ಇಂದ್ರಪ್ರಸ್ಥ, ಬೆಥನಿ ಶಾಲೆ ಪ್ರಥಮ : ತಾಲೂಕುಮಟ್ಟದ ಥ್ರೋಬಾಲ್ ಪಂದ್ಯಾಟ

Published on

ಪುತ್ತೂರು ಗ್ರಾಮಾಂತರ: ಸುಳ್ಯಪದವು ಶ್ರೀ ಬಾಲಸುಬ್ರಹ್ಮಣ್ಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಆತಿಥ್ಯದಲ್ಲಿ ನಡೆದ ಪುತ್ತೂರು ತಾಲೂಕುಮಟ್ಟದ ಬಾಲಕರ-ಬಾಲಕಿಯರ ಥ್ರೋಬಾಲ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯ, ಬಾಲಕಿಯರ ವಿಭಾಗದಲ್ಲಿ ಪುತ್ತೂರಿನ ದರ್ಬೆ ಪಾಂಗ್ಲಾಯಿಯ ಬೆಥನಿ ಆಂಗ್ಲ ಮಾಧ್ಯಮ ಶಾಲೆ ತಂಡ ಪ್ರಥಮ ಸ್ಥಾನಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ.

ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ, ಸಾಕ್ಷರತಾ ಇಲಾಖೆ, ಸುಳ್ಯಪದವು ಶ್ರೀ ಬಾಲಸುಬ್ರಹ್ಮಣ್ಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಸಹಯೋಗದಲ್ಲಿ ಸೋಮವಾರ ಪುತ್ತೂರು ತಾಲೂಕುಮಟ್ಟದ ಬಾಲಕ-ಬಾಲಕಿಯರ ಥ್ರೋಬಾಲ್ ಪಂದ್ಯಾಟ ಸುಳ್ಯಪದವು ಸರ್ವೋದಯ ಪ್ರೌಢಶಾಲೆ ಕ್ರೀಡಾಂಗಣದಲ್ಲಿ ನಡೆಯಿತು.

ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಪುತ್ತೂರಿನ ದರ್ಬೆ ಪಾಂಗ್ಲಾಯಿಯ ಬೆಥನಿ ಆಂಗ್ಲ ಮಾಧ್ಯಮ ಶಾಲೆ ತಂಡ.
ಬಾಲಕಿಯರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಪುತ್ತೂರಿನ ದರ್ಬೆ ಪಾಂಗ್ಲಾಯಿಯ ಬೆಥನಿ ಆಂಗ್ಲ ಮಾಧ್ಯಮ ಶಾಲೆ ತಂಡ.

ಬಾಲಕರ ವಿಭಾಗದ ಫೈನಲ್ ಪಂದ್ಯಾಟದಲ್ಲಿ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದ ವಿದ್ಯಾರ್ಥಿಗಳ ತಂಡ ಸೇಂಟ್ ಮೇರಿಸ್ ಶಾಲೆ ತಂಡವನ್ನು, ಬಾಲಕಿಯರ ವಿಭಾಗದಲ್ಲಿ ಪಾಂಗ್ಲಾಯಿಯ ಬೆಥನಿ ಶಾಲೆ ತಂಡ ಸಾಲ್ಮರದ ಮೌಂಟ್ ವ್ಯೆ ಶಾಲೆ ತಂಡವನ್ನು ಮಣಿಸಿ ಪ್ರಥಮ ಸ್ಥಾನ ಪಡೆದುಕೊಂಡವು.

ಸುಳ್ಯಪದವು ಶ್ರೀ ಬಾಲ ಸುಬ್ರಹ್ಮಣ್ಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಆತಿಥ್ಯದಲ್ಲಿ ನಡೆದ ಪುತ್ತೂರು ತಾಲೂಕುಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದ ತಂಡ .
ಸುಳ್ಯಪದವು ಶ್ರೀ ಬಾಲ ಸುಬ್ರಹ್ಮಣ್ಯ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಆತಿಥ್ಯದಲ್ಲಿ ನಡೆದ ಪುತ್ತೂರು ತಾಲೂಕುಮಟ್ಟದ ಥ್ರೋಬಾಲ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯದ ತಂಡ .

ವಿಜೇತ ತಂಡಗಳಿಗೆ ಬಹುಮಾನ ವಿತರಿಸಲಾಯಿತು. ಸರ್ವೋದಯ ವಿದ್ಯಾಸಂಸ್ಥೆ ಸಂಚಾಲಕ ಮಹಾದೇವ ಭಟ್ ಕೊಲ್ಯ, ಗಡಿನಾಡು ಕನ್ನಡ ಸಂಸ್ಕೃತಿ ಸಂಘ ಅಧ್ಯಕ್ಷ ಚನಿಯಪ್ಪ ನಾಯ್ಕ, ವಿನಯ ಗೌಡ ಬೋಳುಗುಡ್ಡೆ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಪ್ರಕಾಶ್ ಮರದಮೂಲೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಜನಜಾಗೃತಿ ವಲಯ ಸಮಿತಿ ಅಧ್ಯಕ್ಷ ದಿನೇಶ್ ರೈ ಕುತ್ಯಾಳ, ಬಡಗನೂರು ಗ್ರಾಪಂ ಮಾಜಿ ಉಪಾಧ್ಯಕ್ಷ ಗಂಗಾಧರ ರೈ, ಸರ್ವೋದಯ ವಿದ್ಯಾಸಂಸ್ಥೆ ಮುಖ್ಯಶಿಕ್ಷಕ ಸುಕೇಶ್ ರೈ, ಪ್ರೌಢಶಾಲಾ ವಿಭಾಗದ ತಾಲೂಕು ನೋಡಲ್ ಅಧಿಕಾರಿ ಸುಧೀರ್ ರೈ, ಪ್ರಾಥಮಿಕ ವಿಭಾಗದ ನೋಡಲ್ ಅಧಿಕಾರಿ ಸೀತಾರಾಮ, ಗ್ರೇಡ್-2 ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಸುಧಾಕರ್, ಆನಂದ ಪಾದೆಗದ್ದೆ, ಸುರೇಶ್ ಸತ್ಯಸಾಯಿ, ಶ್ರೀಧರ್ ಪೂಜಾರಿ ಮತ್ತಿತರರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net