ಹೊಸೂರಿನ ಟಾಟಾ ಎಲೆಕ್ಟ್ರಾನಿಕ್ಸ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ(fire) ಅವಘಡ.. 1500 ಕಾರ್ಮಿಕರ ರಕ್ಷಣೆ!

ಹೊಸೂರಿನ ಟಾಟಾ ಎಲೆಕ್ಟ್ರಾನಿಕ್ಸ್ ಕಾರ್ಖಾನೆಯಲ್ಲಿ ಭಾರಿ ಅಗ್ನಿ(fire) ಅವಘಡ
ಅಗ್ನಿ ಅವಘಡ
Published on

ಬೆಂಗಳೂರು: ತಮಿಳುನಾಡಿನ ಹೊಸೂರಿನಲ್ಲಿರುವ ಟಾಟಾ ಉತ್ಪಾದನಾ ಘಟಕದಲ್ಲಿ ಶನಿವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. ಈ ಸಂದರ್ಭದಲ್ಲಿ ಮೂವರು ನೌಕರರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ವರದಿಗಳ ಪ್ರಕಾರ, ಕಂಪನಿಯ ಮೊಬೈಲ್ ಫೋನ್ ಬಿಡಿಭಾಗಗಳ ಪೇಂಟಿಂಗ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ

ಶನಿವಾರ ಬೆಳಗ್ಗೆ ಬೆಂಕಿ(fire) ಕಾಣಿಸಿಕೊಂಡಿದ್ದು, ಬಳಿಕ ಇಡೀ ಸೆಲ್‌ಫೋನ್ ತಯಾರಿಕಾ ವಿಭಾಗಕ್ಕೆ ವ್ಯಾಪಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಇಡೀ ಘಟಕ ಭಸ್ಮವಾಗಿದೆ. ಈ ಸಂದರ್ಭದಲ್ಲಿ 1500ಕ್ಕೂ ಹೆಚ್ಚು ನೌಕರರಿದ್ದು, ಬಹುತೇಕ ಎಲ್ಲರನ್ನು ರಕ್ಷಿಸಲಾಗಿದೆ.

ನೌಕರರು ಹೊರಬರುತ್ತಿದ್ದಂತೆ ಅಗ್ನಿಶಾಮಕ ದಳದ ವಾಹನಗಳು ಆಗಮಿಸಿ ಬೆಂಕಿಯನ್ನು ನಿಯಂತ್ರಿಸಲು ಶ್ರಮಿಸುತ್ತಿವೆ. ಬೆಂಕಿಯಿಂದಾಗಿ ಅಪಾರ ಪ್ರಮಾಣದ ಹಾನಿಯಾಗಿದೆ ಎನ್ನಲಾಗುತ್ತಿದೆ.

ಜಾಗತಿಕ ದೈತ್ಯ ಆ್ಯಪಲ್‌ಗೆ ಟಾಟಾ ಎಲೆಕ್ಟ್ರಾನಿಕ್ಸ್‌ನ ಉತ್ಪಾದನಾ ಘಟಕದಿಂದ ಸೆಲ್​ಫೋನ್​ನ ಬಿಡಿಭಾಗಗಳನ್ನು ಪೂರೈಸಲಾಗುತ್ತಿದೆ.

ಎಲ್ಲ ಕಾರ್ಮಿಕರು ಸುರಕ್ಷಿತ: (fire)

ಹೊಸೂರಿನ ಸೆಲ್‌ಫೋನ್ ತಯಾರಿಕಾ ವಿಭಾಗಕ್ಕೆ ಬೆಂಕಿ ತಗುಲಿರುವ ಘಟನೆ ದುರದೃಷ್ಟಕರ. ಸ್ಥಾವರದ ಎಲ್ಲ ಉದ್ಯೋಗಿಗಳು ಸುರಕ್ಷಿತವಾಗಿದ್ದಾರೆ. ಬೆಂಕಿ ಏಕೆ ಬಿದ್ದಿದೆ ಎಂಬುದರ ತನಿಖೆ ನಡೆಸಲಾಗುತ್ತಿದೆ ಎಂದು ಟಾಟಾ ಎಲೆಕ್ಟ್ರಾನಿಕ್ಸ್ ವಕ್ತಾರರು ಸ್ಪಷ್ಟಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net