More

    ಮಾ.5ರಂದು ರಾಜ್ಯಮಟ್ಟದ ಈಡಿಗ ಸಮಾವೇಶ

    ಶಿವಮೊಗ್ಗ: ‘ಶಕ್ತಿ ಸಾಗರ ಸಂಗಮ’ ಹೆಸರಿನಲ್ಲಿ ಈಡಿಗ, ಬಿಲ್ಲವ, ನಾಮಧಾರಿ, ದೀವರು ಹಾಗೂ 26 ಉಪಪಂಗಡಗಳ ರಾಜ್ಯಮಟ್ಟದ ಸಮಾವೇಶವನ್ನು ಮಾ.5ರಂದು ಸಾಗರದ ಮಾರ್ಕೇಟ್ ಮೈದಾನದಲ್ಲಿ ಏರ್ಪಡಿಸಲಾಗಿದೆ. ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಅಭಿನಂದಿಸಲಾಗುವುದು ಎಂದು ಮಾಜಿ ಸಚಿವ, ಅಭಿನಂದನಾ ಸಮಿತಿ ಸಂಚಾಲಕ ಹರತಾಳು ಹಾಲಪ್ಪ ತಿಳಿಸಿದ್ದಾರೆ.

    ನಮ್ಮ ಸಮಾಜಕ್ಕೆ ಯಡಿಯೂರಪ್ಪ ನೀಡಿದ ಕೊಡುಗೆಯನ್ನು ಸ್ಮರಿಸುವುದು ಸಮಾಜದ ಎಲ್ಲರ ಕರ್ತವ್ಯ. ಅವರು ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದಾಗಲೇ ಅವರ ಸಹಾಯ ಸ್ಮರಿಸಿ ಸನ್ಮಾನಿಸಲು ತೀರ್ಮಾನಿಸಲಾಗಿತ್ತು. ಆದರೆ ಅನಿವಾರ್ಯ ಕಾರಣದಿಂದ ಕಾರ್ಯಕ್ರಮ ಆಯೋಜನೆ ಸಾಧ್ಯವಾಗಿರಲಿಲ್ಲ. ಈಗ ಕಾಲ ಕೂಡಿ ಬಂದಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
    ಕಾರ್ಯಕ್ರಮ ಯಶಸ್ವಿಗೊಳಿಸಲು ರಾಜ್ಯ ಮಟ್ಟದ ಸಂಚಾಲನ ಸಮಿತಿ ರಚಿಸಲಾಗಿದ್ದು, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ಸುನೀಲ್‌ಕುಮಾರ್ ಸೇರಿ ಅನೇಕರು ಜವಾಬ್ದಾರಿ ನಿರ್ವಹಿಸಲಿದ್ದಾರೆ ಎಂದರು.
    ರಾಜ್ಯದ ವಿವಿಧ ಭಾಗಗಳಿಂದ ಸುಮಾರು 50 ಸಾವಿರ ಮಂದಿ ಈ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಸಮಾಜದ ಎಲ್ಲ ಮುಖಂಡರು, ಜನಪ್ರತಿನಿಧಿಗಳನ್ನು ಆಹ್ವಾನಿಸಲಾಗುವುದು. ಸಮಾವೇಶದಲ್ಲಿ ಈಡಿಗ ಸಂಸ್ಕೃತಿಯ ಪ್ರದರ್ಶನವೂ ಇರಲಿದೆ ಎಂದು ತಿಳಿಸಿದರು.
    ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಈಡಿಗ ಸಮಾಜದ ಪ್ರಮುಖರಾದ ಬಿ.ಸ್ವಾಮಿರಾವ್, ಡಾ. ರಾಜನಂದಿನಿ, ಅಶೋಕ್ ಮೂರ್ತಿ, ರಾಜಶೇಖರ್ ಗಾಳಿಪುರ, ಭರ್ಮಪ್ಪ, ಅರುಣ್ ಕುಗ್ವೆ, ರೂಪಾ, ಸುಧಾಕರ್ ಸುದ್ದಿಗೋಷ್ಠಿಯಲ್ಲಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts