

ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ರ ಪುತ್ರ ಉದಯನಿಧಿ ಅವರು ನಾಳೆ(ಡಿ.14) ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ಉದಯನಿದಿ ಅವರನ್ನು ಅಚಿವ ಸಂಪುಟದಲ್ಲಿ ಸೇರ್ಪಡೆಗೊಳಿಸುವಂತೆ ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರಿಗೆ ಸಿಎಂ ಸ್ಟಾಲಿನ್ ಶಿಫಾರಸು ಮಾಡಿದ್ದಾರೆ. ಈ ಶಿಫಾರಸಿಗೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ನಾಳೆ ಬೆಳಗ್ಗೆ 9.30ಕ್ಕೆ ರಾಜಭವನದ ದರ್ಬಾರ್ ಹಾಲ್ನಲ್ಲಿ ಪ್ರಮಾನವಚನ ಸ್ವೀಕಾರ ಸಮಾರಂಭ ನಡೆಯಲಿದೆ.
ಮೊದಲ ಬಾರಿಗೆ ಸಚಿವರಾಗುತ್ತಿರುವ 45 ವರ್ಷದ ಉದಯನಿಧಿಗೆ ಕ್ರೀಡಾ ಖಾತೆ ಸಿಗುವ ಸಾಧ್ಯತೆ ಇದೆ ಎಂದು ಡಿಎಂಕೆ ಮೂಲಗಳು ತಿಳಿಸಿವೆ. ಅಜ್ಜ ಕರುಣಾನಿಧಿ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಚೆಪಾಕ್ ತಿರುವಲ್ಲಿಕೇಣಿ ಕ್ಷೇತ್ರದಿಂದ ಶಾಸಕರಾಗಿ ಕಳೆದ ವರ್ಷ ಉದಯನಿಧಿ ಆಯ್ಕೆಯಾಗಿದ್ದಾರೆ.