ಕಡಬದಲ್ಲಿ ತಾಲೂಕು ಮಟ್ಟದ ಸಂಜೀವಿನಿ ಸಂತೆ

Kdb_Sante
Published on

ಕಡಬ: ದೀನ್ ದಯಾಳ್ ಅಂತ್ಯೋದಯ ಯೋಜನೆ-ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನದ ಅಂಗವಾಗಿ ಕಡಬ ತಾಲೂಕು ಪಂಚಾಯಿತಿ ಹಾಗೂ ಸಂಜೀವಿನಿ ಗ್ರಾಪಂ ಮಟ್ಟದ ಒಕ್ಕೂಟಗಳ ವತಿಯಿಂದ ಕಡಬ ತಾಲೂಕು ಪಂಚಾಯಿತಿ ಆವರಣದಲ್ಲಿ ಸಂಜೀವಿನಿ ಸಂತೆ ಬುಧವಾರ ನಡೆಯಿತು.

ಸಂತೆಯನ್ನು ಉದ್ಘಾಟಿಸಿದ ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಕೆ.ಇ.ಜಯರಾಮ್ ಮಾತನಾಡಿ, ಸಂಜೀವಿನಿ ಸ್ವಸಹಾಯ ಸಂಘಗಳ ಮಹಿಳೆಯರು ತಯಾರಿಸಿದ ಪದಾರ್ಥಗಹನ್ನು ಪ್ರೋತ್ಸಾಹಿಸಿದಾಗ ಸ್ವಾವಲಂಬಿ ಬದುಕಿಗೆ ಪ್ರೇರಣೆ ನೀಡಿದಂತಾಗುತ್ತದೆ. ಇಂತಹ ಸಂತೆಗಳು ಗ್ರಾಮಮಟ್ಟದಲ್ಲಿ ನಡೆಯಬೇಕು ಎಂದರು.

ಕಡಬ ತಾಲೂಕು ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ನವೀನ್ ಕುಮಾರ್ ಭಂಡಾರಿ ಮಾತನಾಡಿದರು. ದ.ಕ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಹರಿಪ್ರಸಾದ್ ಗೌಡ, ಕಡಬ ತಾಲೂಕು ಕುಮಾರಾಧಾರಾ ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಸುಜಾತ ಗಣೇಶ್, ತಾಪಂ ಸಹಾಯಕ ನಿರ್ದೆಶಕರಾದ ಚೆನ್ನಪ್ಪ ಗೌಡ ಕಜೆಮೂಲೆ, ಯಶವಂತ ಬೆಳ್ಚಡ, ವ್ಯವಸ್ಥಾಪಕ ಭುವನೇಂದ್ರ ಜೈನ್ ಉಪಸ್ಥಿತರಿದ್ದರು.

ನರೇಗಾ ಯೋಜನೆಯ ಮಾಹಿತಿ ಶಿಕ್ಷಣ ಸಂವಹನಾ ಸಂಯೋಜಕ ಭರತ್ ರಾಜ್ ಸ್ವಾಗತಿಸಿದರು. ಸಂಜೀವಿನಿ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ಜಗತ್ ಕೆ.ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net