25.1 C
Bangalore
Friday, December 6, 2019

ತಾಪಂ ಕಟ್ಟಡ ಕಾಮಗಾರಿ ಪೂರ್ಣ

Latest News

ಯೋಗ ತರಬೇತಿಗೆ ಆಸ್ಟ್ರೇಲಿಯಾದಿಂದ ಆಹ್ವಾನ, ಬಳ್ಳಾರಿ ಸಾಧನಾ ಯೋಗ ಕೇಂದ್ರದ ರೂಪಾ ಮುರಳೀಧರ್ ಹೇಳಿಕೆ

ಬಳ್ಳಾರಿ: ಆಸ್ಟ್ರೇಲಿಯಾದ ಜನರಿಗೆ ಯೋಗ ಪದ್ಧತಿ ಬಗ್ಗೆ ತುಂಬಾ ಆಸಕ್ತಿ ಇದೆ. ಸೇವಾ ಆಸ್ಟ್ರೇಲಿಯಾ ಸಂಸ್ಥೆ ಮೂಲಕ ಆಸ್ಟ್ರೇಲಿಯಾದಲ್ಲಿ ಯೋಗ ತರಬೇತಿ ನೀಡಲು...

ಸೆನ್ಸೆಕ್ಸ್​ 334 ಅಂಶಕ್ಕೂ ಹೆಚ್ಚು ಕುಸಿತ: ನಿಫ್ಟಿ 12,000ಕ್ಕೂ ಕೆಳಕ್ಕೆ…

ಮುಂಬೈ: ಷೇರುಪೇಟೆಯ ವಾರಾಂತ್ಯದ ದಿನದ ವಹಿವಾಟಿನ ಕೊನೆಗೆ ಬಾಂಬೆ ಸ್ಟಾಕ್​ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್​ 334 ಅಂಶ ಕುಸಿತ ಮತ್ತು ನ್ಯಾಷನಲ್...

ಬಳ್ಳಾರಿ ಜಿಲ್ಲೆಯಲ್ಲಿ ನರೇಗಾ ಕಾಮಗಾರಿ ಪರಿಶೀಲಿಸಿದ ಕೇಂದ್ರ ಅಧ್ಯಯನ ತಂಡ

ಬಳ್ಳಾರಿ: ನರೇಗಾ ರಾಷ್ಟ್ರೀಯ ಪ್ರಶಸ್ತಿ ಶಿಫಾರಸಿಗೆ ದೇಶದ ಒಂಬತ್ತು ಜಿಲ್ಲೆಗಳ ಪೈಕಿ ಕರ್ನಾಟಕದಿಂದ ಆಯ್ಕೆಯಾಗಿರುವ ಬಳ್ಳಾರಿ ಜಿಲ್ಲೆಗೆ ಕೇಂದ್ರ ಅಧ್ಯಯನ ತಂಡ ಶುಕ್ರವಾರ...

ಹಂಪಿ ವಿವಿ ಕೇಂದ್ರ ಸ್ಥಳಾಂತರ ಕೈಬಿಡಿ

ಬಾದಾಮಿ: ಬನಶಂಕರಿಯಲ್ಲಿರುವ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕೇಂದ್ರವನ್ನು ಸ್ಥಳಾಂತರ ಮಾಡಬಾರದು ಎಂದು ಆಗ್ರಹಿಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿ...

ಅವೈಜ್ಞಾನಿಕ ಉಳುಮೆಯಿಂದ ಮಣ್ಣಿನ ಸವಕಳಿ, ಹೊಸಪೇಟೆ ಕೃಷಿ ಇಲಾಖೆ ಡಿಡಿ ಸಹದೇವ ಯರಗುಪ್ಪ ಹೇಳಿಕೆ

ಕೂಡ್ಲಿಗಿ: ರೈತರ ಜೀವನಕ್ಕೆ ಆಧಾರವಾಗಿರುವ ಮಣ್ಣಿನ ಸಂರಕ್ಷಣೆ ಮಾಡಬೇಕಾದ ಅಗತ್ಯವಿದೆ ಎಂದು ಕೃಷಿ ಇಲಾಖೆ ಹೊಸಪೇಟೆ ವಿಭಾಗದ ಉಪನಿರ್ದೇಶಕ ಸಹದೇವ ಯರಗುಪ್ಪ ಹೇಳಿದರು. ಪಟ್ಟಣದ...

<ಜೂನ್‌ನಲ್ಲಿ ಉದ್ಘಾಟನೆ * ಮೂರು ಅಂತಸ್ತಿನ ಕಟ್ಟಡ>

ಹರೀಶ್ ಮೋಟುಕಾನ ಮಂಗಳೂರು

ಮಂಗಳೂರು ತಾಲೂಕು ಪಂಚಾಯಿತಿಯ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ಪೂರ್ಣಗೊಂಡು ವಿದ್ಯುತ್ ಸಂಪರ್ಕ ಕೆಲಸ ಪ್ರಗತಿಯಲ್ಲಿದೆ. ಜೂನ್ ತಿಂಗಳಿನಲ್ಲಿ ಉದ್ಘಾಟನೆಗೊಳ್ಳುವ ನಿರೀಕ್ಷೆ ಇದೆ.

ತಾಪಂನ ಹಳೇ ಕಟ್ಟಡ ಶಿಥಿಲಗೊಂಡಿದ್ದು, ಅದರ ಉಪಯೋಗ ಅಪಾಯಕಾರಿ ಎಂದು ಇಂಜಿನಿಯರಿಂಗ್ ವಿಭಾಗದಿಂದ ಸೂಚನೆ ಬಂದ ಹಿನ್ನೆಲೆಯಲ್ಲಿ ಹೊಸ ಕಟ್ಟಡ ನಿರ್ಮಾಣಕ್ಕೆ ನಿರ್ಧರಿಸಲಾಗಿತ್ತು. ಜತೆಗೆ ಅದು ಹಳೇ ಕಟ್ಟಡವಾದ ಕಾರಣ ಸ್ಥಳಾವಕಾಶದ ಕೊರತೆಯೂ ಇತ್ತು. ಪ್ರಸ್ತುತ ಹೊಸ ಕಟ್ಟಡ ಮೂರು ಅಂತಸ್ತುಗಳಲ್ಲಿ ನಿರ್ಮಾಣವಾಗಿದ್ದು, ವಿಶಾಲ ಸ್ಥಳವನ್ನು ಹೊಂದಿದೆ.

3.50 ಕೋಟಿ ರೂಪಾಯಿ ವೆಚ್ಚ: ಮಂಗಳೂರು ತಾಪಂಗೆ ನಗರದ ಹಂಪನಕಟ್ಟೆಯಲ್ಲಿ ಒಟ್ಟು 63 ಸೆಂಟ್ಸ್ ನಿವೇಶನವಿದ್ದು, ಹೊಸ ಕಟ್ಟಡ ನಿರ್ಮಾಣಕ್ಕೆ ಜಿಪಂನಿಂದ 1.50 ಕೋಟಿ ರೂಪಾಯಿ ಹಾಗೂ ರಾಜ್ಯ ಸರ್ಕಾರದ 2 ಕೋಟಿ ರೂಪಾಯಿ ಅನುದಾನ ಸೇರಿ ಒಟ್ಟು 3.50 ಕೋಟಿ ರೂಪಾಯಿ ಅನುದಾನದಲ್ಲಿ ಕಾಮಗಾರಿ ನಡೆದಿದೆ. 2017 ಮೇ 21ರಂದು ಆಗಿನ ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ ರೈ ಶಿಲಾನ್ಯಾಸ ನೆರವೇರಿಸಿದ್ದರು. ಹೊರಭಾಗದಲ್ಲಿ ಗೋಡೆಗಳಿಗೆ ಬಣ್ಣ ಬಳಿಯಲಾಗಿದೆ. ಮಹಡಿಯಲ್ಲಿರುವರ ವಿವಿಧ ಕೊಠಡಿಗಳ ನೆಲಕ್ಕೆ ಟೈಲ್ಸ್ ಅಳವಡಿಸಲಾಗಿದೆ. ಕಿಟಕಿ, ಬಾಗಿಲುಗಳನ್ನು ಜೋಡಿಸಲಾಗಿದೆ.

ಕಟ್ಟಡದ ವಿಶೇಷತೆ: ತಳ ಅಂತಸ್ತು, ನೆಲ ಅಂತಸ್ತು ಮತ್ತು ಎರಡು ಮಹಡಿಗಳನ್ನು ನೂತನ ತಾಲೂಕು ಪಂಚಾಯಿತಿ ಕಟ್ಟಡ ಒಳಗೊಂಡಿದೆ. ತಳಅಂತಸ್ತಿನಲ್ಲಿದೆ ಪಾರ್ಕಿಂಗ್, ನೆಲ ಅಂತಸ್ತಿನಲ್ಲಿ ಆಡಳಿತ ಕಚೇರಿ, ಕಾರ್ಯನಿರ್ವಾಹಕ ಅಧಿಕಾರಿ ಕಚೇರಿ ಹಾಗೂ ಉಪನಿರ್ದೇಶಕ ಕಚೇರಿ ಬರಲಿದೆ. ಮೊದಲ ಮಹಡಿಯಲ್ಲಿ ಅಧ್ಯಕ್ಷರು, ಉಪಾಧ್ಯಕ್ಷರ ಕಚೇರಿ, ಬಿಸಿಎಂ ಮತ್ತು ಅಕ್ಷರ ದಾಸೋಹ ಅಧಿಕಾರಿಗಳ ಕಚೇರಿ, ಸದಸ್ಯರ ವಿಶ್ರಾಂತಿ ಕೊಠಡಿ ಇರಲಿದೆ. ತಾಲೂಕು ಪಂಚಾಯಿತಿ ಸಭೆ ನಡೆಸಲು ಹಾಗೂ ಇತರ ಸಭೆಗಳನ್ನು ನಡೆಸಲು ಎರಡನೇ ಮಹಡಿಯಲ್ಲಿ 3500 ಚದರ ಅಡಿಯ ಸಭಾಂಗಣವಿದೆ.

2018 ಸೆಪ್ಟೆಂಬರ್ ತಿಂಗಳಿನಲ್ಲಿ ಕಟ್ಟಡ ಕಾಮಗಾರಿ ಪೂರ್ಣಗೊಳ್ಳಬೇಕಿತ್ತು. ಮರಳು ಹಾಗೂ ಇತರ ತೊಂದರೆಗಳಿಂದ ವಿಳಂಬವಾಗಿದೆ. ಈಗ ಕಾಮಗಾರಿ ಪೂರ್ಣಗೊಂಡಿದೆ. ನೀತಿ ಸಂಹಿತೆ ಮುಗಿದ ಕೂಡಲೇ ಉದ್ಘಾಟನೆಗೆ ದಿನ ನಿಗದಿ ಮಾಡಲಾಗುವುದು.
ಮೊಹಮ್ಮದ್ ಮೋನು, ತಾಪಂ ಅಧ್ಯಕ್ಷ

ತಾಲೂಕು ಪಂಚಾಯಿತಿ ಕಟ್ಟಡ ಕಾಮಗಾರಿ ಪೂರ್ಣಗೊಂಡಿದೆ. ವಿದ್ಯುತ್ ವಯರಿಂಗ್ ಕೆಲಸ ಪ್ರಗತಿಯಲ್ಲಿದೆ. ಲೋಕಸಭಾ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಉದ್ಘಾಟನೆ ವಿಳಂಬವಾಗಿದೆ. ಜೂನ್ ತಿಂಗಳಿನಲ್ಲಿ ಕಟ್ಟಡ ಉದ್ಘಾಟನೆ ಮಾಡಲಾಗುವುದು.
ರಘು ಎ. ತಾಪಂ ಇ.ಒ

Stay connected

278,739FansLike
580FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...