More

    ಕಾಂಗ್ರೆಸ್‌ನಿಂದ ದೇಶ ಇಬ್ಭಾಗದ ಮಾತು

    ಶಿವಮೊಗ್ಗ: ರಾಷ್ಟ್ರೀಯ ವಿಚಾರಗಳನ್ನು ಮುಂದಿಟ್ಟುಕೊಂಡು ನಾವು ಚುನಾವಣೆ ಎದುರಿಸುತ್ತೇವೆ. ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ ದೇಶವನ್ನು ಒಗ್ಗೂಡಿಸುತ್ತಿರುವುದು ಬಿಜೆಪಿ. ಆದರೆ ಕಾಂಗ್ರೆಸ್ ದೇಶವನ್ನು ಇಬ್ಭಾಗವಾಗಿಸುವ ಮಾತುಗಳನ್ನಾಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ದೂರಿದರು.

    ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾರತ್ ಜೋಡೋ ಯಾತ್ರೆ ನಡೆಸಿದರು. ಆದರೆ ಅವರ ಯಾತ್ರೆ ಸಂಪೂರ್ಣ ವಿಫಲವಾಯಿತು. ಇಂದು ಜನರು ರಾಹುಲ್ ಗಾಂಧಿ ಪಾದಯಾತ್ರೆ ಹಾಗೂ ಕಾಂಗ್ರೆಸ್ ಅನ್ನು ನಂಬುವ ಸ್ಥಿತಿಯಲ್ಲಿಲ್ಲ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ವಾಗ್ದಾಳಿ ನಡೆಸಿದರು.
    ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದು ಕಾಂಗ್ರೆಸ್. ನಕ್ಸಲ್‌ವಾದ, ಆತಂಕವಾದ ಹೆಚ್ಚಿದ್ದು ಕಾಂಗ್ರೆಸ್ ಆಡಳಿತದಲ್ಲಿ. ಇಂಡಿಯ ಮೈತ್ರಿಕೂಟದಲ್ಲಿ ಇರುವವರಿಗೆ ದೇಶಕ್ಕಿಂತ ಅಧಿಕಾರವೇ ಮುಖ್ಯವಾಗಿದೆ. ಅವರ ತುಷ್ಟೀಕರಣ ನೀತಿ ಮಿತಿಮೀರಿದೆ. ಉದಯನಿಧಿ ಸ್ಟಾಲಿನ್ ಹಿಂದು ಧರ್ಮದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದರೂ ಕಾಂಗ್ರೆಸ್ ಮುಖಂಡರು ಅದನ್ನು ಖಂಡಿಸಲಿಲ್ಲ ಎಂದು ಟೀಕಿಸಿದರು.
    ಲೋಕಸಭೆ ಕಲಾಪದಲ್ಲಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್, ದಕ್ಷಿಣ ಭಾರತ ಪ್ರತ್ಯೇಕ ದೇಶವಾಗಬೇಕು ಎಂದು ಹೇಳಿದರೂ ಕಾಂಗ್ರೆಸ್ ನಾಯಕರು ಅದನ್ನು ಖಂಡಿಸಲಿಲ್ಲ. ಇಂಥವರಿಂದ ಅಖಂಡ ಭಾರತ ಪರಿಕಲ್ಪನೆ ನಿರೀಕ್ಷಿಸುವುದು ಹೇಗೆ? ಎಂದು ಪ್ರಶ್ನಿಸಿದರು.
    ಬಿಜೆಪಿ ಜಿಲ್ಲಾ ವಕ್ತಾರ ಎಸ್.ಎಸ್.ಜ್ಯೋತಿಪ್ರಕಾಶ್, ಪ್ರಧಾನ ಕಾರ್ಯದರ್ಶಿ ಸಿ.ಎಚ್.ಮಾಲತೇಶ್, ಕಾರ್ಯದರ್ಶಿ ಮಧುರಾ ಶಿವಾನಂದ್, ಪ್ರಮುಖರಾದ ಎಸ್.ಚಂದ್ರಶೇಖರ್, ವಿನ್ಸೆಂಟ್ ರೊಡ್ರಿಗಸ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts