18.5 C
Bangalore
Monday, December 16, 2019

ತಪ್ತ ಮುದ್ರಾಧಾರಣೆಯಿಂದ ಪುಣ್ಯ ಪ್ರಾಪ್ತಿ

Latest News

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ಹುಬ್ಬಳ್ಳಿ: ಆಷಾಢ ಮಾಸದ ಪವಿತ್ರ ದಿನಗಳಲ್ಲಿ ಶಂಖ, ಚಕ್ರ ತಪ್ತ ಮುದ್ರಾಧಾರಣೆ ಮಾಡಿಸಿಕೊಳ್ಳುವುದರಿಂದ ಪುಣ್ಯ ಪ್ರಾಪ್ತಿಯಾಗಿ, ವಿಷ್ಣುವಿನ ದೇವ ಲೋಕದ ದಾರಿ ತೆರೆದುಕೊಳ್ಳುತ್ತದೆ. ಮುದ್ರೆ ಧರಿಸಿದ ವ್ಯಕ್ತಿ ಬಳಿ ಯಾವ ದುಷ್ಟಶಕ್ತಿಯೂ ಸುಳಿಯುವುದಿಲ್ಲ ಎಂದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದ ಸ್ವಾಮೀಜಿ ಹೇಳಿದರು.

ಇಲ್ಲಿಯ ಭವಾನಿ ನಗರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿ ಮಠದಲ್ಲಿ ಸೋಮವಾರ ನೂರಾರು ಭಕ್ತರಿಗೆ ತಪ್ತ ಮುದ್ರಾಧಾರಣೆ ಮಾಡಿ ಅವರು ಆಶೀರ್ವಚನ ನೀಡಿದರು.

ತಪ್ತ ಮುದ್ರಾಧಾರಣೆಯಲ್ಲಿ ಅನೇಕ ಪ್ರಭೇದಗಳಿವೆ. ಶಂಖ ಹಾಗೂ ಚಕ್ರ ಮಾತ್ರ ಬಲ ಮತ್ತು ಎಡ ತೋಳುಗಳಿಗೆ ಮುದ್ರಿಸಿಕೊಳ್ಳುವುದನ್ನು ಶ್ರೀಮದ್ ಮಧ್ವಾಚಾರ್ಯರು ತಮ್ಮ ಶಿಷ್ಯರಿಗೆ ತಿಳಿಸಿದ್ದಾರೆ ಎಂಬುದು ಗ್ರಂಥ, ಶಾಸ್ತ್ರದಲ್ಲಿದೆ. ಈ ಸಂಪ್ರದಾಯದ ಪ್ರಕಾರ ಈಗಲೂ ಶಂಖ ಮತ್ತು ಚಕ್ರ ಮುದ್ರಾಧಾರಣೆ ಮಾತ್ರ ನಾವು ಮಾಡುತ್ತ ಬಂದಿದ್ದೇವೆ. ಇದು ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮೀಜಿಯವರ ಪರಂಪರೆ ಕೂಡ ಆಗಿದೆ. ಒಂದು ಬಾರಿ ಮಾತ್ರ ಮುದ್ರಾಧಾರಣೆ ಮಾಡಿಸಿಕೊಳ್ಳಬೇಕು ಎಂದೇನಿಲ್ಲ. ಆಯಾ ಮಠದ ಆಯಾ ಗುರುಗಳಿಂದ ಪ್ರತಿ ವರ್ಷವೂ ಮಾಡಿಸಿಕೊಳ್ಳಬಹುದು ಎಂದರು.

ಮುದ್ರಾಧಾರಣೆಗೂ ಮುನ್ನ ಶ್ರೀಗಳು ಸುದರ್ಶನ ಹೋಮ ನೆರವೇರಿಸಿದರು. ಶ್ರೀಮಠದ ಆವರಣದಲ್ಲಿ ನೂತನವಾಗಿ ನಿರ್ವಿುಸಿದ ದೇವಸ್ಥಾನದಲ್ಲಿ ಸುಬ್ರಹ್ಮಣ್ಯ ಸ್ವಾಮಿ ಮೂರ್ತಿ ಪ್ರತಿಷ್ಠಾಪಿಸಿ, ವಿಶೇಷ ಪೂಜೆ ಸಲ್ಲಿಸಿದರು. ಮುದ್ರಾಧಾರಣೆಯಲ್ಲಿ ಮಕ್ಕಳು, ಮಹಿಳೆಯರು, ವೃದ್ಧರು ಪಾಲ್ಗೊಂಡಿದ್ದರು.

ಶ್ರೀಮಠದ ವ್ಯವಸ್ಥಾಪಕ ಶ್ಯಾಮಾಚಾರ್ಯ ರಾಯಸ್ತ, ಆಸ್ಥಾನ ವಿದ್ವಾಂಸ ಗುರುಪ್ರಸಾದ ಆಚಾರ್ಯ, ಕೆ. ರಘೂತ್ತಮರಾವ್, ರಘುವೀರ ಆಚಾರ್ಯ, ಇತರರು ಉಪಸ್ಥಿತರಿದ್ದರು.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...