More

    ಗುರಿ ಸಾಧಿಸದ ಅಧಿಕಾರಿಗಳು ವರದಿ ಸಲ್ಲಿಸಿ

    ಹಾವೇರಿ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಉಪಯೋಜನೆಗಳಲ್ಲಿ ಪ್ರಸಕ್ತ ಆರ್ಥಿಕ ವರ್ಷದ ಗುರಿ ಸಾಧಿಸದ ಅಧಿಕಾರಿಗಳು ಸಕಾರಣ ಸಹಿತ ವಿವರ ಸಲ್ಲಿಸಬೇಕು. ಉತ್ತರ ತೃಪ್ತಿದಾಯಕವಾಗದಿದ್ದರೆ ಯೋಜನೆ ಅನುಷ್ಠಾನದಲ್ಲಿ ವಿಫಲವಾಗಿದ್ದೀರಿ ಎಂದು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಹೇಳಿದರು.

    ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಗಳಡಿ 33ಇಲಾಖೆಗಳ ಮೂಲಕ ಅನುಷ್ಠಾನಗೊಂಡಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ಸಾಲಿನ ಆರ್ಥಿಕ ವರ್ಷದ ಕೊನೆಯ ದಿನದಲ್ಲಿದ್ದೇವೆ. ಈ ವರ್ಷ ನಿಗದಿಯಾದ ಕಾರ್ಯಕ್ರಮಗಳು ಹಾಗೂ ಬಿಡುಗಡೆಯಾದ ಅನುದಾನ ಪೂರ್ಣ ಬಳಕೆಯಾಗಬೇಕು. ಇಲ್ಲವಾದರೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ವರದಿ ಮಾಡಲಾಗುವುದು ಎಂದರು.

    ನರೇಗಾದಡಿ ಜಾಬ್​ಕಾರ್ಡ್ ನೀಡಿ, ಉದ್ಯೋಗಾವಕಾಶ ಕಲ್ಪಿಸಬೇಕು. ಆಯುಷ್ ಆಸ್ಪತ್ರೆಗೆ ಮಂಜೂರಾಗಿರುವ ನಿವೇಶನದ ರಕ್ಷಣೆ ಹಾಗೂ ಈ ಜಾಗದಲ್ಲಿ ವನಸ್ಪತಿ ಸಸ್ಯಗಳನ್ನು ಬೆಳೆಸಲು ಕ್ರಮಕೈಗೊಳ್ಳಬೇಕು ಎಂದರು.

    ಶಾಸಕ ನೆಹರು ಓಲೇಕಾರ ಮಾತನಾಡಿ, ಹಾವನೂರ ಭವನ ನಿರ್ವಣಕ್ಕೆ ಈಗಾಗಲೇ 8ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ನಿವೇಶನ ಸಹ ಲಭ್ಯವಿದೆ. ಕಟ್ಟಡ ನಿರ್ವಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾ ಕ್ರೀಡಾಂಗಣದ ಅಭಿವೃದ್ಧಿ ಹಾಗೂ ಈಜುಗೊಳದ ದುರಸ್ತಿ ಕುರಿತು ರ್ಚಚಿಸಲು ಜಿಲ್ಲಾ ಕ್ರೀಡಾಂಗಣ ಸಮಿತಿ ಸಭೆ ಕರೆಯುವಂತೆ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

    ವಿವಿಧ ಇಲಾಖೆಗಳು ಅನುಷ್ಠಾನಗೊಳಿಸುತ್ತಿರುವ ಎಸ್​ಸಿ, ಎಸ್​ಟಿ ಹಾಗೂ ಟಿಎಸ್​ಪಿ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಕುರಿತು ರಾಜ್ಯಮಟ್ಟದ ಅಧಿಕಾರಿಗಳು ಹಾಗೂ ಜಿಲ್ಲಾ ಮತ್ತು ತಾಲೂಕು ಮೇಲ್ವಿಚಾರಣೆ ಸಮಿತಿಗಳು ಅನುಸರಿಸಬೇಕಾದ ಮಾರ್ಗಸೂಚಿಗಳ ಕುರಿತು ಸಮಾಜಕಲ್ಯಾಣ ಇಲಾಖೆ ಹೊರತಂದಿರುವ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.

    ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನಾಂಗಕ್ಕೆ ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್ ಸಂಪರ್ಕ, ರೇಷ್ಮೆ ಹುಳು ಸಾಕಣೆ ಸಲಕರಣೆ ವಿತರಣೆ, ಅಂಬೇಡ್ಕರ್ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ವಿವಿಧ ಫಲಾನುಭವಿಗಳ ಆಯ್ಕೆ ಕುರಿತು ಪರಿಶೀಲನೆ ನಡೆಸಲಾಯಿತು.

    ಉಪ ಅರಣ್ಯ ಸಂರಕ್ಷಣಾಧಿಕಾರಿ ಎನ್.ಇ. ಕ್ರಾಂತಿ, ಜಂಟಿ ಕೃಷಿ ನಿರ್ದೇಶಕ ಬಿ. ಮಂಜುನಾಥ, ಡಿಡಿಪಿಐ ಅಂದಾನೆಪ್ಪ ವಡಿಗೇರಿ, ಡಿಎಚ್​ಒ ಡಾ. ಎಚ್.ಎಸ್. ರಾಘವೇಂದ್ರಸ್ವಾಮಿ, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಎಚ್.ಎ. ಜಮಖಾನೆ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಪ್ರವೀಣ, ಲೋಕೋಪಯೋಗಿ ಕಾರ್ಯನಿರ್ವಾಹಕ ಇಂಜಿನಿಯರ್ ಭಾವನಾಮೂರ್ತಿ, ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ರಾಜೀವ ಕೂಲೇರ ಇತರರಿದ್ದರು. ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ ಹೆಬ್ಬಳ್ಳಿ ಸ್ವಾಗತಿಸಿದರು.

    ಜಿಲ್ಲಾಧಿಕಾರಿ ಸೂಚನೆ

    • ತೋಟಗಾರಿಕೆ ಇಲಾಖೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ತೋಟಗಾರಿಕೆ ವಿಸ್ತೀರ್ಣತೆಗೆ ಆದ್ಯತೆಗೆ ನೀಡಬೇಕು ಹಾಗೂ ತೋಟಗಾರಿಕೆ ಕ್ಷೇತ್ರದ ಮಾಹಿತಿ ಸಂಗ್ರಹಿಸಬೇಕು.
    • ಸಾಮಾಜಿಕ ಅರಣ್ಯ ಯೋಜನೆಯಡಿ ಸಮುದಾಯ ಮತ್ತು ಫಲಾನುಭವಿ ಆಧಾರಿತ ಕಾರ್ಯಕ್ರಮ ಅನುಷ್ಠಾನಗೊಳಿಸಬೇಕು.
    • ಸಸಿ ನೀಡಿಕೆಯಂತಹ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಬೇಕು.
    • ಸಣ್ಣ ನೀರಾವರಿ ಇಲಾಖೆ ವತಿಯಿಂದ ಕೈಗೊಳ್ಳುವ ಯೋಜನೆಗಳು ನೀರು ಸಂಗ್ರಹವಾಗುವ ಪ್ರದೇಶ ಆಯ್ಕೆ ಮಾಡಿ ಚೆಕ್​ಡ್ಯಾಂಗಳನ್ನು ನಿರ್ವಿುಸಬೇಕು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts