More

    ಶಿರಾಳಕೊಪ್ಪದಲ್ಲಿ ನಿರೀಕ್ಷೆಗಿಂತ ಹೆಚ್ಚು ಅಭಿವೃದ್ಧಿ

    ಶಿರಾಳಕೊಪ್ಪ: ಪಟ್ಟಣದಲ್ಲಿ ಜನರ ನಿರೀಕ್ಷೆಗಿಂತ ಹೆಚ್ಚು ಅಭಿವೃದ್ಧಿ ಕಾರ್ಯಗಳಾಗುತ್ತಿವೆ. ತಾಲೂಕು ಕೇಂದ್ರದಲ್ಲಿ ಇರುವಂತಹ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗಿದ್ದು ಹೆಚ್ಚು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಪಪಂ ಅನ್ನು ಪುರಸಭೆಯಾಗಿ ಮೇಲ್ದರ್ಜೆಗೇರಿಸಲಾಗಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

    ಪಟ್ಟಣದಲ್ಲಿ ಕೆಶಿಪ್ ಆಶ್ರಯದಲ್ಲಿ 1.61 ಕಿಮೀ ಉದ್ದದ ರಸ್ತೆಯ ಎರಡು ಬದಿಯಲ್ಲಿ ಜಿಗ್ ಜಾಗ್ ಮಾದರಿಯಲ್ಲಿ ಅಳವಡಿಸಲಾದ ಅಲಂಕಾರಿಕ ವಿದ್ಯುತ್ ದೀಪಕ್ಕೆ ಚಾಲನೆ ನೀಡಿ ಮಾತನಾಡಿ, ನಾಗರಿಕರ ಅನಕೂಲಕ್ಕಾಗಿ ಅಂಜನಾಪುರ ಜಲಾಶಯದಿಂದ ಶಿರಾಳಕೊಪ್ಪಕ್ಕೆ ಶುದ್ಧ ಕುಡಿಯುವ ನೀರು, ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ ಎಂದರು.

    ವಾಲ್ಮೀಕಿ ಭವನ, ಭೋವಿ ಭವನ, ಬಸ್ ನಿಲ್ದಾಣ, ಸರ್ಕಾರಿ ಪದವಿ ಕಾಲೇಜು, ಮಹಿಳಾ ಡಿಪ್ಲೊಮಾ ಕಾಲೇಜು, ಈ ಭಾಗದ ಗ್ರಾಮಾಂತರ ಪ್ರದೇಶದ ಹೆಣ್ಣು ಮಕ್ಕಳ ಅನುಕೂಲಕ್ಕಾಗಿ 3 ಕೋಟಿ ರೂ. ವೆಚ್ಚದಲ್ಲಿ ಸರ್ಕಾರಿ ಪಬ್ಲಿಕ್ ಶಾಲೆ ಸೇರಿ ಎಲ್ಲ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದು ತಿಳಿಸಿದರು.

    ಶಿರಾಳಕೊಪ್ಪದಲ್ಲಿ ಇನ್ನು ಮುಂದೆ ಪುರಸಭೆ ಆಶ್ರಯದಲ್ಲಿ 50 ಎಕರೆ ಭೂಮಿ ಖರೀದಿಸಿ ಪಟ್ಟಣದಲ್ಲಿ ಸೂರುರಹಿತರಿಗೆ ನಿವೇಶನ ಕೊಡಿಸುವ ಹಾಗೂ ಮನೆ ಕಟ್ಟಿಸುವ ಕಾರ್ಯ ಮಾಡಲಾಗುವುದು. ಯಡಿಯೂರಪ್ಪ ಅವರನ್ನು ಸಿಎಂ ಮಾಡಿ, ನನ್ನನ್ನು ಸಂಸದನನ್ನಾಗಿ ಮಾಡಿದ್ದೀರಿ. ಇದರ ಋಣ ತೀರಿಸಲು ಹೆಚ್ಚಿನ ಅಭಿವೃದ್ಧಿ ಕಾರ್ಯ ಮಾಡಲಾಗುವುದೆಂದರು.

    ಸಿಎಂ ಯಡಿಯೂರಪ್ಪ ಅವರು ಶಿರಾಳಕೊಪ್ಪವನ್ನು ಅಭಿವೃದ್ಧಿಪಡಿಸಬೇಕೆಂಬ ಉದ್ದೇಶದಿಂದ ಪುರಸಭೆಯನ್ನಾಗಿ ಮಾಡಿದ್ದಾರೆ. ಆದರೆ ಕೆಲವರು ಗ್ರಾಮಗಳಲ್ಲಿ ಅಪಪ್ರಚಾರ ಮಾಡುತ್ತಿದ್ದಾರೆ. ಗ್ರಾಮಾಂತರ ಪ್ರದೇಶಗಳಲ್ಲಿಯೂ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದರು.

    ಎಂಎಡಿಬಿ ಅಧ್ಯಕ್ಷ ಗುರುಮೂರ್ತಿ ಮಾತನಾಡಿ, ಸಂಪೂರ್ಣ ಶಿವಮೊಗ್ಗ ಜಿಲ್ಲೆ ಅಲಂಕಾರಿಕವಾಗಿ ಎಲ್ಲ ರೀತಿಯಿಂದ ಬೆಳೆಯುತ್ತಿದೆ. ಈ ಭಾಗದ ರೈತರ ಬೇಡಿಕೆಯಾದ ನೀರಾವರಿ ಯೋಜನೆ, ವಿದ್ಯುತ್ ವ್ಯವಸ್ಥೆ ಕಲ್ಪಿಸಲಾಗಿದೆ. ವೈಯಕ್ತಿಕ ಟೀಕೆ ಟಿಪ್ಪಣಿಗಳನ್ನು ಬದಿಗಿಟ್ಟು ಅಭಿವೃದ್ಧಿಗೆ ಪ್ರತಿಯೊಬ್ಬರೂ ಸಹಕರಿಸಬೇಕು ಎಂದು ಹೇಳಿದರು.

    ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ, ಪುರಸಭೆ ಅಧ್ಯಕ್ಷೆ ಮಂಜುಳಾ ಟಿ.ರಾಜು, ಉಪಾಧ್ಯಕ್ಷೆ ರಾಜೇಶ್ವರಿ ವಸಂತಕುಮಾರ್, ಭೋವಿ ನಿಗಮದ ನಿರ್ದೇಶಕ ಸಣ್ಣ ಹನುಮಂತಪ್ಪ, ಅಗಡಿ ಅಶೋಕ, ಮಂಚಿ ಶಿವಣ್ಣ, ಪುರಸಭೆ ಸದಸ್ಯರಾದ ಟಿ.ರಾಜು, ಅನಿಲ್ ಕುಮಾರ್, ಮಹಾಬಲೇಶ್, ಮಕ್ಬೂಲ್ ಸಾಬ್, ಲಲಿತಮ್ಮ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts