ತರಗತಿ ಕೋಣೆಗಳಲ್ಲಿದೆ ದೇಶದ ಭವಿಷ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಅಭಿಪ್ರಾಯ

New Project (16)
Published on

ಬಂಟ್ವಾಳ: ದೇಶದ ಭವಿಷ್ಯ ತರಗತಿಯ ಕೋಣೆಗಳಲ್ಲಿ ಇದೆ. ಸರ್ಕಾರವು ಶಿಕ್ಷಣಕ್ಕೆ ಸಂಬಂಧಿಸಿದಂತೆ ಹಲವಾರು ರೀತಿಯ ಸಹಕಾರ ನೀಡುತ್ತಿದೆ. ಪ್ರತಿ ಮಗುವಿಗೂ ಕಲಿಕೆಯ ಬಗ್ಗೆ ಯಾವುದೇ ಕಾರಣದಲ್ಲೂ ಯಾವ ರೀತಿಯಲ್ಲೂ ಲೋಪವಾಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುನಾಥನ್ ಎಂ.ಜಿ. ಹೇಳಿದರು.

ವೀರಕಂಭ ಮಜಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲೂಕುಮಟ್ಟದ ಪ್ರಾರಂಭೋತ್ಸವ ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಕ್ಷೇತ್ರ ಸಂಪನ್ಮೂಲ ಕೇಂದ್ರದ ಪ್ರಭಾರ ಸಮನ್ವಯಾಧಿಕಾರಿ ವಿದ್ಯಾ, ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ವಿಟ್ಲ ಗ್ರಾಮೀಣ ಬ್ಯಾಂಕ್ ನಿರ್ದೇಶಕ ವಿಶ್ವನಾಥ ಎಂ., ಶಾಲಾ ಹಿರಿಯ ವಿದ್ಯಾರ್ಥಿ ಸಂ ಅಧ್ಯಕ್ಷ ಈಶ್ವರ ಭಟ್ ರಾಕೋಡ್ ಶುಭಹಾರೈಸಿದರು. ವೀರಕಂಭ ಗ್ರಾಪಂ ಉಪಾಧ್ಯಕ್ಷ ಜನಾರ್ದನ ಪೂಜಾರಿ ನಾರುಕೋಡಿ, ಎಸ್‌ಡಿಎಂಸಿ ಉಪಾಧ್ಯಕ್ಷೆ ವನಿತಾ, ಬಂಟ್ವಾಳ ಕ್ಷೇತ್ರ ಸಂಪನ್ಮೂಲ ಕೇಂದ್ರದ ಕ್ಷೇತ್ರ ವಿಶೇಷ ಸಂಪನ್ಮೂಲ ವ್ಯಕ್ತಿ ರವೀಂದ್ರ, ಮಾತೃಶ್ರೀ ಗೆಳೆಯರ ಬಳಗ ಅಧ್ಯಕ್ಷ ರಮೇಶ್ ಗೌಡ ಮೈರ, ಕಲ್ಲಡ್ಕ ಮತ್ತು ಕಂಬಳಬೆಟ್ಟು ಸಮೂಹ ಸಂಪನ್ಮೂಲ ವ್ಯಕ್ತಿ ಜ್ಯೋತಿ, ತರಕಾರಿ ವ್ಯಾಪಾರಿ ಮೊಹಮದ್ ಶರೀಫ್ ಉಪಸ್ಥಿತರಿದ್ದರು.

ಶಿಕ್ಷಣ ಸಂಯೋಜಕಿ ಪ್ರತಿಮಾ ಸ್ವಾಗತಿಸಿದರು. ಶಿಕ್ಷಕಿ ಸಂಗೀತ ಶರ್ಮ ಪಿ. ನಿರೂಪಿಸಿದರು. ಮುಖ್ಯ ಶಿಕ್ಷಕಿ ಬೆನಡಿಕ್ಟಾ ಆಗ್ನೇಸ್ ಮಂಡೋನ್ಸಾ ವಂದಿಸಿದರು.

ಸೌಲಭ್ಯಗಳ ಮಾಹಿತಿ

ಕಲ್ಲಡ್ಕ ಕ್ಲಸ್ಟರ್‌ನ ಶಿಕ್ಷಣ ಸಂಯೋಜಕಿ ಪ್ರತಿಮಾ ಸೌಲಭ್ಯಗಳ ಮಾಹಿತಿ ನೀಡಿದರು. ಗುಬ್ಬಚ್ಚಿ ಗೂಡು ಕಾರ್ಯಕ್ರಮ ರೂವಾರಿಗಳಾದ ರಮ್ಯಾ ಹಾಗೂ ನಿತ್ಯಾನಂದ ಶೆಟ್ಟಿ ದಂಪತಿಗಳು ವಿದ್ಯಾರ್ಥಿಗಳಿಗೆ ಕಾರ್ಟೂನ್ ನೆಟ್ವರ್ಕ್ ಗೊಂಬೆ ಮುಖವಾಡದೊಂದಿಗೆ ಮಕ್ಕಳನ್ನು ಆಕರ್ಷಿಸಿದರು. ‘ಅಕ್ಷಯ ಬುಟ್ಟಿ’ ಎನ್ನುವ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಕಡೇಶಿವಾಲಯ ಯುವ ಸೇವಾಪಥ ವತಿಯಿಂದ ನೀಡಲ್ಪಟ್ಟ ಶುದ್ಧ ಕುಡಿಯುವ ನೀರಿನ ಟಕವನ್ನು ಉದ್ಘಾಟಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net