More

    ಮೋದಿ ಪಾತ್ರದಲ್ಲಿ ನಾನು ನಟಿಸುತ್ತೇನೆ ಎಂಬುದು ಸುಳ್ಳು; ನಟ ಸತ್ಯರಾಜ್​ ಬಿಚ್ಚಿಟ್ಟ್ರು ಅಸಲಿ ಸತ್ಯ

    ಚೆನ್ನೈ: ಎಸ್​.ಎಸ್​. ರಾಜಮೌಳಿ ನಿರ್ದೇಶದನ ಬಾಹುಬಲಿ ಚಿತ್ರದಲ್ಲಿ ಕಟ್ಟಪ್ಪ ಪಾತ್ರವನ್ನು ನಿರ್ವಹಿಸಿ ಅಪಾರ ಜನಮನ್ನಣೆ ಗಳಿಸಿದ್ದ ನಟ ಸತ್ಯರಾಜ್​ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ. ಕಳೆದ ಕೆಲ ದಿನಗಳಿಂದ ಅವರು ಪ್ರಧಾನಿ ಮೋದಿ ಅವರ ಜೀವನನ್ನು ಆಧರಿಸಿ ಮಾಡಲಾಗುತ್ತಿರುವ ಬಯೋಪಿಕ್​ನಲ್ಲಿ ನಟಿಸುತ್ತಾರೆ ಎಂದು ಹೇಳಲಾಗಿದ್ದು, ಇದೀಗ ಇದಕ್ಕೆ ಸಂಬಂಧಿಸಿದಂತೆ ನಟ ಸತ್ಯರಾಜ್​ ಪ್ರತಿಕ್ರಿಯಿಸಿದ್ದು, ಸುದ್ದಿಯನ್ನು ಅಲ್ಲಗೆಳೆದಿದ್ದಾರೆ.

    ತಮಿಳು ಸುದ್ದಿ ಮಾಧ್ಯಮಕ್ಕೆ ನೀಡಿರುವ ಸಂದರ್ಶನದಲ್ಲಿ ಈ ಕುರಿತು ಮಾತನಾಡಿರುವ ಸತ್ಯರಾಜ್​, ನಾನು ಪ್ರಧಾನಿ ನರೇಂದ್ರ ಮೋದಿ ಬಯೋಪಿಕ್​ನಲ್ಲಿ ನಟಿಸುತ್ತೇನೆ ಎನ್ನುವ ಸುದ್ದಿ ಇದೆ. ಆದರೆ, ಯಾರೊಬ್ಬರೂ ಪ್ರಧಾನಿ ಮೋದಿ ಪಾತ್ರ ಮಾಡಿ ಎಂದು ನನ್ನನ್ನು ಸಂಪರ್ಕಿಸಿಲ್ಲ. ಜನರು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ.

    Sathyaraj

    ಇದನ್ನೂ ಓದಿ: ಐಪಿಎಲ್​ನಲ್ಲಿ ಮತ್ತೊಂದು ಐತಿಹಾಸಿಕ ದಾಖಲೆ ಬರೆದ ವಿರಾಟ್​ ಕೊಹ್ಲಿ

    ಈ ಮುಂಚೆ ನ್ಯೂಸ್​ ಪೇಪರ್​ಗಳಲ್ಲಿ ಈ ರೀತಿಯ ಸುದ್ದಿಗಳು ಬರುತ್ತಿತ್ತು. ಈಗ ಸಾಮಾಜಿಕ ಜಾಲತಾಣಗಳಲ್ಲಿ ಈ ರೀತಿಯ ಸುದ್ದಿಗಳನ್ನು ಹಬ್ಬಿಸಲಾಗುತ್ತಿದೆ. ನಣಾಉ ಮೋದಿ ಅವರ ಪಾತ್ರದಲ್ಲಿ ನಟಿಸುತ್ತೇನೆ ಎಂಬುದು ಸುಳ್ಳು ಎಂದು ನಟ ಸತ್ಯರಾಜ್​ ಎದ್ದಿರುವ ಉಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಈ ಹಿಂದೆ . ದ್ರಾವಿಡ ವಿರೋಧಿ ಚಿಂತನೆಗಳನ್ನು ಹೊಂದಿರುವ ಸಿನಿಮಾಗಳಲ್ಲಿ ನಟಿಸುವುದಿಲ್ಲ ಎಂದು ನಟ ಸತ್ಯರಾಜ್​ ಹೇಳಿದ್ದರು.

    ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ.ಪ್ರೇಕ್ಷಕರು ಕೂಡ ಇಂತಹ ಸಿನಿಮಾಗಳನ್ನು ನೋಡಲು ಹೆಚ್ಚಿನ ಆಸಕ್ತಿ ತೋರಿಸುತ್ತಿದ್ದಾರೆ. ಹಾಗಾಗಿಯೇ ಸೆಲೆಬ್ರಿಟಿಗಳ ಬದುಕನ್ನು ಬೆಳ್ಳಿತೆರೆಗೆ ತರಲು ನಿರ್ದೇಶಕರು, ನಿರ್ಮಾಪಕರು ಆಸಕ್ತಿ ತೋರಿಸುತ್ತಾರೆ. ಅದೇ ರೀತಿ 2019ರಲ್ಲಿ  ‘ಪಿಎಂ ನರೇಂದ್ರ ಮೋದಿ’ ಎಂಬ ಶೀರ್ಷಿಕೆಯ ಈ ಚಿತ್ರವನ್ನು ಹಿಂದಿಯಲ್ಲಿ ಚಿತ್ರೀಕರಿಸಲಾಗಿತ್ತು. ಓಮಂಗ್ ಕುಮಾರ್ ನಿರ್ದೇಶನದ ಈ ಚಿತ್ರ ಪ್ರೇಕ್ಷಕರನ್ನು ರಂಜಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts