ಚೆನ್ನೈ: ಹೃದಯಾಘಾತದಿಂದ ಮೃತಪಟ್ಟ ಸೌತ್ ಸಿನಿ ಇಂಡಸ್ಟ್ರಿಯ ಖ್ಯಾತ ಖಳ ನಟ ಡೇನಿಯಲ್ ಬಾಲಾಜಿ ಸಾವಿನ ಸುದ್ದಿ ಸಿನಿಪ್ರಿಯರಲ್ಲಿ ಆಘಾತವನ್ನುಂಟು ಮಾಡಿದ್ದು, ನಟನ ದಿಢೀರ್ ಅಗಲಿಕೆಯ ಶಾಕ್‌ನಿಂದ ಸಿನಿಪ್ರಿಯರು ಇನ್ನೂ ಹೊರಬಂದಿಲ್ಲ.
ನಟ ಡೇನಿಯಲ್ ಬಾಲಾಜಿ ಕನ್ನಡ ಖ್ಯಾತ ನಿರ್ದೇಶಕ ಸಿದ್ದಲಿಂಗಯ್ಯ ಕುಟುಂಬ ಸದಸ್ಯರಾಗಿದ್ದು, ಚಿತ್ರಗಳಲ್ಲಿ ಖಳನಾಯಕ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದರು. ರಾಕಿಂಗ್ ಸ್ಟಾರ್ ಯಶ್ ನಟನೆಯ ಕಿರಾತಕ ಸಿನಿಮಾ ಮೂಲಕ ಸ್ಯಾಂಡಲ್ವುಡ್ಗೆ ಪದಾರ್ಪಣೆ ಮಾಡಿದ್ದರು. ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಚಿತ್ರಗಳಲ್ಲಿ ನಟಿಸಿರುವ ಇವರು ಸಿನಿರಸಿಕರಿಗೆ ಚಿರಪರಿಚಿತರು ಎಂದು ಹೇಳಬಹುದಾಗಿದೆ.
ಇದನ್ನೂ ಓದಿ: ಮಹಿಳೆಯರು ಅಡುಗೆ ಮಾಡೋಕೆ ಮಾತ್ರ ಲಾಯಕ್ಕು; ವಿವಾದಾತ್ಮಕ ಹೇಳಿಕೆ ನೀಡಿದ ಶಾಮನೂರು ಶಿವಶಂಕರಪ್ಪ
ನಟ ಡೇನಿಯಲ್ ಬಾಲಾಜಿ ತಮ್ಮ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದು, ಈ ವಿಚಾರ ಅಭಿಮಾನಿಗಳನ್ನು ಮತ್ತಷ್ಟು ಭಾವುಕವಾಗಿಸಿದೆ. ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಡೇನಿಯಲ್ ಬಾಲಾಜಿ ಕತ್ತಲೆಯಲ್ಲಿದವರ ಬಾಳನ್ನು ಬೆಳಕಾಗಿಸಿದ್ದಾರೆ. ಸಾವಿನ ಸುದ್ದಿ ಕೇಳಿ ಆತಂಕದಲ್ಲಿದ್ದ ಅಭಿಮಾನಿಗಳು ಈ ವಿಷಯ ಕೇಳಿ ಮತ್ತಷ್ಟು ಭಾವುಕರಾಗಿದ್ದಾರೆ.
ಚೆನ್ನೈನ ಪುರಸೈವಾಲ್ಕಂನಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ತಿರುವನ್ಮಿಯೂರಿನ ಅವರ ನಿವಾಸದಲ್ಲಿ ನಡೆಯಲಿದೆ ಎಂದು ಸಂಬಂಧಿಕರು ತಿಳಿಸಿದ್ದಾರೆ. ಸಿನಿಮಾ ರಂಗ ಹೊರತುಪಡಿಸಿ ಧಾರ್ಮಿಕ ಕಾರ್ಯಗಳಲ್ಲೂ ಡೇನಿಯಲ್ ಬಾಲಾಜಿ ಸಕ್ರಿಯರಾಗಿದ್ದು, ಅನೇಕ ದೇವಾಲಯಗಳನ್ನು ಕಟ್ಟಿಸಿದ್ದಾರೆ. ನಟನ ಅಗಲಿಕೆಗೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.