More

    ಬಾಲ್ಯ ವಿವಾಹ ತಡೆಗಟ್ಟುವುದು ಸಾರ್ವಜನಿಕರ ಕರ್ತವ್ಯ; ವೈ.ಎಲ್. ಲಾಡಖಾನ

    ರಾಣೆಬೆನ್ನೂರ: ಬಾಲ್ಯ ವಿವಾಹದಿಂದ ಮಕ್ಕಳ ಭವಿಷ್ಯ ಹಾಳಾಗುತ್ತಿದ್ದು, ಇದನ್ನು ತಡೆಗಟ್ಟುವುದು ಸಾರ್ವಜನಿಕರ ಕರ್ತವ್ಯವಾಗಿದೆ ಎಂದು ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶೆ ವೈ.ಎಲ್. ಲಾಡಖಾನ ಹೇಳಿದರು.
    ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ತಾಲೂಕು ಆಡಳಿತ, ಪೊಲೀಸ್ ಹಾಗೂ ಶಿಕ್ಷಣ ಇಲಾಖೆ ವತಿಯಿಂದ ನಗರದ ಆಂಗ್ಲೋ ಉರ್ದು ಹೈಸ್ಕೂಲ್ ಮೈದಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಬಾಲ್ಯ ವಿವಾಹ ತಡೆ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
    ಭಾರತದ ಸಮೀಕ್ಷೆ ಪ್ರಕಾರ ಕರ್ನಾಟಕದಲ್ಲಿಯೇ ಅತಿ ಹೆಚ್ಚು ಬಾಲ್ಯ ವಿವಾಹಗಳು ನಡೆಯುತ್ತಿವೆ ಎಂಬುದು ಕಂಡುಬಂದಿದೆ. ಸಮಾಜದಲ್ಲಿ ಮಕ್ಕಳಿಗೆ ಜೀವಿಸುವ ಹಕ್ಕಿದೆ. ಆದರೆ, ಬಾಲ್ಯ ವಿವಾಹದಿಂದ ಮಕ್ಕಳ ಭವಿಷ್ಯ ಕಮರಿಹೋಗುತ್ತಿದೆ. ಬಾಲ್ಯ ವಿವಾಹವು ನಡೆಯುತ್ತಿರುವುದು ಎಲ್ಲಿಯಾದರೂ ಕಂಡು ಬಂದಲ್ಲಿ ವಿದ್ಯಾರ್ಥಿಗಳು ತಮ್ಮ ಶಿಕ್ಷಕರ ಗಮನಕ್ಕೆ ಅಥವಾ ತಾಲೂಕು ಕಾನೂನು ಸೇವಾ ಸಮಿತಿಗೆ ಮಾಹಿತಿ ನೀಡಬೇಕು ಎಂದರು.
    ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಎಚ್. ಪಾಟೀಲ, ವಕೀಲರ ಸಂಘದ ಅಧ್ಯಕ್ಷ ಬಿ.ಎಚ್, ಬುರಡಿಕಟ್ಟಿ, ಕಾರ್ಯದರ್ಶಿ ಎನ್.ಎಂ. ಡೊಂಬರ ಹಾಗೂ ಸಿಬ್ಬಂದಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts