ಸಾಧನೆಗೆ ಕ್ರೀಡಾಕೂಟ ಉತ್ತಮ ವೇದಿಕೆ

ಅರಸೀಕೆರೆ ಗ್ರಾಮಾಂತರ: ಕಲೆ, ಸಾಹಿತ್ಯದಂತೆ ಅಪ್ರತಿಮ ಸಾಧನೆಗೈದು ತಮ್ಮ ಬದುಕು ರೂಪಿಸಿಕೊಳ್ಳುವ ಜತೆಗೆ ಕೋಟ್ಯಂತರ ಯುವ ಕ್ರೀಡಾಪಟುಗಳಿಗೆ ಆದರ್ಶರಾಗುವ ಅವಕಾಶವನ್ನು ಕ್ರೀಡಾ ಕ್ಷೇತ್ರ ಕಲ್ಪಿಸಿಕೊಡುತ್ತದೆ. ಹೀಗಾಗಿ ಕ್ರೀಡಾಪಟುಗಳು ಸ್ಥಳೀಯ ಮಟ್ಟದ ಕ್ರೀಡಾಕೂಟಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಸಾಧಕರಾಗುವಂತೆ ಹಾಸನ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಶಂಭುನಾಥ ಸ್ವಾಮೀಜಿ ಕರೆ ನೀಡಿದರು.

ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಹಾಗೂ ನಗರದ ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನಗರದ ಹೊರವಲಯದ ಜೇನುಕಲ್ ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಪದವಿಪೂರ್ವ ಕಾಲೇಜು ವಿಭಾಗದ ತಾಲೂಕು ಮಟ್ಟದ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಆಶೀರ್ವಚನ ನೀಡಿದರು.

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಮುಂದೆ ಗುರಿ, ಹಿಂದೆ ಗುರುವಿನ ಪಾತ್ರ ಅತ್ಯಂತ ಮಹತ್ವದ್ದಾಗಿರುತ್ತದೆ. ತಮ್ಮ ನೆಚ್ಚಿನ ಕ್ರೀಡೆಯಲ್ಲಿ ಸ್ಪಷ್ಟ ಗುರಿಯೊಂದಿಗೆ ಸಮರ್ಥ ಗುರುವಿನ ಮಾರ್ಗದರ್ಶನ ಪಡೆದು ಸಾಗಬೇಕು. ಜತೆಗೆ ಶಾಲಾ, ಕಾಲೇಜು ಮಟ್ಟದ ಕ್ರೀಡಾಕೂಟ ತಮಗೆ ಒಂದು ಉತ್ತಮ ವೇದಿಕೆಯಾಗಲಿದೆ. ಹಾಗಾಗಿ ಸ್ಥಳೀಯ ಮಟ್ಟದ ಕ್ರೀಡಾಕೂಟಗಳ ಬಗ್ಗೆ ತಾತ್ಸಾರ ಮನೋಭಾವ ಬೇಡ ಎಂದು ಕಿವಿಮಾತು ಹೇಳಿದರು.
ನಗರಸಭೆ ಅಧ್ಯಕ್ಷ ಎಂ.ಸಮಿವುಲ್ಲಾ ಮಾತನಾಡಿ, ದೈಹಿಕ ಹಾಗೂ ಮಾನಸಿಕವಾಗಿ ಸದೃಢರಾಗಬೇಕಾದರೆ ನಮ್ಮ ದಿನಚರಿಯ ಒಂದೆರಡು ಗಂಟೆಗಳನ್ನು ಆಟೋಟಗಳಲ್ಲಿ ಕಳೆಯುವ ಹವ್ಯಾಸ ಬೆಳೆಸಿಕೊಳ್ಳಬೇಕು. ಅದರಿಂದ ಉತ್ತಮ ಆರೋಗ್ಯ ನಮ್ಮದಾಗುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಮಕ್ಕಳು ಸ್ಪರ್ಧೆಗಳಲ್ಲಿ ಪಾಲ್ಗೊಳ್ಳುವುದಕ್ಕಿಂತ ಮೊಬೈಲ್‌ನಲ್ಲಿ ಮುಳುಗಿ ಹೋಗುತ್ತಿರುವುದು ಕಳವಳದ ಸಂಗತಿ ಎಂದರು.

