More

    ಜಿಪಂ, ತಾಪಂ ಚುನಾವಣೆ ಶೀಘ್ರ: ಸಚಿವ ಕೆ.ಎಸ್. ಈಶ್ವರಪ್ಪ

    ಶಿವಮೊಗ್ಗ: ಜಿಪಂ ಮತ್ತು ತಾಪಂ ಚುನಾವಣೆಗಳನ್ನು ನಡೆಸುವ ಬಗ್ಗೆ ಚುನಾವಣಾ ಆಯೋಗ ಶೀಘ್ರ ನಿರ್ಧಾರ ಮಾಡಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು. ಈ ಹಿಂದೆ ಜಿಪಂ ಮತ್ತು ತಾಪಂ ಚುನಾವಣೆ ನಿಗದಿ ಮಾಡಿದ್ದ ಮೀಸಲಾತಿ ಆಕ್ಷೇಪ ವ್ಯಕ್ತಪಡಿಸಿ 780ಕ್ಕೂ ಅಧಿಕ ತಕರಾರು ಅರ್ಜಿಗಳು ಬಂದಿದ್ದು ಈ ಬಗ್ಗೆ ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀನಾರಾಯಣ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದೆ. ಈ ಸಮಿತಿ ಎಲ್ಲ ಜಿಲ್ಲೆಗಳಿಂದ ಕ್ಷೇತ್ರ ವಿಂಗಡಣೆ ವರದಿ ಪಡೆದುಕೊಳ್ಳಲಾಗುತ್ತಿದೆ. ಸಮಿತಿ ವರದಿ ಸಲ್ಲಿಸಿದ ಬಳಿಕ ಮೀಸಲಾತಿ ನಿಗದಿಪಡಿಸಿ ಚುನಾವಣೆ ನಡೆಸಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.
    ಸಿದ್ದು, ಇಬ್ರಾಹಿಂ ಅವಕಾಶವಾದಿಗಳು: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ವಿಧಾನಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಇಬ್ಬರೂ ಅವಕಾಶವಾದಿ ರಾಜಕಾರಣಿಗಳು ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು. ಸಿದ್ದರಾಮಯ್ಯ ಮತ್ತು ಸಿ.ಎಂ.ಇಬ್ರಾಹಿಂ ಅವಳಿ ಜವಳಿ ಇದ್ದಂತೆ. ಅವರಿಗೆ ಆ ಪಕ್ಷ, ಈ ಪಕ್ಷ ಯಾವುದೂ ಇಲ್ಲ. ಯಾವ ಪಕ್ಷದಲ್ಲಿ ಅಧಿಕಾರದಲ್ಲಿರುತ್ತದೋ ಅಲ್ಲಿಗೆ ಹಾರುವುದು ಅವರ ಜಾಯಮಾನ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts