More

    ದೇವಸ್ಥಾನಕ್ಕೆ ಹೋಗಿ ವಾಪಸ್ ಆಗುತ್ತಿದ್ದಾಗ ಟಾಟಾ ಏಸ್ ಪಲ್ಟಿ; 20ಕ್ಕೂ‌ ಹೆಚ್ಚು ಜನರಿಗೆ ಗಾಯ, ಇಬ್ಬರ ಪರಿಸ್ಥಿತಿ ಗಂಭೀರ

    ಚಾಮರಾಜನಗರ: ಭೀಮನ ಅಮಾವಾಸ್ಯೆ ಜಾತ್ರೆ ಪ್ರಯುಕ್ತ ದೇವಸ್ಥಾನಕ್ಕೆ ಹೋಗಿ ವಾಪಸ್ ಆಗುತ್ತಿದ್ದಾಗ ಏಸ್ ಮಗುಚಿ 20ಕ್ಕೂ‌ ಹೆಚ್ಚು ಜನರಿಗೆ ಗಾಯಗಳಾಗಿವೆ. ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ.

    ಇದನ್ನೂ ಓದಿ: ಭೀಮನ ಅಮಾವಾಸ್ಯೆ: ಮಲೆ ಮಹದೇಶ್ವರ ಬೆಟ್ಟಕ್ಕೆ ಹರಿದುಬಂದ ಭಕ್ತ‌ಸಾಗರ 

    ಗುಂಡ್ಲುಪೇಟೆ ತಾಲೂಕಿನ ಬಾಚಹಳ್ಳಿ ಗ್ರಾಮಸ್ಥರು ಈಗ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಭೀಮನ ಅಮಾವಾಸ್ಯೆ ಪ್ರಯುಕ್ತ ಕೋಡಹಳ್ಳಿಯ ಮಹದೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಜಾತ್ರೆ ನಡೆಯುತ್ತಿದೆ. ಬೆಳಗ್ಗೆ ಬಸ್ ನಲ್ಲಿ ದೇವಸ್ಥಾನಕ್ಕೆ ಹೋಗಿದ್ದ ಗ್ರಾಮಸ್ಥರು ಮರಳುವಾಗ ಟಾಟಾ ಏಸ್ ಹತ್ತಿದ್ದಾರೆ. ಹುಂಡೀಮನೆ ಸಮೀಪದಲ್ಲಿ ಆಟೋ ಮಗುಚಿದೆ. 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಇಬ್ಬರಿಗೆ ಕೈ ಮುರಿದಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ.‌ಇವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ಕರೆತರಲಾಗುತ್ತಿದೆ.

    ಇದನ್ನೂ ಓದಿ: 8,800 ಕೋಟಿ ರೂ. ಹೂಡಿಕೆ, 14 ಸಾವಿರ ಉದ್ಯೋಗ ಸೃಷ್ಟಿ; ಫಾಕ್ಸ್ ಕಾನ್ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ

    ಭೀಮನ ಅಮಾವಾಸ್ಯೆ ಹಿನ್ನೆಲೆಯಲ್ಲಿ ಎಲ್ಲ ದೇವಸ್ಥಾನಗಳು ಸೋಮವಾರ ತುಂಬಿ ತುಳುಕುತ್ತಿವೆ. ಶಕ್ತಿ ಯೋಜನೆಯಿಂದಾಗಿ ಮಹಿಳಾ ಭಕ್ತರ ಸಂಖ್ಯೆ ಹೆಚ್ಚಿದೆ. ಬಸ್​​​​ಗಳಲ್ಲಿ ಜನರು ಕಿಕ್ಕಿರಿದು ತುಂಬಿದ್ದು, ದೇವಸ್ಥಾನದಿಂದ ಗ್ರಾಮಕ್ಕೆ ಮರಳಲು ಬಸ್ ಸಿಗದೆ ಆಟೋ ಹತ್ತಿದ ಗ್ರಾಮಸ್ಥರು ಅಪಘಾತದಲ್ಲಿ ಗಾಯಗೊಂಡು ನೋವು ತಿನ್ನುತ್ತಿದ್ದಾರೆ.

    ಕುಖ್ಯಾತ ಕಳ್ಳ ಖಾಜಪ್ಪ ವಶಕ್ಕೆ; ಮರದ ಮೇಲೆ ಕೂತಿದ್ದವನಿಗೆ 6 ಗಂಟೆ ಕಾದು ಕುಳಿತಿದ್ದ ಪೊಲೀಸರು!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts