More

  ತಂಬಾಕು ಸೇವನೆಯಿಂದ ಹದಗೆಡುತ್ತೆ ಆರೋಗ್ಯ, ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ಧರ್ಮೇಂದ್ರ ಎಚ್ಚರ

  ನೆಲಮಂಗಲ: ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುವ ತಂಬಾಕು ಉತ್ಪನ್ನಗಳಿಂದ ದೂರವಿದ್ದು, ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಜಿಲ್ಲಾ ತಂಬಾಕು ನಿಯಂತ್ರಣಾಧಿಕಾರಿ ಡಾ.ಧರ್ಮೇಂದ್ರ ತಿಳಿಸಿದರು.

  ಪಟ್ಟಣದ ಪವಾಡ ಶ್ರೀ ಬಸವಣ್ಣ ದೇವರ ಮಠದ ಅವರಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಖಾಖೆ, ಪದವಿ ಪೂರ್ವ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ತಂಬಾಕು ನಿಯಂತ್ರಣ ಫಟಕ ಗುರುವಾರ ಆಯೋಜಿಸಿದ್ದ ಗುಲಾಬಿ ಚಳುವಳಿ ಜಾಗೃತಿ ಜಾಥಾದಲ್ಲಿ ಮಾತನಾಡಿದರು.

  ಶಿಕ್ಷಣ ಸಂಸ್ಥೆಗಳ 100 ಮೀಟರ್ ಅಂತರದಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡುವುದು ಅಪರಾಧ. ಈ ನಿಟ್ಟಿನಲಿ ಶಾಲಾಕಾಲೇಜು ಆವರಣ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಚಿಲ್ಲರೆ ಅಂಗಡಿ ವ್ಯಾಪಾರಿಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟ ಮಾಡದಂತೆ ಎಚ್ಚರಿಕೆ ನೀಡುವ ನಿಟ್ಟಿನಲ್ಲಿ ಗುಲಾಬಿ ಚಳುವಳಿ ಆಯೋಜಿಸಲಾಗಿದೆ ಎಂದು ಹೇಳಿದರು.

  ತಂಬಾಕು ಉತ್ಪನ್ನಗಳ ಸೇವನೆ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಸಮಸ್ಯೆಗಳಿಗೂ ಕಾರಣವಾಗಬಹುದು. ದೇಶದಲ್ಲಿ ಪ್ರತಿದಿನ 2500 ಮಂದಿ ತಂಬಾಕು ಉತ್ಪನ್ನಗಳ ಸೇವನೆಯಿಂದ ಮೃತಪಡುತ್ತಿದ್ದಾರೆಂಬುದನ್ನು ಸಮೀಕ್ಷೆಯಿಂದ ದೃಢಪಟ್ಟಿದೆ. ಆದ್ದರಿಂದ ತಂಬಾಕುಮುಕ್ತ ಜೀವನವನ್ನು ಆಯ್ಕೆ ಮಾಡಿಕೊಂಡು ಸುಖಕರ ಜೀವನ ನಡೆಸಬೇಕು ಎಂದರು.

  ಜಿಲ್ಲಾ ಆರೋಗ್ಯಾಧಿಕಾರಿ ಡಾ.ಮಂಜುಳಾದೇವಿ ಮಾತನಾಡಿ, ಆಧುನಿಕತೆಯ ದಿನಗಳಲ್ಲಿ ಮಹಿಳಾ ಧೂಮಪಾನಿಗಳ ಸಂಖ್ಯೆ ಹೆಚ್ಚಾಗಿದೆ. ಇದರಿಂದ ಜನಿಸುವ ಮಕ್ಕಳ ಬೆಳವಣಿಗೆ ಮೇಲೂ ಪರಿಣಾಮ ಬೀರಲಿದೆ. ಅನಾರೋಗ್ಯಕ್ಕೂ ಕಾರಣವಾಗುವ ಧೂಮಪಾನ ಸೇವನೆಯಿಂದ ದೂರವಿದ್ದು, ಉತ್ತಮ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

  ಶ್ರೀ ಬಸವೇಶ್ವರ ಸಮೂಹ ಶಿಕ್ಷಣ ಸಂಸ್ಥೆಗಳಿರುವ ರಸ್ತೆಯಲ್ಲಿನ ಚಿಲ್ಲರೆ ಅಂಗಡಿಗಳ ಬಳಿ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ತೆರಳಿದ ಶಾಲಾ ಕಾಲೇಜು ವಿದ್ಯಾರ್ಥಿಗಳು ತಂಬಾಕು ಉತ್ಪನ್ನಗಳ ಮಾರಾಟ ಮಾಡದಂತೆ ಅಂಗಡಿ ಮಾಲೀಕರಿಗೆ ಗುಲಾಬಿ ನೀಡಿ ಮನವಿ ಮಾಡಿದರು.

  ಬೆಂ.ಗ್ರಾಮಾಂತರ ಜಿಲ್ಲಾ ತಂಬಾಕು ನಿಯಂತ್ರಣಾ ಘಟಕದ ಸಲಹೆಗಾರರಾದ ಸಂಪತ್, ವಿದ್ಯಾ, ತಾಲೂಕು ವೈದ್ಯಾಧಿಕಾರಿ ಡಾ.ಹರೀಶ್, ಆರೋಗ್ಯ ನಿರೀಕ್ಷಕ ಪ್ರತೀಪ್, ಸಿಬ್ಬಂದಿ ಶೈಲೇಂದ್ರ, ಪುಟ್ಟರಂಗೇಗೌಡ, ಹೇಮಂತ್, ಆನಂದ್, ಬಸವೇಶ್ವರ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕರಾದ ಸತೀಶ್, ರೂಪಿಣಿ ಮತ್ತಿತರರು ಉಪಸ್ಥಿತರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts