ಬೆಂಗಳೂರು ನಗರ ಪೊಲೀಸ್ ವಿಭಾಗದ ಟ್ವಿಟರ್ ಖಾತೆ ನಕಲಿ ಮಾಡಿದ್ದ ತಮಿಳುನಾಡು ವಿದ್ಯಾರ್ಥಿ ಸೆರೆ

bcp
Published on

ಬೆಂಗಳೂರು: ಟಿ-20 ಕ್ರಿಕೆಟ್ ಪಂದ್ಯಾವಳಿ ವೇಳೆ ಬೆಂಗಳೂರು ನಗರ ಪೊಲೀಸ್ ವಿಭಾಗದ ಟ್ವಿಟರ್ ಖಾತೆ ನಕಲಿ ಮಾಡಿ ಟ್ವಿಟ್ ಮಾಡಿದ್ದ ವಿದ್ಯಾರ್ಥಿಯನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ತಮಿಳುನಾಡಿನ ಚೆಟಪೇಟ್ ನಿವಾಸಿ ಮಗೇಶ್ ಕುಮಾರ್ ಬಂಧಿತ. ಟಿ-20 ಕ್ರಿಕೆಟ್ ಪಂದ್ಯಾವಳಿ ವೇಳೆ ಬೆಂಗಳೂರು ನಗರ ಪೊಲೀಸ್ ವಿಭಾಗದ ಅಧಿಕೃತ ಟ್ವಿಟರ್ ಖಾತೆಯನ್ನು ನಕಲಿ ಮಾಡಿದ್ದ. ಇದರಲ್ಲಿ ಐಪಿಎಲ್ ಪಂದ್ಯಾವಳಿ ಸ್ಕೋರ್ ಮಾಹಿತಿ ಅಪ್‌ಲೋಡ್ ಮಾಡಿ ಪೊಲೀಸರ ಹೆಸರಿಗೆ ಮಸಿಬಳಿಯುವ ಕೆಲಸ ಮಾಡುತ್ತಿದ್ದ. ಬೆಂಗಳೂರು ನಗರ ಪೊಲೀಸರ ಅಧಿಕೃತ ಲೋಗೋ ಬಳಸಿದ್ದ.

ಇದನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ನಕಲಿ ಖಾತೆಯನ್ನು ಡಿಲೀಟ್ ಮಾಡಿ ಸ್ವಯಂ ದೂರು ದಾಖಲಿಸಿಕೊಂಡಿದ್ದ. ವಿಶೇಷ ತಂಡ ತನಿಖೆ ಕೈಗೊಂಡು ತಾಂತ್ರಿಕ ಮಾಹಿತಿ ಆಧರಿಸಿ ಮಗೇಶ್ ಕುಮಾರ್‌ನನ್ನು ಬಂಧಿಸಿ ಕೋರ್ಟ್‌ಗೆ ಹಾಜರುಪಡಿಸಿದೆ.

ತಮಿಳುನಾಡಿನಲ್ಲಿ ಕಾಲೇಜಿನಲ್ಲಿ ಓದುತ್ತಿದ್ದ ಮಗೇಶ್ ಕುಮಾರ್, ವಿರಾಟ್ ಕೊಹ್ಲಿ ಅಭಿಮಾನಿ ಆಗಿದ್ದ. ಕ್ರಿಕೆಟ್ ಬೆಟ್ಟಿಂಗ್ ವ್ಯಸನಿಯಾಗಿದ್ದು, ಬೆಂಗಳೂರು ನಗರ ಪೊಲೀಸರ ಲೋಗೋ ಬಳಸಿ ನಕಲಿ ಟ್ವಿಟರ್ ಖಾತೆ ತೆರೆದಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net