More

  ತಮಿಳುನಾಡು ರಾಜಭವನದ ಮೇಲೆ ಪೆಟ್ರೋಲ್ ಬಾಂಬ್ ದಾಳಿ; ಸ್ಥಳದಲ್ಲೇ ಸಿಕ್ಕಿಬಿದ್ದ ಆರೋಪಿ

  ತಮಿಳುನಾಡು: ತಮಿಳುನಾಡು ರಾಜಭವನದ ಎದುರು ಪೆಟ್ರೋಲ್ ಬಾಂಬ್ ದಾಳಿ ನಡೆದಿದೆ. ಚೆನ್ನೈನ ಗಿಂಡಿಯಲ್ಲಿರುವ ರಾಜ್ಯಪಾಲರ ಭವನದ ಮುಂದೆ ಪೆಟ್ರೋಲ್ ಬಾಂಬ್ ಎಸೆಯಲು ಯತ್ನಿಸಿದ ಖ್ಯಾತ ರೌಡಿ ಕರುಕ್ಕ ವಿನೋದ್ ನನ್ನು ಪೊಲೀಸರು ಬಂಧಿಸಿದ್ದಾರೆ.

  ರಾಜ್ಯಪಾಲರ ಭವನದ ಎದುರು ಪೆಟ್ರೋಲ್ ಬಾಂಬ್ ದಾಳಿ ನಡೆಸಿದ ನಿಗೂಢ ವ್ಯಕ್ತಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ. ಪೆಟ್ರೋಲ್ ಬಾಂಬ್ ಎಸೆದ ವ್ಯಕ್ತಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿ ಕರುಕ್ಕ ವಿನೋದ್ ಎಂಬುದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಆತನಿಂದ ಇನ್ನೂ 3 ಪೆಟ್ರೋಲ್ ಬಾಂಬ್ ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

  ರಾಜ್ಯಪಾಲರ ಭವನದ ಮುಂದೆ ಪೆಟ್ರೋಲ್ ಬಾಂಬ್ ಎಸೆದಿದ್ದು ಏಕೆ, ಇದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

  ಇಂದು (ಅಕ್ಟೋಬರ್ 25) ಸಂಜೆ 4 ಗಂಟೆಗೆ ಚೆನ್ನೈನ ಗಿಂಡಿಯಲ್ಲಿರುವ ರಾಜಭವನದ ಗೇಟ್ ನಂಬರ್ ಒಂದಕ್ಕೆ ಬಂದ ವ್ಯಕ್ತಿಯೊಬ್ಬ ತನ್ನೊಂದಿಗೆ ತಂದಿದ್ದ ಪೆಟ್ರೋಲ್ ಬಾಂಬ್ ಎಸೆದಿದ್ದಾನೆ. ರಾಜಭವನದ ಗೇಟ್ ಬಳಿ ಭದ್ರತಾ ಪೊಲೀಸರು ನಿಂತಿದ್ದಾಗ ಏಕಾಏಕಿ ಕೈಯಲ್ಲಿದ್ದ ಪೆಟ್ರೋಲ್ ಬಾಂಬ್ ಎಸೆದು ಗೇಟ್ ಬಳಿ ಬಿದ್ದಿದೆ. ಗಾಬರಿಗೊಂಡ ಪೊಲೀಸರು ತಕ್ಷಣ ವ್ಯಕ್ತಿಯನ್ನು ಬಂಧಿಸಿದ್ದಾರೆ.

  ಈ ವಿಷಯವನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಸಾಮಾಜಿಕ ಜಾಲತಾಣಗಳಲ್ಲಿ ಆರೋಪಿಸಿದ್ದಾರೆ. ರಾಜ್ಯದಲ್ಲಿ ಅಪರಾಧ ನಿಯಂತ್ರಣ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಡಿಎಂಕೆ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದರು.

  ಹುಲಿ ಉಗುರು ಪ್ರಕರಣ: ಪ್ರಭಾವಿಗಳಿಗೆ ಎದುರಾಯ್ತಾ ಸಂಕಷ್ಟ?

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts