More

    ತಮಿಳು ಸಾಹಿತಿ ಅಣ್ಣಾಮಲೈಗೆ ಕುವೆಂಪು ರಾಷ್ಟ್ರೀಯ ಪುರಸ್ಕಾರ

    ಶಿವಮೊಗ್ಗ: ರಾಷ್ಟ್ರಕವಿ ಕುವೆಂಪು ಅವರ 118ನೇ ಜನ್ಮದಿನೋತ್ಸವ ನಿಮಿತ್ತ ಕೊಡಮಾಡುವ ಕುವೆಂಪು ರಾಷ್ಟ್ರೀಯ ಪುರಸ್ಕಾರ ಪ್ರಶಸ್ತಿಗೆ ತಮಿಳುನಾಡಿನ ಖ್ಯಾತ ಸಾಹಿತಿ ಇಮಯಮ್ (ವಿ.ಅಣ್ಣಾಮಲೈ) ಭಾಜನರಾಗಿದ್ದು ಡಿ.29ರಂದು ಕುಪ್ಪಳ್ಳಿಯ ಹೇಮಾಂಗಣದಲ್ಲಿ ಪ್ರದಾನ ಸಮಾರಂಭ ನಡೆಯಲಿದೆ.
    ಬೆಂಗಳೂರಿನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಶಿವಮೊಗ್ಗ ಜಿಲ್ಲಾಡಳಿತ, ಜಿಪಂ, ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದಿಂದ ರಾಷ್ಟ್ರಕವಿ ಕುವೆಂಪು ಅವರ 118ನೇ ಜನ್ಮದಿನೋತ್ಸವ ಮತ್ತು ಕುವೆಂಪು ರಾಷ್ಟ್ರೀಯ ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿದ್ದು ಬೆಳಗ್ಗೆ 10ಕ್ಕೆ ಕವಿಶೈಲದಲ್ಲಿ ಕವಿ ನಮನ ಸಲ್ಲಿಸುವ ಮೂಲಕ ವಿಶ್ವ ಮಾನವ ದಿನಾಚರಣೆ ಆರಂಭಗೊಳ್ಳಲಿದೆ. ಬೆಳಗ್ಗೆ 11ಕ್ಕೆ ಹೇಮಾಂಗಣದಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ.
    ಸಿಎಂ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡುವರು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್‌ಕುಮಾರ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಪಾಲ್ಗೊಳ್ಳುವರು. ಸಾಹಿತಿ, ನಾಡೋಜಾ ಪ್ರೊ. ಹಂ.ಪ.ನಾಗರಾಜಯ್ಯ ಮತ್ತು ಗಾಂಧೀ ಚಿಂತಕ ಪ್ರೊ. ಶಿವರಾಜ್ ಪ್ರಧಾನ ಭಾಷಣ ಮಾಡುವರು. ಗೃಹ ಸಚಿವ ಆರಗ ಜ್ಞಾನೇಂದ್ರ ಅಧ್ಯಕ್ಷತೆ ವಹಿಸುವರು.
    ಕುವೆಂಪು ಪ್ರತಿಷ್ಠಾನದ ಹಂಗಾಮಿ ಅಧ್ಯಕ್ಷ ಡಾ.ಬಿ.ಎಲ್.ಶಂಕರ್, ಕುವೆಂಪು ವಿವಿ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಕೆ.ಎಸ್.ಈಶ್ವರಪ್ಪ ಸೇರಿ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಪಾಲ್ಗೊಳ್ಳುವರು. ಇದೇ ವೇಳೆ 2023ರ ಕ್ಯಾಲೆಂಡರ್, ಕುವೆಂಪು ವಿರಚಿತ ಚಿತ್ರಾಂಗದಾ ಕಾವ್ಯದ ಗಮಕ ಧ್ವನಿ ಸುರಳಿ ಬಿಡುಗಡೆಗೊಳ್ಳಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts