ತಾವರಗೇರಾ: ವಿದ್ಯಾರ್ಥಿಗಳು ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಲಿ ಎಂದು ಬಿಇಒ ಸುರೇಂದ್ರ ಕಾಂಬಳೆ ಹೇಳಿದರು.
ಪಟ್ಟಣದ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ಸೋಮವಾರ ಜಿಲ್ಲಾ ಪಂಚಾಯಿತಿ, ಕುಷ್ಟಗಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯ, ದಕ್ಷಿಣ ಕನ್ನಡ ಜಿಲ್ಲೆಯ ಯುನಿವರ್ಸಲ್ ನಾಲೇಡ್ಜ್ ಟ್ರಸ್ಟ್ ಹಾಗೂ ಗ್ರಾಮ ವಿಕಾಸ ಸೊಸೈಟಿ, ಸ್ಥಳೀಯ ಎಸ್.ಎಸ್.ವಿ. ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ತಾವರಗೇರಾ ವಲಯದ 9ನೇ ಹಾಗೂ 10ನೇ ತರಗತಿ ವಿದ್ಯಾರ್ಥಿಗಳಿಗೆ ಸುಲಭ ಕಲಿಕಾ ಕಾರ್ಯಾಗಾರದಲ್ಲಿ ಮಾತನಾಡಿದರು.
ಎಲ್ಲ ಜಿಲ್ಲೆಗಳಲ್ಲೂ ಕಾರ್ಯಾಗಾರ ಆಯೋಜಿಸಲಾಗುತ್ತಿದ್ದು, ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು. ತಾಲೂಕು ಅಕ್ಷರ ದಾಸೋಹ ಇಲಾಖೆ ಸಹಾಯಕ ನಿರ್ದೇಶಕ ಸೋಮನಗೌಡ ಮಾತನಾಡಿದರು. ದ.ಕ.ಜಿಲ್ಲೆಯ ಸಂಪನ್ಮೂಲ ವ್ಯಕ್ತಿ ಅಶ್ವಿನಿ, ವಿಶೇಷ ಉಪನ್ಯಾಸ ನೀಡಿದರು. ಮುಖ್ಯ ಶಿಕ್ಷಕ ಪ್ರಭಾಕರ ಅವರಡ್ಡಿ, ಡಿ.ಆರ್. ಪಾಟೀಲ, ಪ್ರಮುಖರಾದ ನಾಗರಾಜ ಸಂಗನಾಳ, ಕೊಟ್ರಪ್ಪ, ಅಡಿವೆಪ್ಪ ಮೇಟಿ, ಉಷಾ ದಂಡಿನ ಇತರರಿದ್ದರು. ದೈಹಿಕ ಶಿಕ್ಷಣ ಶಿಕ್ಷಕ ಮಲ್ಲಿಕಾರ್ಜುನ ನಿರ್ವಹಿಸಿದರು.