಟ್ಟಣದ ಮಹಾವೀರ ಸಭಾಭವನದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಜನ್ಮದಿನದ ಅಂಗವಾಗಿ ಮಂಗಳವಾರ ಆಯೋಜಿಸಿದ್ದ ರಾಯಬಾಗ ಪ್ರತಿಭಾ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜೊಲ್ಲೆ ಸಮೂಹ ಒಳ್ಳೆಯ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಎಂದರು.
ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ಗ್ರಾಮೀಣ ಪ್ರತಿಭೆಗಳ ಕಲೆ ಗುರುತಿಸಲು ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯ ಎಲ್ಲ ವಿಧಾನಸಭೆ ಕ್ಷೇತ್ರಗಳಲ್ಲಿ ಪ್ರತಿಭಾ ಪ್ರದರ್ಶನ ಆಯೋಜಿಸಲಾಗಿದೆ. ಯುವ ಪ್ರತಿಭೆಗಳು ಸೂಕ್ತವಾಗಿ ವೇದಿಕೆ ಬಳಸಿಕೊಳ್ಳಬೇಕು ಎಂದರು.
ಭೆಂಡವಾಡ ಗುರುಸಿದ್ಧ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಬಾವನಸೌಂದತ್ತಿಯ ಶಿವಶಂಕರ ಸ್ವಾಮೀಜಿ, ಕಬ್ಬೂರಿನ ರೇವಣಸಿದ್ದೇಶ್ವರ ಸ್ವಾಮೀಜಿ, ನಂದಿಕುರಳಿಯ ವೀರಭದ್ರ ಸ್ವಾಮೀಜಿ, ಜಿಪಂ ಮಾಜಿ ಸದಸ್ಯ ಮಹೇಶ ಭಾತೆ, ಸಿಬಿಕೆಎಸ್‌ಎಸ್‌ಕೆ ಉಪಾಧ್ಯಕ್ಷ ತಾತ್ಯಾಸಾಬ ಕಾಟೆ, ನ್ಯಾಯವಾದಿ ಎಲ್.ಬಿ.ಚೌಗುಲೆ ಇತರರಿದ್ದರು.