More

    436 ಹಳ್ಳಿಗಳಲ್ಲಿ ಕುಡಿವ ನೀರಿಗೆ ತತ್ವಾರ

    ಚಿಕ್ಕಮಗಳೂರು: ಮಳೆ ಇಲ್ಲದೆ ಜಿಲ್ಲೆ ತೀವ್ರ ಸ್ವರೂಪದ ಬರಗಾಲಕ್ಕೆ ತುತ್ತಾಗಿದ್ದು, ಇದೀಗ 436 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆಯಾಗಿದೆ. ಜೂನ್‌ವರೆಗೆ ನೀರು ಸರಬರಾಜು ಮಾಡಲು ಕ್ರಿಯಾಯೋಜನೆ ಸಿದ್ಧಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದರು.
    ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೂರ್ವ ಮುಂಗಾರು ಕಾಲವಾದ ಜನವರಿಯಿಂದ ಈವರೆಗೆ ಶೇಕಡ ಮೈನಸ್ 6ರಷ್ಟು ಕಡಿಮೆ ಪ್ರಮಾಣದ ಮಳೆಯಾಗಿದೆ. ಅಜ್ಜಂಪುರ ಮತ್ತು ತರೀಕೆರೆ ತಾಲೂಕುಗಳಲ್ಲಿ ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದ್ದು, ಎಲ್ಲ ಕೊಳವೆಬಾವಿಗಳು ಬತ್ತಿ ಹೋಗಿವೆ ಎಂದರು.
    ಕಡೂರು, ಅಜ್ಜಂಪುರ, ತರೀಕೆರೆ ತಾಲೂಕುಗಳಲ್ಲಿ ಕುಡಿಯುವ ನೀರಿಗೆ ತೀವ್ರ ಸಮಸ್ಯೆಯಾಗಿದೆ. ಜೂನ್ ತಿಂಗಳವರೆಗೆ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ಸಲುವಾಗಿ ಕ್ರಿಯಾಯೋಜನೆ ಸಿದ್ಧಪಡಿಸಿಕೊಳ್ಳಲಾಗಿದೆ. ತೀವ್ರ ಸಮಸ್ಯೆ ಇರುವ 436 ಹಳ್ಳಿಗಳನ್ನು ಗುರುತಿಸಿದ್ದು, 39 ಗ್ರಾಪಂ ವ್ಯಾಪ್ತಿಯಲ್ಲಿ 95 ಹಳ್ಳಿಗಳಿಗೆ ಈಗಾಗಲೇ 59 ಟ್ಯಾಂಕರ್‌ಗಳ ಮೂಲಕ 150 ಟ್ರಿಪ್ ನೀರು ಸರಬರಾಜು ಮಾಡಲಾಗಿದೆ ಎಂದು ವಿವರಿಸಿದರು.
    ಜಿಲ್ಲಾ ವಿಪತ್ತು ನಿರ್ವಹಣಾ ಕಾರ್ಯಪಡೆ ಹಾಗೂ ರಾಜ್ಯ ವಿಪತ್ತು ನಿಧಿ ವ್ಯಾಪ್ತಿಯಲ್ಲಿ ಬರುವ ಅನುದಾನದಲ್ಲಿ ಹಳೆ ಕೊಳವೆಬಾವಿ ದುರಸ್ತಿ ಹಾಗೂ 160 ಖಾಸಗಿ ಕೊಳವೆಬಾವಿಗಳಿಂದ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗಿದೆ. ತರೀಕೆರೆ ಮತ್ತು ಎನ್.ಆರ್.ಪುರದಲ್ಲಿ 36 ಮಂದಿ ತಮ್ಮ ಖಾಸಗಿ ಬೋರ್‌ವೆಲ್‌ನಿಂದ ಹಣ ಪಡೆಯದೆ ಉಚಿತವಾಗಿ ನೀರು ನೀಡುತ್ತಿದ್ದು, ಇದಕ್ಕಾಗಿ ಜಿಲ್ಲಾಡಳಿತ ಧನ್ಯವಾದ ಅರ್ಪಿಸುತ್ತದೆ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts