ಸುಳ್ಯ: ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡರೆ ಬೌದ್ಧಿಕ ಹಾಗೂ ದೈಹಿಕವಾಗಿ ಆರೋಗ್ಯವಾಗಿರಲು ಸಹಕಾರಿಯಾಗುತ್ತದೆ ಎಂದು ಮಿನುಂಗೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ ಹೇಳಿದರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರಿ ಪ್ರೌಢಶಾಲೆ ಮರ್ಕಂಜ, ಗ್ರಾಪಂ ಮರ್ಕಂಜ, ಯುವಜನ ಸಂಯುಕ್ತ ಮಂಡಳಿ ಸುಳ್ಯ ಮತ್ತು ಶ್ರೀ ಶಾಸ್ತಾವು ಯುವಕ ಮಂಡಲ ರೆಂಜಾಳದ ಆಶ್ರಯದಲ್ಲಿ ಭಾನುವಾರ ಮರ್ಕಂಜ ಪ್ರೌಢಶಾಲಾ ಮೈದಾನದಲ್ಲಿ ಆಯೋಜಿಸಲಾದ ಸುಳ್ಯ ತಾಲೂಕು ದಸರಾ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಸುಳ್ಯ ತಾಲೂಕು ಅಕ್ಷರ ದಾಸೋಹದ ಸಹಾಯಕ ನಿರ್ದೇಶಕಿ ವೀಣಾ ಎಂ.ಟಿ. ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ಲಕ್ಷ್ಮೀಶ ರೈ ರೆಂಜಾಳ, ಮರ್ಕಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಅಧ್ಯಕ್ಷ ರಮೇಶ್ ದೇಲಂಪಾಡಿ, ಯುವಜನ ಸಂಯುಕ್ತ ಮಂಡಳಿ ಅಧ್ಯಕ್ಷ ವಿಜಯ್ ಕುಮಾರ್ ಉಬರಡ್ಕ, ಶ್ರೀ ಶಾಸ್ತಾವು ಯುವಕ ಮಂಡಲ ಅಧ್ಯಕ್ಷ ರಾಜೇಶ್ ಬೇರಿಕೆ, ಮರ್ಕಂಜ ಪ್ರೌಢಶಾಲೆ ಎಸ್‌ಡಿಎಂಸಿ ಅಧ್ಯಕ್ಷ ಸುರೇಶ್ ಕಟ್ಟದಮೂಲೆ, ಮರ್ಕಂಜ ಪ್ರೌಢಶಾಲೆ ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಶಶಿಕಾಂತ್ ಗುಳಿಗಮೂಲೆ, ಯುವಜನ ಸಂಯುಕ್ತ ಮಂಡಳಿ ಕಾರ್ಯದರ್ಶಿ ನಮಿತಾ ಹರ್ಲಡ್ಕ, ದೈಹಿಕ ಶಿಕ್ಷಣ ಶಿಕ್ಷಕ ಸಂಘ ಅಧ್ಯಕ್ಷ ಧನಂಜಯ ಎಂ. ಉಪಸ್ಥಿತರಿದ್ದರು.
ಯುವ ಸಬಲೀಕರಣ ಕ್ರೀಡಾ ಇಲಾಖೆ ನೋಡಲ್ ಅಧಿಕಾರಿ ದೇವರಾಜ್ ಮುತ್ಲಾಜೆ ಸ್ವಾಗತಿಸಿದರು. ಕ್ರೀಡಾಕೂಟದಲ್ಲಿ ತಾಲೂಕಿನ ಎಲ್ಲ ಕಡೆಗಳಿಂದ ಬಂದ ಕ್ರೀಡಾಳುಗಳು ಭಾಗವಹಿಸಿದ್ದರು.