ಸುಬ್ರಹ್ಮಣ್ಯ: ಗ್ರಾಮೀಣ ಕ್ರೀಡಾಳುಗಳು ದೇಶಕ್ಕೆ ಹೆಮ್ಮೆ ತರುವ ಸಾಧನೆ ಮಾಡಬೇಕು. ಇದಕ್ಕಾಗಿ ಕಠಿಣ ಪರಿಶ್ರಮ ಮತ್ತು ಬದ್ಧತೆಯ ಅಭ್ಯಾಸ ಬೇಕು ಎಂದು ಎಸ್‌ಎಸ್ ಪಿಯು ಕಾಲೇಜಿನ ಪ್ರಾಂಶುಪಾಲ ಸೋಮಶೇಖರ ನಾಯಕ್ ಹೇಳಿದರು.
ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ಶ್ರೀ ಸುಬ್ರಹ್ಮಣ್ಯೇಶ್ವರ ಪದವಿಪೂರ್ವ ಕಾಲೇಜು ಸುಬ್ರಹ್ಮಣ್ಯ ಆಶ್ರಯದಲ್ಲಿ, ಸುಬ್ರಹ್ಮಣ್ಯದ ಎಸ್‌ಎಸ್ ಪಿಯು ಕಾಲೇಜಿನಲ್ಲಿ ಸೋಮವಾರ ನಡೆದ ಕಡಬ ತಾಲೂಕುಮಟ್ಟದ ಷಟ್ಲ್ ಬ್ಯಾಡ್ಮಿಂಟನ್ ಪಂದ್ಯಾಟದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಯೇಸುರಾಜ್ ಉದ್ಘಾಟಿಸಿದರು. ದೈಹಿಕ ಶಿಕ್ಷಣ ಉಪನ್ಯಾಸಕ ರಾಧಾಕೃಷ್ಣ ಚಿದ್ಗಲ್, ಕ್ರೀಡಾ ಸಂಯೋಜಕಿ ಜ್ಯೋತಿ ಪಿ.ರೈ, ಕ್ರೀಡಾ ಕಾರ್ಯದರ್ಶಿ ಹಿತೇಶ್ ಮೊದಲಾದವರಿದ್ದರು. ಉಪನ್ಯಾಸಕಿ ಶ್ರುತಿ ಕಾರ್ಯಕ್ರಮ ನಿರೂಪಿಸಿದರು. ವಿವಿಧ ಕಾಲೇಜುಗಳ ಕ್ರೀಡಾಳುಗಳು ಉಪಸ್ಥಿತರಿದ್ದರು.