ರಾಜ್ಯ ಬಜೆಟ್​ 2025| ಅಬಕಾರಿ, ನೋಂದಣಿ-ಮುದ್ರಾಂಕ ಇಲಾಖೆಗೆ ಟಾರ್ಗೆಟ್ ನೀಡಿದ ಸರ್ಕಾರ

Siddaramaiah Budget
Published on

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು 2025-26ನೇ ಸಾಲಿನ ಬಜೆಟ್ ಮಂಡಿಸುತ್ತಿದ್ದು, ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 28 ಸಾವಿರ ಕೋಟಿ ಟಾರ್ಗೆಟ್ ನೀಡಿದ್ದಾರೆ.

2024-25ರ ಪರಿಷ್ಕೃತ ಅಂದಾಜಿನಲ್ಲಿ ನೋಂದಣಿ ಮತ್ತು ಮುದ್ರಾಂಕ ಇಲಾಖೆಯಿಂದ ಒಟ್ಟು 24,000 ಕೋಟಿ ರೂ.ಗಳ ರಾಜಸ್ವವನ್ನು ನಿರೀಕ್ಷಿಸಲಾಗಿದೆ. 2025-26ನೇ ಸಾಲಿಗೆ ನೋಂದಣಿ ಮತ್ತು ಮುದ್ರಾಂಕ ಇಲಾಖೆಗೆ 28,000 ಕೋಟಿ. ರೂ.ಗಳ ರಾಜಸ್ವ ಗುರಿ ನಿಗದಿ ಪಡಿಸಲಾಗಿದೆ.

ಇದಲ್ಲದೆ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ 36,500 ಕೋಟಿ ರೂ. ಆದಾಯದ ಟಾರ್ಗೆಟ್ ನೀಡಲಾಗಿದ್ದು, ಈ ಮೂಲಕ ರಾಜ್ಯದಲ್ಲಿ ಮದ್ಯದ ಬೆಲೆ ಮತ್ತಷ್ಟು ದುಬಾರಿಯಾಗುವ ಸಾಧ್ಯತೆ ಇದೆ. ರಾಜ್ಯ ಸರ್ಕಾರ  ಅಬಕಾರಿ ಸ್ಲ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿರುವುದಾಗಿ ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net