ಡಿವೈಎಸ್‌ಪಿ ಲೋಕೇಶ್ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜತೆಗೆ ಶಾಲಾ, ಕಾಲೇಜು ಮಟ್ಟದಲ್ಲಿ ನಡೆಯುವ ಕ್ರೀಡಾಕೂಟಗಳಲ್ಲಿ ಪಾಲ್ಗೊಳ್ಳುವ ಹವ್ಯಾಸ ಬೆಳೆಸಿಕೊಳ್ಳಬೇಕು. ತಾವು ಪಡೆಯುವ ಅಂಕಗಳ ಜತೆಗೆ ಕ್ರೀಡಾಕೂಟದಲ್ಲಿ ಪಾಲ್ಗೊಂಡು ಪಡೆಯುವ ಸರ್ಟಿಫಿಕೇಟ್‌ಗಳು ಸಹ ತಾವು ಉದ್ಯೋಗಕ್ಕೆ ಅರ್ಜಿ ಸಲ್ಲಿಸಿದಾಗ ಉಪಯುಕ್ತವಾಗುತ್ತವೆ ಎಂದು ತಿಳಿಸಿದರು.

ಸಮಾರಂಭದಲ್ಲಿ ನಗರಸಭೆ ಪೌರಾಯುಕ್ತ ಕೃಷ್ಣಮೂರ್ತಿ, ಕ್ಷೇತ್ರ ಶಿಕ್ಷಣಾಧಿಕಾರಿ ಮೋಹನ್ ಕುಮಾರ್, ರಾಷ್ಟ್ರೀಯ ಕ್ರೀಡಾಪಟುಗಳಾದ ವಿ.ಕಾರ್ತಿಕ್, ಪೂಜಾ ನಾಗೇಂದ್ರ, ಹಿರಿಯ ಕ್ರೀಡಾಪಟು ಎಚ್.ಟಿ.ಮಹದೇವ್, ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜಿನ ಪ್ರಾಶುಪಾಲ ಡಾ.ಲಿಂಗರಾಜು, ದೈಹಿಕ ಶಿಕ್ಷಣ ಶಿಕ್ಷಕರಾದ ನಾಗೇಶ್, ಗೀತಾ, ಸ್ವಾತಿ, ಜೀವನ್, ಸಂದೀಪ್,ಪ್ರದೀಪ್, ರವಿ ಮತ್ತಿತರು ಉಪಸ್ಥಿತರಿದ್ದರು,

Share This Article

ಭಗವಂತ ಶ್ರೀರಾಮನ ಜೀವನದ ಈ 5 ತತ್ವವನ್ನು ಅಳವಡಿಸಿಕೊಳ್ಳಿ | Success Tips

ಭಾರತದಲ್ಲಿ ಶ್ರೀರಾಮನನ್ನು ಅತಿ ಹೆಚ್ಚು ಪೂಜಿಸಲಾಗುತ್ತದೆ. ಲಂಕಾದ ರಾವಣನ ಮೇಲೆ ಶ್ರೀರಾಮನ ವಿಜಯವನ್ನು ಇಂದಿಗೂ ದಸರಾ…

ಅತಿಯಾಗಿ ಯೋಚಿಸುವುದನ್ನು ನಿಲ್ಲಿಸಿ! ಸೈಲೆಂಟ್ ಆಗಿ ನಿಮ್ಮನ್ನು ಕಿಲ್ಲ ಮಾಡುತ್ತೆ Over Thinking ಅಭ್ಯಾಸ…

ಬೆಂಗಳೂರು:  ಇಂದಿನ ಬಿಡುವಿಲ್ಲದ ಜೀವನದಲ್ಲಿ ನಾವೆಲ್ಲರೂ ಸಣ್ಣ ಪುಟ್ಟ ವಿಚಾರಗಳನ್ನು ಹೆಚ್ಚು ಯೋಚಿಸುತ್ತೇವೆ ( Over…

ಹೆಂಗಸರು ಪ್ರತಿದಿನ ಹೂವು ಮುಡಿಯುವುದರಿಂದ ಆಗುವ ಲಾಭಗಳೇನು?…Wearing Flower

ಬೆಂಗಳೂರು:  ಹೆಣ್ಣುಮಕ್ಕಳು ತಲೆಗೆ ಎಣ್ಣೆ ಹಚ್ಚಿ, ತಲೆ ಬಾಚಿಕೊಂಡು, ನೀಟಾಗಿ ಹೆಣೆದು, ಹೂವಿನಿಂದ ( Wearing…