ತಮಿಳುನಾಡಿನ ಬಿಜೆಪಿ ಅಧ್ಯಕ್ಷ ಅಣ್ಣಾಮಲೈಗೆ ನಮ್ಮ ಶಕ್ತಿ ಗೊತ್ತಿದೆ : DK ಶಿವಕುಮಾರ್​

blank

ಬಿಜೆಪಿಯ ಕಪ್ಪು ಬಾವುಟ ಪ್ರದರ್ಶನಕ್ಕೆ ನಾವು ಹೆದರುವುದಿಲ್ಲ. ಅವರ ನಡೆಯನ್ನು ನಾವು ಸ್ವಾಗತಿಸುತ್ತೇವೆ. ನನ್ನನ್ನು ತಿಹಾರ್ ಜೈಲಿಗೆ ಕಳುಹಿಸಿದಾಗಲೇ ಹೆದರಲಿಲ್ಲ. ಇಲ್ಲಿನ ಬಿಜೆಪಿ ಅಧ್ಯಕ್ಷ (ಅಣ್ಣಾಮಲೈ) ನಮ್ಮ ರಾಜ್ಯದಲ್ಲಿ ಕೆಲಸ ಮಾಡಿದ್ದಾರೆ. ನಮ್ಮ ಶಕ್ತಿ ಅವರಿಗೆ ಗೊತ್ತಿದೆ ಎಂದು ಡಿಸಿಎಂ DK ಶಿವಕುಮಾರ್​ ಕಾಲೆಳೆದರು.

ಸಂಸತ್ ಕ್ಷೇತ್ರಗಳು ಕಡಿಮೆಯಾಗಲು ಬಿಡಲ್ಲ

“ನಾವು ನಮ್ಮ ಹಕ್ಕು, ಅಸ್ತಿತ್ವಕ್ಕೆ ಹೋರಾಡಲು, ಸಂವಿಧಾನ ಉಳಿವಿಗಾಗಿ ನಾವು ಒಟ್ಟಾಗಿದ್ದೇವೆ. ನಮ್ಮ ಸಂಸತ್ ಸ್ಥಾನಗಳು ಕಡಿಮೆಯಾಗಲು ನಾವು ಬಿಡುವುದಿಲ್ಲ. ದಕ್ಷಿಣದ ರಾಜ್ಯಗಳು ದೇಶದ ಬೆಳವಣಿಗೆಗೆ ಸಾಕಷ್ಟು ಕೊಡುಗೆ ನೀಡುತ್ತಿವೆ. ಶೈಕ್ಷಣಿಕ ಗುಣಮಟ್ಟದಲ್ಲಿ, ಆರ್ಥಿಕ ಬೆಳವಣಿಗೆ ಸೇರಿದಂತೆ ಅನೇಕ ವಿಷಯಗಳಲ್ಲಿ ಸಾಕಷ್ಟು ಮುಂದಿದ್ದೇವೆ. ತೆರಿಗೆ ಪಾವತಿಯಲ್ಲಿ ಮುಂಚೂಣಿಯಲ್ಲಿದ್ದೇವೆ” ಎಂದು ಚೆನ್ನೈ ಪ್ರವಾಸದ ವೇಳೆ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜತೆ ಶನಿವಾರ ಮಾತನಾಡಿದರು.

ಇದನ್ನೂ ಓದಿ:ಚಿನ್ನ ಅನೇಕ ವರ್ಷಗಳ ಕಾಲ ಬಳಸದಿದ್ದರೆ ತುಕ್ಕು ಹಿಡಿಯುತ್ತದೆಯೇ!: ವಿಜ್ಞಾನ ಹೇಳೊದೇನು? | Gold Rust

“ಜೊತೆಗೂಡುವುದು ಆರಂಭ, ಜೊತೆಗೂಡಿ ಆಲೋಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಪ್ರಗತಿ ಎನ್ನುವ ಮಾತಿನ ಮೇಲೆ ನಂಬಿಕೆಯನ್ನು ಇಟ್ಟಿರುವವರು ನಾವು. ಸ್ಟಾಲಿನ್ ಅವರ ನಾಯಕತ್ವದಲ್ಲಿ ದಕ್ಷಿಣ ಭಾರತ ರಾಜ್ಯಗಳು ಹಾಗೂ ಪಂಜಾಬ್ ರಾಜ್ಯ ಭಾಗವಹಿಸುತ್ತಿದ್ದು ಯಾವುದೇ ಕಾರಣಕ್ಕೂ ನಮ್ಮ ಹಕ್ಕುಗಳನ್ನು ಬಿಟ್ಟುಕೊಡಲು ಸಾಧ್ಯವಿಲ್ಲ. ಮಾಜಿ ಪ್ರಧಾನಿ ವಾಜಪೇಯ ಅವರು ಇದೇ ರೀತಿ 2002 ರಲ್ಲಿ 84 ನೇ ತಿದ್ದುಪಡಿ ಮೂಲಕ ಸಂವಿಧಾನ ಬದಲಾವಣೆಗೆ ಮುಂದಾಗಿದ್ದರು” ಎಂದರು.

ಡಿಸಿಎಂ ಶಿವಕುಮಾರರ ಚೆನ್ನೈ ಪ್ರವಾಸ ಯಾವ ಪುರುಷಾರ್ಥಕ್ಕೊ?: ಆರ್​.ಅಶೋಕ ವ್ಯಂಗ್ಯ | Chennai

RCB ತಂಡ ಕಪ್​ ಗೆಲ್ಲುವಲ್ಲಿ ಈ ಬಾರಿ ಮುಖ್ಯಪಾತ್ರ ವಹಿಸಲಿದ್ದಾರೆಯೇ ಆಂಡಿ ಫ್ಲವರ್​?; ಇವರ ವೇತನ ತಿಳಿದರೆ ಶಾಕ್​!

Share This Article

Toilet ಬಳಸಿದ ನಂತರ ಈ ತಪ್ಪು ಎಂದಿಗೂ ಮಾಡಬೇಡಿ: ಅಪಾಯ ಕಾದಿದೆಯಂತೆ!

Toilet : ನಮಲ್ಲಿ ಹಲವರು ಶೌಚಾಲಯ (ಪಾಶ್ಚಾತ್ಯ ಶೌಚಾಲಯ) ಬಳಸಿದ ನಂತರ ಟಾಯ್ಲೆಟ್​ನ ಮುಚ್ಚುಳ ಮುಚ್ಚದೇ…

ಬೇಸಿಗೆಯಲ್ಲಿ ನಿಮ್ಮ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ, ಮೊಸರು ಅಥವಾ ಮಜ್ಜಿಗೆ?Summer Health Tips

  Summer Health Tips: ಬೇಸಿಗೆಯ ಸುಡುವ ಬಿಸಿಲಿನಲ್ಲಿ ಮಧ್ಯಾಹ್ನವಾಗಲಿ ಅಥವಾ ಸಂಜೆಯಾಗಲಿ, ನಮ್ಮ ದೇಹವನ್ನು…

Oil Food: ಎಣ್ಣೆ ಪದಾರ್ಥ ಆಹಾರ ತಿಂದ ನಂತರ ಈ ಕೆಲಸಗಳನ್ನು ಮಾಡಿ ಆರೋಗ್ಯಕ್ಕೆ ಒಳ್ಳೆಯದು

Oil Food: ನಮ್ಮಲ್ಲಿ ಹಲವರಿಗೆ ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಕು ಎಂದು ಅನಿಸುತ್ತದೆ. ಅಂದರೆ ನಾವು…