ಕ್ರೀಡೆಗೆ ಪ್ರೋತ್ಸಾಹ ಅಗತ್ಯ : ವನಿತಾ ಕೆ.ಸನಿಲ್ ಸಲಹೆ

New Project (32)
Published on

ಮೂಲ್ಕಿ: ಪ್ರಕೃತಿಯೊಂದಿಗೆ ಬೆರೆತು ನಡೆಯುವ ಆಟೋಟಗಳು ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುವ ಕಾರಣ ಹೆತ್ತವರು ಮಕ್ಕಳನ್ನು ಸೃಜನಶೀಲತೆ ಹಾಗೂ ಕ್ರೀಡಾ ಪ್ರೇಮಿಗಳಾಗಿ ಬೆಳೆಯುವಂತೆ ನೋಡಿಕೊಂಡಲ್ಲಿ ಈ ಭಾಗದಲ್ಲಿ ಕ್ರೀಡಾ ಕ್ಷೇತ್ರದ ಸಾಧಕರ ಸಂಖ್ಯೆ ಹೆಚ್ಚಾಗಲು ಸಾಧ್ಯವಿದೆ ಎಂದು ತೋಕೂರು ಮಹಿಳಾ ಮಂಡಲದ ಕಾರ್ಯದರ್ಶಿ ವನಿತಾ ಕೆ.ಸನಿಲ್ ಹೇಳಿದರು.

ಫೇಮಸ್ ಯೂತ್ ಕ್ಲಬ್ ಮತ್ತು ಮಹಿಳಾ ಮಂಡಲ 10ನೇ ತೋಕೂರು, ಹಳೆಯಂಗಡಿ ಪ್ರಾಯೋಜಕತ್ವದಲ್ಲಿ ತಾಲೂಕುಮಟ್ಟದ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು. ಫೇಮಸ್ ಯೂತ್ ಕ್ಲಬ್ ಅಧ್ಯಕ್ಷ ಭಾಸ್ಕರ್ ಅಮೀನ್ ತೋಕೂರು ಅಧ್ಯಕ್ಷತೆ ವಹಿಸಿದ್ದರು. ತೋಕೂರು ಗುತ್ತು ಶಕುಂತಲಾ ಜೆ.ಶೆಟ್ಟಿ, ವಿಶ್ವಬ್ಯಾಂಕ್ ಕುಡಿಯುವ ನೀರು ಮತ್ತು ಪರಿಸರ ನೈರ್ಮಲ್ಯ ಸಮಿತಿಯ ನಿಕಟಪೂರ್ವ ಅಧ್ಯಕ್ಷ ದಿನಕರ್ ಸಾಲ್ಯಾನ್, ಫೇಮಸ್ ಯೂತ್ ಕ್ಲಬ್ ಗೌರವಾಧ್ಯಕ್ಷ ಗುರುರಾಜ ಎಸ್.ಪೂಜಾರಿ, ಮಹಿಳಾ ಮಂಡಲದ ಅಧ್ಯಕ್ಷೆ ಪ್ರೇಮಲತಾ ಯೋಗೀಶ್, ಕ್ರೀಡಾ ಕಾರ್ಯದರ್ಶಿ ಸಂಪತ್ ಜೆ.ಶೆಟ್ಟಿ ಮತ್ತು ಪ್ರಮೋದ್ ದೇವಾಡಿಗ ಉಪಸ್ಥಿತರಿದ್ದರು.

ವಿವಿಧ ವಿಭಾಗಗಳಲ್ಲಿ ಕ್ರೀಡಾ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕುಸುಮ ಮತ್ತು ಬಳಗ ಪ್ರಾರ್ಥನೆಗೈದರು. ಮಹಮ್ಮದ್ ಶರೀಫ್ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net