More

  ಇನ್ನೆರಡು ತಿಂಗಳಲ್ಲಿ ಮುರಾರ್ಜಿ ವಸತಿ ಶಾಲೆ ಸ್ಥಳಾಂತರ: ತಾವರಗೇರಾದಲ್ಲಿ ಸಮಾಜ ಕಲ್ಯಾಣ ಇಲಾಖೆ ಡಿಡಿ ಮಾಹಿತಿ

  ತಾವರಗೇರಾ: ಪಟ್ಟಣದ ಮುರಾರ್ಜಿ ವಸತಿ ಶಾಲೆಗೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಚಿದಾನಂದ ಶನಿವಾರ ಭೇಟಿ ನೀಡಿ, ವಿದ್ಯಾರ್ಥಿಗಳ ಸಮಸ್ಯೆ ಆಲಿಸಿದರು. ಕೆಲ ತಿಂಗಳಿಂದ ಹಾಸ್ಟೆಲ್ ವಾರ್ಡನ್ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಈ ಕುರಿತು ಪ್ರಾಚಾರ್ಯರ ಗಮನಕ್ಕೆ ತರಲಾಗಿದೆ. ಕುಡಿವ ನೀರಿನ ಸಮಸ್ಯೆ ಇದೆ. ವಸತಿ ಶಾಲೆಯ ಮಕ್ಕಳ ಆರೋಗ್ಯ ನೋಡಿಕೊಳ್ಳಲು ಆರೋಗ್ಯ ಸಹಾಯಕರಿಲ್ಲ. ಸರಿಯಾಗಿ ಊಟ ಕೊಡುವುದಿಲ್ಲ ಎಂದು ವಿದ್ಯಾರ್ಥಿಗಳು ತಿಳಿಸಿದರು. ಉಪನಿರ್ದೇಶಕ ಚಿದಾನಂದ ಮಾತನಾಡಿ, ಇನ್ನೆರಡು ತಿಂಗಳಲ್ಲಿ ನೂತನ ಕಟ್ಟಡಕ್ಕೆ ಶಾಲೆ ಸ್ಥಳಾಂತರಗೊಳ್ಳಲಿದೆ . ಅಲ್ಲಿವರೆಗೆ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು. ಪಪಂ ಸದಸ್ಯ ಶ್ಯಾಮೂರ್ತಿ ಅಂಚಿ , ಪ್ರಾಚಾರ್ಯ ವಿನೋದ ಹಿರೇಮಠ, ಕನ್ನಡ ಸೇನೆ ಕರ್ನಾಟಕ ಸಂಘಟನೆ ಜಿಲ್ಲಾಧ್ಯಕ್ಷ ಅಮರೇಶ ಕುಂಬಾರ ಇತರರಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts