ತಾಲೂಕುಮಟ್ಟದ ಕಬಡ್ಡಿ ಪಂದ್ಯಾಟ

kabaddi-1
ಸರ್ಕಾರಿ ಪಪೂ ಕಾಲೇಜು ಹೆಬ್ರಿ ಪ್ರೌಢಶಾಲೆಯಲ್ಲಿ ಕಾರ್ಕಳ, ಹೆಬ್ರಿ ತಾಲೂಕುಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ ಶುಕ್ರವಾರ ಹೆಬ್ರಿ ಗ್ರಾಪಂ ಅಧ್ಯಕ್ಷ ತಾರನಾಥ್ ಬಂಗೇರ ಉದ್ಘಾಟಿಸಿದರು.
Published on

ಹೆಬ್ರಿ: ಸರ್ಕಾರಿ ಪಪೂ ಕಾಲೇಜು ಹೆಬ್ರಿ ಪ್ರೌಢಶಾಲೆಯಲ್ಲಿ ಕಾರ್ಕಳ, ಹೆಬ್ರಿ ತಾಲೂಕುಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ ಶುಕ್ರವಾರ ನಡೆಯಿತು. ಹೆಬ್ರಿ ಗ್ರಾಪಂ ಅಧ್ಯಕ್ಷ ತಾರನಾಥ್ ಬಂಗೇರ ಅಧ್ಯಕ್ಷತೆ ವಹಿಸಿದ್ದರು. ಚಾರ ಗ್ರಾಪಂ ಅಧ್ಯಕ್ಷ ದಿನೇಶ್ ಶೆಟ್ಟಿ, ಎಸ್‌ಡಿಎಂಸಿ ಅಧ್ಯಕ್ಷ ವಿಜಯೇಂದ್ರ ಶೆಟ್ಟಿ, ಚೈತನ್ಯ ಯುವ ವೃಂದದ ಶಂಕರ್ ಸೇರಿಗಾರ್, ಕಾರ್ಕಳ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ರವಿಚಂದ್ರ ಕಾರಂತ್, ಪ್ರಾಂಶುಪಾಲ ಉಮೇಶ್, ಉಪ ಪ್ರಾಂಶುಪಾಲ ದಿವಾಕರ್ ಮರಕಾಲ ಎಸ್, ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ವಿಜಯಶೆಟ್ಟಿ, ಕಾರ್ಕಳ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಅಧ್ಯಕ್ಷ ಸಂತೋಷ್ ಕುಮಾರ್ ಶೆಟ್ಟಿ, ಎಸ್‌ಡಿಎಂಸಿ ಸದಸ್ಯ ವಿಷ್ಣುಮೂರ್ತಿ ಉಪಸ್ಥಿತರಿದ್ದರು. ಸಂಸ್ಥೆ ದೈಹಿಕ ಶಿಕ್ಷಣ ಶಿಕ್ಷಕ ಎಚ್.ಪಿ.ಮಂಜೇಗೌಡ ಸ್ವಾಗತಿಸಿದರು. ದಿವಾಕರ್ ಮರಕಾಲ ಎಸ್. ವಂದಿಸಿದರು. ಗಣಿತ ಅಧ್ಯಾಪಕ ವೆಂಕಟರಮಣ ಕಲ್ಕೂರ್ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net