More

    ತೌಖ್ತೆ ಚಂಡಮಾರುತ ಎಫೆಕ್ಟ್: ಗಣಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

    ಬಳ್ಳಾರಿ: ಅರಬ್ಬಿ ಸಮುದ್ರದಲ್ಲಿ ಮೇ 15 ರಿಂದ 18ರವರೆಗೆ ಉಂಟಾಗುವ ತೌಖ್ತೆ ಚಂಡಮಾರುತದ ಮುನ್ಸೂಚನೆಯ ಭಾಗವಾಗಿ ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ಈ ವೇಳೆ ಅಂದಾಜು 64.5 ರಿಂದ 114.5 ಮಿಲಿ ಮೀಟರ್ ಮಳೆ ಬೀಳುವ ಸಾಧ್ಯತೆ ಇದೆ. ಎರಡು ಜಿಲ್ಲೆಗಳ ಬಹುತೇಕ ತಾಲೂಕಿನಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಣ್ಣ ಪ್ರಮಾಣದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ವಿವಿಧೆಡೆ ಭಾರಿ ಮಳೆಯೂ ಆಗಬಹುದು. ಗಾಳಿ ಅಧಿಕವಿರಲಿದ್ದು, ಪ್ರತಿ ಗಂಟೆಗೆ 30-40 ಕಿಲೋಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ರೈತರು ಮೇ 18 ರವರೆಗೆ ಮುನ್ಸೂಚನೆಯನ್ನು ಆಧರಿಸಿ ಕೃಷಿ ಚಟುವಟಿಕೆಗಳನ್ನ ಕೈಗೊಳ್ಳಬೇಕೆಂದು ಹಗರಿ ಕೃಷಿ ವಿಜ್ಞಾನ ಕೇಂದ್ರದ ಜಿಲ್ಲಾ ಕೃಷಿ ಹವಾಮಾನ ಘಟಕ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts